ಹಳೆ ಕಟ್ಟಡದ ಸಾಮಗ್ರಿ ಬಳಕೆಗೆ ಅಧಿಕಾರಿಗಳ ನಿರ್ಲಕ್ಷ್ಯ
ಪಾಳು ಬಿದ್ದ ಹಾಸ್ಟೆಲ್ ಕಟ್ಟಡ : ನಿರುಪಯುಕ್ತವಾದ ಸಾಮಾಗ್ರಿಗಳು
Team Udayavani, Apr 26, 2019, 10:47 AM IST
ಸಿರವಾರ: ದೇವರಾಜ ಅರಸು ಹಿಂದುಳಿದ ವರ್ಗದ ವಸತಿ ನಿಲಯದ ಹಳೆ ಕಟ್ಟಡ
ಸಿರವಾರ: ಪಟ್ಟಣದಲ್ಲಿ ಸುಮಾರು 40 ವರ್ಷಗಳ ಹಿಂದೆ ನಿರ್ಮಿಸಿದ್ದ ದೇವರಾಜ ಅರಸು ಹಿಂದುಳಿದ ವರ್ಗದ ವಸತಿ ನಿಲಯ ಕಟ್ಟಡ ಶಿಥಿಲಗೊಂಡಿದ್ದರಿಂದ ವಸತಿ ನಿಲಯವನ್ನು ಖಾಸಗಿ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಆದರೆ ಕಟ್ಟಡದಲ್ಲಿನ ಕಬ್ಬಿಣದ ಮಂಚ, ನೀರೆತ್ತುವ ಮೋಟರ್‌ಗಳನ್ನು ಇಲಾಖೆ ಬಳಸಿಕೊಳ್ಳಲು ನಿರ್ಲಕ್ಷ್ಯ ವಹಿಸಿದ್ದರಿಂದ ತುಕ್ಕು ಹಿಡಿದು ಹಾಳಾಗಿವೆ.
ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲು 40 ವರ್ಷಗಳ ಹಿಂದೆ ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆ ಆವರಣದಲ್ಲಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಕಟ್ಟಡ ನಿರ್ಮಿಸಿತ್ತು. ಆದರೆ ಕಟ್ಟಡದ ನಿರ್ವಹಣೆ ಇಲ್ಲದೇ ಪಾಳು ಬಿದ್ದು ಶಿಥಿಲಾವಸ್ಥೆಗೆ ತಲುಪಿತ್ತು. ಆರು ವರ್ಷಗಳ ಹಿಂದೆ 7 ಲಕ್ಷ ರೂ. ಅನುದಾನದಲ್ಲಿ ಕ್ಯಾಶುಟೆಕ್ ಸಂಸ್ಥೆಯಿಂದ ದುರಸ್ತಿ ಮಾಡಿಸಲಾಗಿತ್ತು. ಆದರೂ ಕಟ್ಟಡ ಶಿಥಿಲಾವಸ್ಥೆ ತಲುಪಿದ್ದರಿಂದ ಎರಡು ವರ್ಷಗಳ ಹಿಂದೆ ವಸತಿ ನಿಲಯವನ್ನು ರಾಯಚೂರು ಮುಖ್ಯ ರಸ್ತೆಯಲ್ಲಿನ ಖಾಸಗಿ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸರ್ಕಾರ, ಸಮಾಜ ಕಲ್ಯಾಣ ಇಲಾಖೆ ಪಾಳುಬಿದ್ದ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗದ್ದರಿಂದ ಪ್ರತಿ ತಿಂಗಳು ಲಕ್ಷಾಂತರ ರೂ. ಬಾಡಿಗೆಗೆ ವ್ಯಯಿಸುವಂತಾಗಿದೆ.
ಸ್ಥಳಾಂತರಗೊಳ್ಳದ ಸಾಮಗ್ರಿ: ಇನ್ನು ಹಳೆ ಕಟ್ಟಡದಲ್ಲಿ ಮಂಚ, ನೀರೆತ್ತುವ ಮೋಟರ್ ಮತ್ತು ಹಾಸಿಗೆ, ದಿಂಬುಗಳಿವೆ. ವಸತಿ ನಿಲಯವನ್ನು ಖಾಸಗಿ ಕಟ್ಟಡಕ್ಕೆ ಸ್ಥಳಾಂತರಿಸಿದ ನಂತರ ಕಟ್ಟಡದಲ್ಲಿನ ಮಂಚ, ಮೋಟರ್, ಹಾಸಿಗೆ ದಿಂಬುಗಳನ್ನು ಸ್ಥಳಾಂತರಿಸದೇ ಬಿಡಲಾಗಿದೆ. ಹೀಗಾಗಿ ಇವುಗಳು ಎರಡು ವರ್ಷಗಳಿಂದ ಪಾಳು ಬಿದ್ದ ಕಟ್ಟಡದಲ್ಲೇ ಹಾಳಾಗಿ ನಿರುಪಯುಕ್ತವಾಗಿವೆ. ಇದಕ್ಕೆ ವಸತಿ ನಿಲಯ ಮತ್ತು ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಅನೈತಿಕ ಚಟುವಟಿಕೆ ತಾಣ: ವಸತಿ ನಿಲಯದ ಹಳೆ ಕಟ್ಟಡ ಇದೀಗ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ರಾತ್ರಿ ಇಲ್ಲಿ ಪುಂಡ, ಪೋಕರಿಗಳು ಮದ್ಯ ಸೇವಿಸಲು, ಅನೈತಿಕ ಚಟುವಟಿಕೆ ನಡೆಸುತ್ತಾರೆ. ಇದಕ್ಕೆ ಕಡಿವಾಣ ಹಾಕಬೇಕೆಂದು ಸುತ್ತಲಿನ ನಿವಾಸಿಗಳು ಆಗ್ರಹಿಸಿದ್ದಾರೆ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಹಳೆ ಕಟ್ಟಡದಲ್ಲಿ ಸಾಮಗ್ರಿಗಳ ಬಳಕೆಗೆ ಮುಂದಾಗಬೇಕು. ಪಾಳುಬಿದ್ದ ಕಟ್ಟಡದ ದುರಸ್ತಿಗೆ ಮುಂದಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ನೂತನ ಖಾಸಗಿ ಕಟ್ಟಡದಲ್ಲಿ ಸ್ಥಳದ ಅಭಾವವಿರುವುದರಿಂದ ಸಾಮಗ್ರಿಗಳನ್ನು ಹಳೆ ಕಟ್ಟಡದಲ್ಲೇ ಬಿಡಲಾಗಿದೆ. ಒಂದು ವಾರದಲ್ಲಿ ಅವುಗಳನ್ನು ಖಾಸಗಿ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು.
•ಜಿ.ಎನ್.ಕ್ಯಾಡಿ,
ಹಿಂದುಳಿದ ವರ್ಗಗಳ ಇಲಾಖೆ ತಾಲೂಕು ಅಧಿಕಾರಿ
•ಮಹೇಶ ಪಾಟೀಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
ನ.8 ರಂದು ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭ
MUST WATCH
ಹೊಸ ಸೇರ್ಪಡೆ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.