ನರೇಗಾ ಯೋಜನೆಯಿಂದ ಕೂಲಿಕಾರರಿಗೆ ಅನುಕೂಲ
309 ಜನರಿಗೆ ಉದ್ಯೋಗ ಅವಕಾಶ
Team Udayavani, Apr 27, 2019, 4:38 PM IST
ಸಿರುಗುಪ್ಪ: ತಾಲೂಕಿನ ಕುರುವಳ್ಳಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸ ಕೆರೆ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಕೂಲಿ ಕಾರ್ಮಿಕರು.
ಸಿರುಗುಪ್ಪ: ತಾಲೂಕಿನಲ್ಲಿ ಬರಗಾಲ ಆವರಿಸಿದ್ದು, ಜನ ಉದ್ಯೋಗ ಖಾತ್ರಿ ಯೋಜನೆಯಡಿ ಜನರು ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ. ತಾಲೂಕಿನ ಕುರುವಳ್ಳಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸ ಕೆರೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಕೂಲಿ ಕಾರ್ಮಿಕರೇ ಈ ಕಾರ್ಯದಲ್ಲಿ ತೊಡಗಿದ್ದಾರೆ.
ಮೂರು ಎಕರೆ ಪ್ರದೇಶದಲ್ಲಿ ಹೊಸ ಕೆರೆ ನಿರ್ಮಾಣವಾಗುತ್ತಿದ್ದು, ನರೇಗಾ ಯೋಜನೆಯಡಿ 309 ಜನರಿಗೆ ಉದ್ಯೋಗ ನೀಡಲು ಎನ್.ಎಂ.ಆರ್. ತೆಗೆಯಲಾಗಿದೆ. ಕಳೆದ ಎರಡು ದಿನಗಳಿಂದ ಕೆರೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ತಾಲೂಕಿನ ಮಾಳಾಪುರ ಮತ್ತು ಗುಂಡಿಗನೂರು ಗ್ರಾಮದ ಕೆರೆಗಳಲ್ಲಿರುವ ಹೂಳೆತ್ತುವ ಕಾರ್ಯ ನಡೆದಿದ್ದು, ವೈಯಕ್ತಿಕ ಕೃಷಿ ಹೊಂಡ ನಿರ್ಮಾಣ, ಬದು ನಿರ್ಮಾಣ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿರುವುದರಿಂದ ತಾಲೂಕಿನ ರೈತರು ತಮ್ಮ ಹೊಲಗಳಲ್ಲಿ ಕೃಷಿ ಹೊಂಡ ಮತ್ತು ಬದುಗಳ ನಿರ್ಮಾಣ ಕಾರ್ಯ ಕೈಗೊಂಡಿದ್ದಾರೆ. ತಾಲೂಕಿನ ತಾಳೂರು, ಗುಂಡಿಗನೂರು, ಕುಡುದರಹಾಳು ಗ್ರಾಮ ಸೇರಿದಂತೆ ಇತರೆ ಗ್ರಾಮಗಳಲ್ಲಿ ನರೇಗಾ ವೈಯಕ್ತಿಕ ಕಾಮಗಾರಿ ಯೋಜನೆಯಡಿ ರೈತರ ಹೊಲಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ.
ತಾಲೂಕಿನ 27 ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಒಟ್ಟು 7,608 ಕೂಲಿ ಆಳುಗಳಿಗೆ ಎನ್.ಎಂ.ಆರ್. ಜನರೇಟ್ ಆಗಿದ್ದು, ಇಲ್ಲಿಯವರೆಗೆ 80,490 ಮಾನವ ದಿನಗಳನ್ನು ಸೃಜಿಸಲಾಗಿದೆ ಎಂದು ನರೇಗಾ ತಾಲೂಕು ನಿರ್ದೇಶಕಿ ಎಚ್.ಕೆ.ನಿರ್ಮಲ ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.