ಸರ್ಕಾರಿ ಹಾಸ್ಟೆಲ್ ನಲ್ಲಿ ಸಮಸ್ಯೆಗಳ ಸರಮಾಲೆ!
ವಿದ್ಯಾರ್ಥಿಗಳಿಗೆ ಟ್ಯಾಂಕರ್ ನೀರು ಪೂರೈಕೆ•ಕೊಠಡಿಗಳ ಕೊರತೆ•ಶೌಚಕ್ಕೂ ತೊಂದರೆ
Team Udayavani, Aug 21, 2019, 11:44 AM IST
ಸಿರುಗುಪ್ಪ: ನಗರದ ನಂ.1 ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ. ಶಿಥಿಲಗೊಂಡ ಕೊಠಡಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು
ಸಿರುಗುಪ್ಪ: ನಗರದಲ್ಲಿರುವ ಸರ್ಕಾರಿ ವಸತಿ ನಿಲಯದ ವಿದ್ಯಾರ್ಥಿಗಳಿಗೆ ತೀವ್ರ ನೀರಿನ ಕೊರತೆ ಉಂಟಾಗಿದೆ. ಇದರಿಂದ ವಿದ್ಯಾರ್ಥಿಗಳು ನಿತ್ಯದ ