ಜಿಲ್ಲಾ ವೈದ್ಯಾಧಿಕಾರಿಗಳಿಗೆ ಜನ ತರಾಟೆ
ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರ ಆಕ್ರೋಶ • ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ವೈದ್ಯರಿಂದ ಸರಿಯಾಗಿ ಸಿಗುತ್ತಿಲ್ಲ ಚಿಕಿತ್ಸೆ
Team Udayavani, Jul 24, 2019, 11:51 AM IST
ಸಿಂಧನೂರು: ನಗರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ವೈದ್ಯಾಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.
ಸಿಂಧನೂರು: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೌಲಭ್ಯ ಕೊರತೆ, ಸಮರ್ಪಕ ಚಿಕಿತ್ಸೆ ದೊರೆಯದಿರುವ ಬಗ್ಗೆ ಸಾರ್ವಜನಿಕರು ಆಸ್ಪತ್ರೆಗೆ ಭೇಟಿ ನೀಡಿದ್ದ ಜಿಲ್ಲಾ ವೈದ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಪ್ರಸಂಗ ಮಂಗಳವಾರ ನಡೆಯಿತು.
ಜಿಲ್ಲಾ ವೈದ್ಯಾಧಿಕಾರಿ ಡಾ| ಎಂ.ಕೆ.ಎಸ್. ನಸೀರ್, ಮಲೇರಿಯಾ ಜಿಲ್ಲಾ ವೈದ್ಯಾಧಿಕಾರಿ ಗಣೇಶ ಮಂಗಳವಾರ ನಗರದ ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರು, ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡರು.
ದಾವಲಪಾಷಾ ಮಾತನಾಡಿ, ಆಸ್ಪತ್ರೆಯಲ್ಲಿ ಚಿಕ್ಕಮಕ್ಕಳ ಚಿಕಿತ್ಸೆಗೆ ಸರಿಯಾದ ಸೌಲಭ್ಯವಿಲ್ಲ. ಒಳಗಡೆ ಬಂದರೆ ಉಸಿರುಗಟ್ಟುವ ವಾತಾವರಣ ಇದೆ. ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ವೈದ್ಯರೇ ಇಲ್ಲಿದ್ದಾರೆ. ಸಕಾಲದಲ್ಲಿ ವೈದ್ಯರು ಬಾರದ್ದರಿಂದ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ ಎಂದು ದೂರಿದರು.
ಜಿಪಂ ಸದಸ್ಯ ಬಾಬುಗೌಡ ಬಾದರ್ಲಿ ಮಾತನಾಡಿ, ತಾಲೂಕಿನ ನೂರಾರು ಬಡ ರೋಗಿಗಳು ಸರ್ಕಾರಿ ಆಸ್ಪತ್ರೆಯನ್ನೇ ಅವಲಂಬಿಸಿದ್ದಾರೆ. ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಜನರೇಟರ್ ವ್ಯವಸ್ಥೆ ಇಲ್ಲ, ಸ್ವಚ್ಛತೆ ಮಾಯವಾಗಿದೆ. ಇಲ್ಲಿಗೆ ರೋಗಿಗಳು ಬಂದರೆ ಕಾಯಿಲೆ ಕಡಿಮೆಯಾಗುವ ಬದಲು ಹೆಚ್ಚಾಗುವ ವಾತಾವರಣ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಕುಡಿಯುವ ನೀರಿನ ಅರ್ಧ ಖರ್ಚು ಭರಿಸುವೆ, ಕೂಡಲೇ ನೀರಿನ ವ್ಯವಸ್ಥೆ ಮಾಡಿ ಎಂದು ತಾಕೀತು ಮಾಡಿದರು.
