ಹೊಸ ಮೀಟರ್ ಅಳವಡಿಕೆಗೆ ಸದಸ್ಯರ ಆಕ್ಷೇಪ
ಜೆಸ್ಕಾಂ ಹೊಸ ಮೀಟರ್ ಅಳವಡಿಕೆಯಿಂದ ಗ್ರಾಹಕರಿಗೆ ಹೆಚ್ಚಿನ ಬಿಲ್ • ಗ್ರಾಮಗಳಲ್ಲಿ ಸೌಲಭ್ಯ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ
Team Udayavani, Jul 31, 2019, 3:03 PM IST
ಸಿಂಧನೂರು: ತಾಲೂಕು ಪಂಚಾಯಿತಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷೆ ಲಕ್ಷ್ಮೀ ಗುರಿಕಾರ ಮಾತನಾಡಿದರು.
ಸಿಂಧನೂರು: ಜೆಸ್ಕಾಂ ಇಲಾಖೆ ಗ್ರಾಮೀಣ ಪ್ರದೇಶಗಳಲ್ಲಿ ಹಳೆ ಮೀಟರ್ ತೆಗೆದು ಹೊಸ ಮೀಟರ್ ಅಳವಡಿಸಿದೆ. ಹೊಸ ಮೀಟರ್ ಅಳವಡಿಕೆ ನಂತರ ಹಳೆ ಮೀಟರ್‌ಗೆ ಹೋಲಿಸಿದರೆ ಹೆಚ್ಚಿನ ಬಿಲ್ ಬರುತ್ತಿದೆ. ಇದನ್ನು ನೋಡಿದರೆ ಜೆಸ್ಕಾಂ ಗ್ರಾಹಕರಿಗೆ ಬರೆ ಹಾಕುವ ಜತೆಗೆ ಹಣ ಲೂಟಿ ಹೊಡೆಯುತ್ತಿದೆ ಎಂದು ತಾಪಂ ಸದಸ್ಯರು ಹರಿಹಾಯ್ದರು.
ತಾಲೂಕು ಪಂಚಾಯಿತಿಯಲ್ಲಿ ಮಂಗಳವಾರ ಅಧ್ಯಕ್ಷೆ ಲಕ್ಷ್ಮೀ ಅಮರೇಶ ಗುರಿಕಾರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯ ನರಸಿಂಹ ಮಾತನಾಡಿ, ಜೆಸ್ಕಾಂ ಗ್ರಾಮೀಣ ಪ್ರದೇಶದಲ್ಲಿ ಡಿಜಿಟಲ್ ಮೀಟರ್ ಅಳವಡಿಸಿದೆ. ಈ ಮೀಟರ್‌ವೇಗವಾಗಿ ಓಡುವುದರಿಂದ ಬಿಲ್ನಲ್ಲಿ ಭಾರೀ ವ್ಯತ್ಯಾಸ ಆಗುತ್ತಿದೆ. ಬಿಲ್ ಹೊರೆಗೆ ಬೆಚ್ಚಿದ ಗ್ರಾಮೀಣ ಬಡ ಜನತೆ ಮೊಂಬತ್ತಿ ಬೆಳಕಿನಲ್ಲಿ ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಮಾನ್ಯ ಕುಟುಂಬವೊಂದಕ್ಕೆ ತಿಂಗಳಿಗೆ ಸಾವಿರದಿಂದ ಎರಡೂವರೆ ಸಾವಿರ ರೂ.ವರೆಗೆ ಬಿಲ್ ಬರುತ್ತಿದೆ. ಹಾಗಾಗಿ ಜೆಸ್ಕಾಂ ಇಲಾಖೆಯವರು ಡಿಜಿಟಲ್ ಮೀಟರ್ ಹಾಕಿ ಗ್ರಾಹಕರಿಂದ ಹಣ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಕೂಡಲೇ ಡಿಜಿಟಲ್ ಮೀಟರ್ ತೆಗೆದು ಪುನಃ ಹಳೆ ಮೀಟರ್ ಅಳವಡಿಸಬೇಕೆಂದು ಆಗ್ರಹಿಸಿದರು.
ಇದಕ್ಕೆ ಸ್ಪಷ್ಟನೆ ನೀಡಿದ ಜೆಸ್ಕಾಂ ಅಧಿಕಾರಿ, ಡಿಜಿಟಲ್ ಮೀಟರ್ ಅಳವಡಿಕೆಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ಒಂದು ವೇಳೆ ಹೆಚ್ಚಿಗೆ ಬಿಲ್ ಬಂದಿದ್ದರೆ ಅಂತಹ ಗ್ರಾಮಗಳಿಗೆ ಮೇಲಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಾರೆ ಎಂದರು.
