ಅಸಮರ್ಪಕ ಉತ್ತರ; ಸಭೆ ಮೊಟಕು
ಹಾರಿಕೆ ಉತ್ತರ ನೀಡಿ ದಾರಿ ತಪ್ಪಿಸಬೇಡಿ•ಸಭೆಯಿಂದ ಹೊರನಡೆದ ಶಾಸಕರು
Team Udayavani, Jun 1, 2019, 4:05 PM IST
ಸಿರುಗುಪ್ಪ: ನಗರದ ತಾ.ಪಂ ಸಭಾಂಗಣದಲ್ಲಿ ನಡೆದ ತ್ತೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಮಾತನಾಡಿದರು.
ಸಿರುಗುಪ್ಪ: ನಗರದ ತಾಪಂ ಸಭಾಂಗಣದಲ್ಲಿ ನಡೆದ ತ್ತೈಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ನೀಡಿದ ಉತ್ತರದಿಂದ ಅಸಮಾಧಾನಗೊಂಡ ಶಾಸಕ ಎಂ.ಎಸ್.ಸೋಮಲಿಂಗಪ್ಪ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಸಭೆಯಿಂದ ಹೊರನಡೆದ ಘಟನೆ ನಡೆಯಿತು.
ನರೇಗಾ ಯೋಜನೆಯಡಿ ಮಾಳಾಪುರ ಮತ್ತು ಗುಂಡಿಗನೂರು ಕೆರೆಗಳಲ್ಲಿ ಹೂಳೆತ್ತುವ ಕಾರ್ಯ ನಡೆಯುತ್ತಿರುವುದರಿಂದ ತಾಲೂಕಿನ ಜನರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಿರುವುದು ಸರಿ. ಆದರೆ ಈ ಎರಡೂ ಕೆರೆಗಳಲ್ಲಿ ಹೂಳೆತ್ತಿದ ಮಣ್ಣನ್ನು ತೆಗೆಯಲು ಯಾವ ಕ್ರಮ ಕೈಗೊಂಡಿಲ್ಲ. ಆದರೆ ಸಭೆಯಲ್ಲಿ ಹಾರಿಕೆ ಉತ್ತರ ನೀಡಿ ನನ್ನನ್ನು ದಾರಿ ತಪ್ಪಿಸುವ ಕೆಲಸ ಮಾಡಬೇಡಿ ಎಂದು ನರೇಗಾ ಯೋಜನೆಯ ತಾ.ನಿರ್ದೇಶಕಿ ನಿರ್ಮಲ ಅವರನ್ನು ತರಾಟೆಗೆ ತೆಗೆದುಕೊಂಡರು.
ಕಳೆದ ಒಂದು ವಾರದಿಂದ ಹೂಳೆತ್ತಲು ಟ್ರ್ಯಾಕ್ಟರ್‌ಗಳು ಸಿಗುತ್ತಿಲ್ಲ, ಆದ್ದರಿಂದ ಕೆರೆಯಲ್ಲಿ ಎತ್ತಿದ ಹೂಳನ್ನು ಹೊರ ಸಾಗಿಸಲು ಸಾಧ್ಯವಾಗಿಲ್ಲವೆಂದು ನರೇಗಾ ತಾ.ನಿರ್ದೇಶಕಿ ತಿಳಿಸಿದರು. ಈ ಉತ್ತರದಿಂದ ಅಸಮಾಧಾನಗೊಂಡ ಶಾಸಕರು ರೈತರು ಮತ್ತು ಟ್ರ್ಯಾಕ್ಟರ್ ಹೊಂದಿದವರು ತಮಗೆ ಕೆಲಸ ಕಾರ್ಯಗಳು ಸಿಗುತ್ತಿಲ್ಲವೆಂದು ಕೆಲವರು ರಾತ್ರಿ ವೇಳೆ ಕಳ್ಳತನದಲ್ಲಿ ಮರಳು ಸಾಗಾಟವನ್ನು ಟ್ರ್ಯಾಕ್ಟರ್‌ಗಳಲ್ಲಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ಕೆಲಸ ಸಿಗದೆ ತಮ್ಮ ಟ್ರ್ಯಾಕ್ಟರ್‌ಗಳನ್ನು ಮೂಲೆಗೆ ಇಟ್ಟಿದ್ದಾರೆ ಎಂದರು. ಆದರೆ ಕೆಲವು ಅಧಿಕಾರಿಗಳು ನೀಡಿದ ವರದಿಯಿಂದ ಅಸಮಾಧಾನಗೊಂಡ ಶಾಸಕರು ಸಭೆಯನ್ನು ಅರ್ಧಕ್ಕೆ ನಿಲ್ಲಿಸಿ ಹೊರನಡೆದರು. ಇದಕ್ಕೂ ಮುನ್ನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಯಿಂದ ಕುಡಿಯುವ ನೀರಿನ ಬಗ್ಗೆ ಮಾಹಿತಿಯನ್ನು ಶಾಸಕರು ಪಡೆದುಕೊಂಡರು. ತಾಪಂ ಅಧ್ಯಕ್ಷೆ ದೇವಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ವೈ.ಶಂಕ್ರಪ್ಪ, ತಹಶೀಲ್ದಾರ್ ದಯಾನಂದ ಪಾಟೀಲ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.