ಮಠ ಅಭಿವೃದ್ಧಿಗೆ ಸಹಕಾರ ಅಗತ್ಯ
ಸಾಮಾಜಿಕ-ಧಾರ್ಮಿಕ ಕಾರ್ಯಗಳಿಗೆ ಸಮುದಾಯ ಭವನ ಬಳಕೆ ಆಗಲಿ: ಸ್ವಾಮೀಜಿ
Team Udayavani, Jun 6, 2019, 3:23 PM IST
ಸಿರವಾರ: ನವಲಕಲ್ ಬೃಹನ್ಮಠ ಉದ್ಘಾಟನೆ ಮತ್ತು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ವಿವಿಧ ಮಠಾಧೀಶರು ಚಾಲನೆ ನೀಡಿದರು.
ಸಿರವಾರ: ಸಮೀಪದ ನವಲಕಲ್ ಬೃಹನ್ಮಠದಲ್ಲಿ ನಿರ್ಮಿಸಿದ ಸಮುದಾಯ ಭವನದ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಬುಧವಾರ ನಡೆಯಿತು.
ರಾಯಚೂರು ಕಿಲ್ಲೆ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸಮುದಾಯ ಭವನಗಳಿಂದ ಬಡವರಿಗೆ ಮದುವೆ ಹಾಗೂ ಇನ್ನಿತರೆ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ. ಮಠ ಮಾನ್ಯಗಳಲ್ಲಿ ದಿನನಿತ್ಯ ವಿವಿಧ ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನೆರವೇರುತ್ತವೆ. ಇದಕ್ಕೆ ಸಮುದಾಯ ಭವನ ಅಗತ್ಯ ಇದೆ. ಮಠದ ಅಭಿವೃದ್ಧಿಗೆ ಭಕ್ತರ ಸಹಕಾರವೂ ಅಗತ್ಯ. ಈ ನಿಟ್ಟಿನಲ್ಲಿ ಈ ಕಟ್ಟಡಕ್ಕೆ ಅನುದಾನ ನೀಡಿದ ಎಂ.ಎಲ್.ಸಿ ಬೋಸರಾಜ್ ಅವರ ಕಾರ್ಯ ಶ್ಲಾಘನೀಯ ಎಂದರು.
ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜ್ ಮಾತನಾಡಿ, ರಾಜ್ಯ ಸರ್ಕಾರವು ಬಡವರ ಅನುಕೂಲಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿಯೊಂದು ಗ್ರಾಮಗಳಲ್ಲಿ ಸಮುದಾಯ ಭವನಗಳನ್ನು ನಿರ್ಮಿಸುತ್ತಿದೆ. ಮಠಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗಾಗಿ ಕೆಬಿಜೆಎನ್‌ಎಲ್ ಯೋಜನೆಯಡಿ ಸಮುದಾಯ ಭವನ ನಿರ್ಮಾಣ ಮಾಡಲಾಗಿದೆ. ಜನತೆ ಇದರ ಪ್ರಯೋಜನ ಪಡೆಯಬೇಕು ಎಂದರು.
ನೀಲಗಲ್ನ ಡಾ| ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ, ಗಬ್ಬೂರಿನ ಬೂದಿಬಸವ ಶಿವಾಚಾರ್ಯ ಸ್ವಾಮೀಜಿ, ಕಾರ್ಜೋಹಳ್ಳಿಯ ಶ್ರೀ ಶಂಭುಲಿಂಗ ಸ್ವಾಮೀಜಿ, ದೇವಾಪುರದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ನೀಲಗಲ್ ಬೃಹನ್ಮಠದ ರೇಣುಕಾ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ವೀರಘೋಟದ ಅಡವಿಲಿಂಗ ಮಹಾರಾಜ ಸ್ವಾಮೀಜಿ, ಬಸವರಾಜಯ್ಯ ಸ್ವಾಮಿ ಬಲ್ಲಟಗಿ, ಮಾಜಿ ಶಾಸಕ ಹಂಪಯ್ಯ ನಾಯಕ, ಜಿಪಂ ಸದಸ್ಯ ಕಿರಿಲಿಂಗಪ್ಪ, ಮಲ್ಲಟ ತಾಪಂ ಸದಸ್ಯ ಮಲ್ಲಕಾರ್ಜುನ ನಾಯಕ, ಮುಖಂಡರಾದ ಆರ್.ಕೆ.ಚನ್ನಬಸವ, ಚುಕ್ಕಿ ಸೂಗಪ್ಪ, ಅಸ್ಲಾಂಪಾಷಾ, ಜಿ.ಲೋಕರೆಡ್ಡಿ, ದಾನನಗೌಡ, ಶರಣಯ್ಯ ಗುಡದಿನ್ನಿ, ನಿರ್ಮಲ ಬೆಣ್ಣಿ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.