ಆಧಾರ್ ಸಮಸ್ಯೆ ಪರಿಹರಿಸಿ: ತಿಡಿಗೋಳ ಕ್ಷೇತ್ರದ ಸದಸ್ಯೆ ನಾಗರತ್ನ ಮಾತನಾಡಿ, ಆಧಾರ್ ನೋಂದಣಿ, ತಿದ್ದುಪಡಿ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ರಾಮೀಣ ಜನತೆ ನಿತ್ಯ ಅಲೆದಾಡುವಂತಾಗಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದರು.
ತಾಪಂ ಮಾಜಿ ಅಧ್ಯಕ್ಷೆ ಬಸಮ್ಮ ಮಾತನಾಡಿ, ರಾಮತ್ನಾಳ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದೆ. ಪಿಡಿಒಗಳು ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿದರು.
ಸದಸ್ಯ ಹನುಮಂತ ಮಾತನಾಡಿ, ಸಾಲಗುಂದಾದಲ್ಲಿ 5 ಮತ್ತು 6ನೇ ವಾರ್ಡ್‌ಗೆ ನೀರು ಸರಿಯಾಗಿ ಬರುತ್ತಿಲ್ಲ. ಗ್ರಾಮ ಸಮಸ್ಯೆಗಳ ತಾಣವಾಗಿದೆ. ಪಿಡಿಒಗಳು ಸಮಸ್ಯೆ ಪರಿಹರಿಸದೇ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ದೂರಿದರು.
ಸ್ಥಾಯಿ ಸಮಿತಿ ಅಧ್ಯಕ್ಷ ಈಶಪ್ಪ ದೇಸಾಯಿ ಮಾತನಾಡಿ, ಎಲ್ಲ ಗ್ರಾಮಗಳಲ್ಲಿರುವ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಿಕೊಳ್ಳುವ ಸಂದರ್ಭದಲ್ಲಿ ಸುತ್ತಲೂ ಬ್ಲೀಚಿಂಗ್ ಪೌಡರ್ ಹಾಕಬೇಕು. ಶುದ್ಧೀಕರಣ ಘಟಕಗಳನ್ನು ದುರಸ್ತಿ ಮಾಡಿಸಬೇಕು ಎಂದು ಆಗ್ರಹಿಸಿದರು.
ತಾಪಂ ಅಧ್ಯಕ್ಷೆ ಲಕ್ಷ್ಮೀ ಗುರಿಕಾರ ಮಾತನಾಡಿ, ಎಲ್ಲ ಗ್ರಾಮಗಳಲ್ಲಿ ಅಂಗನವಾಡಿ, ಆರೋಗ್ಯ, ಶೌಚಾಲಯ, ವಸತಿ ಇನ್ನಿತರ ಮೂಲ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಗಮನಹರಿಸಬೇಕು. ತಾಪಂ ಸದಸ್ಯರ ಗಮನಕ್ಕೆ ಇಲ್ಲದೆ ಯಾವುದೇ ಕೆಲಸ ಮಾಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಬಾಬು ರಾಠೊಡ ಮಾತನಾಡಿ, ಎಲ್ಲ ಗ್ರಾಮಗಳಲ್ಲಿನ ಕುಡಿಯುವ ನೀರಿನ ಕೆರೆ ಭರ್ತಿ ಮಾಡಲಾಗಿದೆ. ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಅಭಿವೃದ್ಧಿ ಕಾರ್ಯಕ್ಕೆ ಸದಸ್ಯರ ಸಹಕಾರ ಅಗತ್ಯ ಎಂದರು.
ಕೆಲ ನಿಮಿಷ ನಿಂತಿದ್ದ ಸದಸ್ಯೆ: ಸಭೆ ಆರಂಭವಾಗಿ ಹತ್ತು ನಿಮಿಷ ತಡವಾಗಿ ಬಂದಿದ್ದ ಸದಸ್ಯೆಯೊಬ್ಬರಿಗೆ ಕುಳಿತುಕೊಳ್ಳಲು ಆಸನ ಇಲ್ಲದ್ದರಿಂದ ಕೆಲ ನಿಮಿಷ ನಿಂತುಕೊಂಡಿದ್ದರು. ನಂತರ ತಾಪಂ ಕಾ.ನಿ. ಅಧಿಕಾರಿ ಕುರ್ಚಿ ಹಾಕಿಸಿದ ನಂತರ ಸದಸ್ಯೆ ಕುಳಿತರು.
ತಾಪಂ ಉಪಾಧ್ಯಕ್ಷೆ ಕರಿಯಮ್ಮ, ಸದಸ್ಯರಾದ ಉದಯಗೌಡ, ನಿಂಗಪ್ಪ, ಶರಣಪ್ಪ, ಶೇಖರಪ್ಪ, ಗುರುರಾಜ, ಶರಣಮ್ಮ, ಯಮನಮ್ಮ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.