ಜಿಪಂ ಸದಸ್ಯ ಬಸವರಾಜ ಹಿರೇಗೌಡರ ಮಾತನಾಡಿ, ಮೇಲಾಧಿಕಾರಿಗಳು ವೈದ್ಯರನ್ನು ನೇಮಿಸಿದ್ದರೂ ವೈದ್ಯರು ಬಡ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡುತ್ತಿಲ್ಲ. ಈ ಬಗ್ಗೆ ಗ್ರಾಮೀಣ ಜನರಿಂದ ದೂರು ಬರುತ್ತಿವೆ ಎಂದರು.
ನಗರಸಭೆ ಪೌರಾಯುಕ್ತ ಆರ್.ವಿರುಪಾಕ್ಷಮೂರ್ತಿ ಮಾತನಾಡಿ, ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಇಲಾಖೆಯೇ ಸೌಲಭ್ಯ ಕಲ್ಪಿಸಬೇಕು. ಸಾರ್ವಜನಿಕರಿಗೋಸ್ಕರ ಪುರಸಭೆಯಿಂದ ಕೊಳವೆಬಾವಿ ಕೊರೆಸಿ ನೀರಿನ ಅನುಕೂಲ ಮಾಡಿಕೊಡಲಾಗುವುದು ಎಂದರು.
ಜಿಲ್ಲಾ ವೈದ್ಯಾಧಿಕಾರಿ ಎಂ.ಕೆ.ಎಸ್. ನಾಸೀರ್ ಮಾತನಾಡಿ, ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ನಮ್ಮ ತಂಡ ಜಿಲ್ಲೆಯ ಎಲ್ಲ ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದೆ. ಸಿಂಧನೂರು ಆಸ್ಪತ್ರೆಗೆ ಹೆಚ್ಚಿನ ಸೌಲಭ್ಯ ಒದಗಿಸಲು ಮೇಲಾಧಿಕಾರಿಗಳಿಗೆ ಮನವಿ ಮಾಡಲಾಗುವುದು. ಕುಡಿಯುವ ನೀರಿನ ವ್ಯವಸ್ಥೆ ಹಾಗೂ 32 ಕೆವಿ ಜನರೇಟರ್ ವ್ಯವಸ್ಥೆ, ಐಸಿಯು, ಗರ್ಭಿಣಿಯರಿಗೆ ಮೂಲ ಸೌಕರ್ಯ ಒದಗಿಸಲು ಕ್ರಮ ವಹಿಸಲಾಗುವುದು. ವೈದ್ಯರು ಸರ್ಕಾರಿ ಆಸ್ಪತ್ರೆ ವೇಳೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡಿದರೆ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು. ಹೆರಿಗೆ ಆದ ನಂತರ ವೈದ್ಯರು ಅಥವಾ ನರ್ಸ್, ಸಿಬ್ಬಂದಿ ಹಣ ಪಡೆದರೆ ಅವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಭರವಸೆ ನೀಡಿದರು.
ತಾಲೂಕು ವೈದ್ಯಾಧಿಕಾರಿ ನರಸಿಂಹಲು ಮಾತನಾಡಿ, ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲು ಮೇಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ತಾಲೂಕು ಆಸ್ಪತ್ರೆಯಿಂದ ಯಾರೂ ವರ್ಗ ಆಗುತ್ತಿಲ್ಲ. ಇಲ್ಲಿ ಸಿಬ್ಬಂದಿಗಳ ಕೊರತೆ ಇರುವುದರಿಂದ ಯಾರಿಗೂ ವರ್ಗಾವಣೆಯಾಗಲು ಅನುಮತಿ ನೀಡಿಲ್ಲ ಎಂದರು. ಮಲೇರಿಯಾ ಜಿಲ್ಲಾ ವೈದ್ಯಾಧಿಕಾರಿ ಗಣೇಶ, ವೈದ್ಯರಾದ ನಾಗರಾಜ ಪಾಟೀಲ, ನಾಗರಾಜ ಕಾಟ್ವಾ, ಸಂಘಟನೆ ಮುಖಂಡರಾದ ನಾಗರಾಜ, ಪಂಪಾಪತಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.