ಕಾಯಕ ಮಹತ್ವ ಸಾರಿದವರು ಹಡಪದ ಅಪ್ಪಣ್ಣ
ಶರಣ ಹಡಪದ ಅಪ್ಪಣ್ಣ ಭಾವಚಿತ್ರ ಅದ್ಧೂರಿ ಮೆರವಣಿಗೆ •ಸಮಾಜದ ಗಣ್ಯರು-ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
Team Udayavani, Jul 17, 2019, 3:52 PM IST
ಸಿಂಧನೂರು: ಹಡಪದ ಅಪ್ಪಣ್ಣ ಜಯಂತ್ಯುತ್ಸವ ಕಾರ್ಯಕ್ರಮವನ್ನು ಸಾಹಿತಿ ಸಿ.ಎಚ್. ನಾರನಾಳ ಉದ್ಘಾಟಿಸಿದರು.
ಸಿಂಧನೂರು: 12ನೇ ಶತಮಾನದಲ್ಲಿ ಬಸವಣ್ಣನವರ ಸಮಾನಕಾಲೀನರಾದ ಶಿವಶರಣ ಹಡಪದ ಅಪ್ಪಣ್ಣನವರು ಕಾಯಕಕ್ಕೆ ಹೆಚ್ಚು ಮಹತ್ವ ಕೊಟ್ಟಿದ್ದರು. ನುಡಿದಂತೆ ನಡೆದ ಅವರು ಕಾಯಕದ ಮಹತ್ವ ಸಾರಿದ್ದಾರೆ ಎಂದು ಸಾಹಿತಿ ಸಿ.ಎಚ್.ನಾರನಾಳ ಹೇಳಿದರು.
ತಾಲೂಕು ಆಡಳಿತದಿಂದ ಮಂಗಳವಾರ ನಗರದ ಸ್ತ್ರೀಶಕ್ತಿ ಭವನದಲ್ಲಿ ನಡೆದ ಹಡಪದ ಅಪ್ಪಣ್ಣ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಪ್ಪಣ್ಣನವರು ಬಸವಣ್ಣನವರ ಆತ್ಮೀಯ ಶರಣರಾಗಿದ್ದರು. ಅವರ ಕಾಯಕ ನಿಷ್ಠೆಯೇ ಅವರ ಬೆಳವಣಿಗೆಗೆ ಪೂರಕವಾಗಿತ್ತು. ಅಂತಹ ಮಹಾನ್ ಶರಣರ ಸಮುದಾಯದವರಾದ ಹಡಪದ ಸಮಾಜ ಅವರ ಮಾರ್ಗದಲ್ಲಿ ಸಾಗಬೇಕು. ಕಾಯಕದ ಬಗ್ಗೆ ಗೌರವ ಬೆಳೆಸಿಕೊಳ್ಳಬೇಕು. ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಿದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದರು.
ತಹಶೀಲ್ದಾರ್ ಶಿವಾನಂದ ಸಾಗರ ಮಾತನಾಡಿ, ಪ್ರತಿಯೊಬ್ಬರು ಹಡಪದ ಅಪ್ಪಣ್ಣನವರ ವಚನಗಳನ್ನು ಓದಿ ಅದರಲ್ಲಿ ತತ್ವ, ಸಂದೇಶ ಪಾಲಿಸಬೇಕು. 12ನೇ ಶತಮಾನದ ಶರಣ, ಶರಣೆಯರು ತೋರಿದ ಮಾರ್ಗದಲ್ಲಿ ಇಂದಿನ ಯುವ ಪೀಳಿಗೆ ಸಾಗಬೇಕಿದೆ ಎಂದರು.
ಬಸವಕೇಂದ್ರದ ಗೌರವ ಸಲಹೆಗಾರ ಪಿ.ವೀರಭದ್ರಪ್ಪ ಕುರುಕುಂದಿ, ಹಡಪದ ಸಮಾಜ ಅಧ್ಯಕ್ಷ ಮರಿಯಪ್ಪ ಉಪ್ಪಲದೊಡ್ಡಿ ಮಾತನಾಡಿದರು
ಬಸವಕೇಂದ್ರದ ಅಧ್ಯಕ್ಷ ನಾಗಭೂಷಪ್ಪ ನವಲಿ, ದುರುಗಪ್ಪ ಹಸಮಕಲ್, ಶಿರಸ್ತೇದಾರ ಅಂಬಾದಾಸ್, ಅಂಬರೀಷ, ವೀರೇಶ ಸಾಲಿಮಠ ಮತ್ತಿತರರು ಇದ್ದರು. ನಂತರ ಹಡಪದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಮೆರವಣಿಗೆ: ಕಾರ್ಯಕ್ರಮಕ್ಕೂ ಮುನ್ನ ಇಂದಿರಾ ನಗರದಿಂದ ಸ್ತ್ರೀಶಕ್ತಿ ಭವನದವರೆಗೆ ಹಡಪದ ಅಪ್ಪಣ್ಣನವರ ಭಾವಚಿತ್ರ ಮೆರವಣಿಗೆ ನಡೆಸಲಾಯಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
MUST WATCH
ಹೊಸ ಸೇರ್ಪಡೆ
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.