ಏತ ನೀರಾವರಿ ಯೋಜನೆಗೆ ಇರುವ ಅಡ್ಡಿ-ಆತಂಕ ನಿವಾರಿಸಿ

ದಾವಣಗೆರೆ-ಚಿತ್ರದುರ್ಗ ಜಿಲ್ಲೆ ಸಂಸದರು, ಶಾಸಕರಿಗೆ ಶ್ರೀ ಸೂಚನೆ

Team Udayavani, Aug 25, 2019, 10:02 AM IST

25-Agust-3

ಸಿರಿಗೆರೆ: ಜನಪ್ರತಿನಿಧಿಗಳು ಹಾಗೂ ರೈತರ ಸಭೆಯಲ್ಲಿ ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.

ಸಿರಿಗೆರೆ: ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸರ್ಕಾರದಿಂದ ಮಂಜೂರಾಗಿರುವ ಸಾಸ್ವೆಹಳ್ಳಿ, ಜಗಳೂರು ಹಾಗೂ ಭರಮಸಾಗರ ಏತ ನೀರಾವರಿ ಯೋಜನೆಗಳಿಗೆ ಅಡ್ಡಿಯಾಗುವ ಅಂಶಗಳ ನಿವಾರಣೆಗೆ ಮುಂದಾಗಬೇಕು ಎಂದು ಎರಡೂ ಜಿಲ್ಲೆಗಳ ಸಂಸದರು ಮತ್ತು ಶಾಸಕರಿಗೆ ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸೂಚಿಸಿದರು.

ಇಲ್ಲಿನ ತರಳಬಾಳು ಜಗದ್ಗುರು ಬೃಹನ್ಮಠದಲ್ಲಿ ಶನಿವಾರ ಆಯೋಜಿಸಲಾಗಿದ್ದ ಜನಪ್ರತಿನಿಧಿಗಳು ಹಾಗೂ ರೈತರ ಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ರೈತರು ಕೂಡ ಏತ ನೀರಾವರಿ ಯೋಜನೆಗಳಿಗೆ ಸಂಪೂರ್ಣ ಸಹಕಾರ ನೀಡದೇ ಇದ್ದರೆ ಅವು ಯಶಸ್ವಿಯಾಗುವುದಿಲ್ಲ. ಆದ್ದರಿಂದ ರೈತರು ತಮ್ಮ ಸ್ವಾರ್ಥವನ್ನು ಬದಿಗಿಟ್ಟು ಎಲ್ಲರಿಗೂ ನೀರು ಸಿಗಲಿ ಎಂಬ ವಿಶಾಲ ಮನೋಭಾವ ಬೆಳೆಸಿಕೊಂಡರೆ ನೀರಾವರಿ ಯೋಜನೆಗಳು ಯಶಸ್ವಿಯಾಗುತ್ತವೆ ಎಂದರು.

ಜಗಳೂರು ಭಾಗದ ಕೆರೆಗಳ ಯೋಜನೆಗೆ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು 500 ಕೋಟಿ ರೂ.ಗಳನ್ನು ತಮ್ಮ ಬಜೆಟ್‌ನಲ್ಲಿ ಸೇರಿಸಿದ್ದರು. ನಂತರ ಬಂದ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಕರ್ನಾಟಕ ನೀರಾವರಿ ನಿಗಮದ ಮೂಲಕ 1200 ಕೋಟಿ ರೂ. ಮಂಜೂರಾತಿಗೆ ಅನುಮತಿ ನೀಡಿದ್ದರು. ಇಂದಿನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಎರಡೂ ಯೋಜನೆಗಳಿಗೆ ಹಣ ಬಿಡುಗಡೆ ಮಾಡಬೇಕಾಗಿದೆ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪನವರ ಬಳಿ ಹಿಂದಿನ ಸರ್ಕಾರಗಳು ಮಂಜೂರಾತಿ ನೀಡಿರುವ ಯೋಜನೆಗಳ ಮಾಹಿತಿ ನೀಡಿದ್ದೇವೆ. ಜಗಳೂರು ಕೆರೆಗಳ ಯೋಜನೆಗೆ 220 ಕೋಟಿ ಹಾಗೂ ಭರಮಸಾಗರ ಯೋಜನೆಗೆ ಹಂತ ಹಂತವಾಗಿ ಹಣ ಬಿಡುಗಡೆ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದರು.

ರಾಜನಹಳ್ಳಿ ಏತ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ರಾಜನಹಳ್ಳಿ ಹತ್ತಿರದ ನದಿಯಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಬ್ಯಾರೇಜ್‌ ನಿರ್ಮಿಸಲಾಗಿದೆ. ಹಾಗೆಯೇ ಮಲಶೆಟ್ಟಿಹಳ್ಳಿ ಹತ್ತಿರ 4 ಎಕರೆ ಜಾಕ್‌ವೆಲ್ ಬಳಿ ಸುಮಾರು 16 ಎಕರೆ ವಿಸ್ತೀರ್ಣದ ಜಮೀನಿನಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕೆರೆಯೊಂದನ್ನು ನಿರ್ಮಿಸಲಾಗುತ್ತಿದೆ. ಕಾಮಗಾರಿ ಪೂರ್ಣಗೊಂಡ ನಂತರ ಈ ಯೋಜನೆ ಯಶಸ್ವಿಯಾಗಲಿದೆ. ಬಿಟ್ಟು ಹೋಗಿರುವ ಕೆರೆಗಳ ಸೇರ್ಪಡೆಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ಸಂಸದ ಜಿ.ಎಂ. ಸಿದ್ದೇಶ್ವರ್‌, ಶಾಸಕರಾದ ಎಂ.ಪಿ. ರೇಣುಕಾಚಾರ್ಯ, ಜಿ.ಎಚ್. ತಿಪ್ಪಾರೆಡ್ಡಿ, ಎಸ್‌.ವಿ. ರಾಮಚಂದ್ರ, ಪ್ರೊ| ಲಿಂಗಣ್ಣ, ಎಂ. ಚಂದ್ರಪ್ಪ, ಮಾಡಾಳು ವಿರೂಪಾಕ್ಷಪ್ಪ, ಕಾಂಗ್ರೆಸ್‌ ಮುಖಂಡ ಎಚ್.ಎ. ಷಣ್ಮುಖಪ್ಪ, ಕೆರೆಗಳ ಹೋರಾಟ ಸಮಿತಿ ಅಧ್ಯಕ್ಷ ಡಾ| ಮಂಜುನಾಥ ಗೌಡ, ಚೌಲಿಹಳ್ಳಿ ಶಶಿ ಪಾಟೀಲ್ ಮೊದಲಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.