ಸಿರವಾರ ಅಭಿವೃದ್ಧಿಗೆ ಗ್ರಹಣ
ಎರಡನೇ ಅವಧಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಮೀಸಲು ಗೊಂದಲ • ಹೈಕೋರ್ಟ್ ಮೊರೆ
Team Udayavani, Sep 16, 2019, 3:23 PM IST
ಮಹೇಶ ಪಾಟೀಲ
ಸಿರವಾರ: ಸ್ಥಳೀಯ ಪಟ್ಟಣ ಪಂಚಾಯಿತಿ ಯಲ್ಲಿ ಕಳೆದ 10 ತಿಂಗಳಿನಿಂದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಆಡಳಿತ ಮಂಡಳಿಯಿಲ್ಲದೆ ಪಂಚಾಯಿತಿ ಅನಾಥವಾಗಿದ್ದು ಅಭಿವೃದ್ಧಿ ಕುಂಠಿತವಾಗುತ್ತಿದೆ.
ಸಿರವಾರ ಗ್ರಾಮ ಪಂಚಾಯತಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ನಂತರ 2016 ಏಪ್ರಿಲ್ ತಿಂಗಳಲ್ಲಿ ಚುನಾವಣೆ ನಡೆದು, ಮೇ ತಿಂಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರ ಆಡಳಿತ ಮಂಡಳಿ ರಚನೆಯಾಗಿತ್ತು, ನಂತರ ಸರ್ಕಾರದ ನಿಯಮದಂತೆ 30 ತಿಂಗಳ ಅವಧಿ ಮುಗಿದಿದೆ. ಎರಡನೇ ಅವಧಿಗೆ ಆಡಳಿತ ಮಂಡಳಿ ಇಲ್ಲದೆ ಇರುವುದರಿಂದ ಪಟ್ಟಣದ ಸಮಸ್ಯೆಗಳಿಗೆ ಪರಿಹಾರವಿಲ್ಲದೆ ಅಭಿವೃದ್ಧಿ ಮರೀಚಿಕೆಯಾಗಿದೆ.
ಹೈಕೋರ್ಟ್ ಮೊರೆ: ಪಟ್ಟಣ ಪಂಚಾಯಿತಿ ಮೊದಲನೇ ಅವಧಿಗೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ನೀಡಲಾಗಿತ್ತು. ಎರಡನೇ ಅವಧಿಗೆ ಪರಿಶಿಷ್ಟ ಜಾತಿಗೆ ಅಧ್ಯಕ್ಷ, ಪರಿಶಿಷ್ಟ ಪಂಗಡಕ್ಕೆ ಉಪಾಧ್ಯಕ್ಷ ಸ್ಥಾನ ಮೀಸಲಾಗಿತ್ತು. ಆದರೆ ಮೀಸಲಾತಿ ಬದಲಿಗೆ ಕೆಲವರು ಹೈಕೋರ್ಟ್ ಮೊರೆ ಹೋಗಿದ್ದರಿಂದ ಮತ್ತು ಈವರೆಗೆ ತೀರ್ಪು ಪ್ರಕಟವಾಗದ್ದರಿಂದ ಆಡಳಿತ ಮಂಡಳಿ ರಚನೆಗೆ ಹಿನ್ನಡೆ ಆಗಿದೆ.
ಸಾಮಾನ್ಯ ಸಭೆಯಿಲ್ಲ: ವಿಧಾನಸಭೆ ಚುನಾವಣೆ ನಡೆದು ನೂತನ ಶಾಸಕರು ಅಧಿಕಾರಕ್ಕೆ ಬಂದ ನಂತರ ಈವರೆಗೆ ಒಮ್ಮೆ ಸದಸ್ಯರ ಸಭೆ ನಡೆಸಲಾಗಿದೆ. ನಂತರ ಪಟ್ಟಣ ಪಂಚಾಯಿತಿಯಲ್ಲಿ ಆಡಳಿತ ಮಂಡಳಿ ಇಲ್ಲದೆ ಇರುವುದರಿಂದ ಕಳೆದ 1 ವರ್ಷದಿಂದ ಸಾಮಾನ್ಯ ಸಭೆ ನಡೆಸಿಲ್ಲ. ಇದರಿಂದಾಗಿ ಪಟ್ಟಣದಲ್ಲಿನ ಸಮಸ್ಯೆಗಳ ಚರ್ಚೆಗೆ ಅವಕಾಶ ವಿಲ್ಲದಾಗಿದೆ.
ಸದಸ್ಯರಿಗಿಲ್ಲ ಸ್ಪಂದನೆ: ಪಟ್ಟಣ ಪಂಚಾಯಿತಿ ಸದಸ್ಯರು ತಮ್ಮ ವಾರ್ಡ್‌ನಲ್ಲಿನ ಚರಂಡಿ, ಕುಡಿಯುವ ನೀರು ಇತರೆ ಮೂಲ ಸಮಸ್ಯೆಗಳ ಕುರಿತಂತೆ ಚರ್ಚಿಸಲು ಹೋದರೆ ಮುಖ್ಯಾಧಿಕಾರಿಯಿಂದ ಹಿಡಿದು ಯಾವೊಬ್ಬ ಅಧಿಕಾರಿ, ಸಿಬ್ಬಂದಿ ಸ್ಪಂದಿಸುತ್ತಿಲ್ಲ. ಇದರಿಂದಾಗಿ ಸಮಸ್ಯೆಗೆ ಪರಿಹಾರವಿಲ್ಲದೆ ಸದಸ್ಯರು ವಾರ್ಡ್‌ನ ಜನರಿಂದ ದಿನನಿತ್ಯ ಛೀಮಾರಿ ಹಾಕಿಸಿಕೊಳ್ಳಿವ ಪರಿಸ್ಥಿತಿ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.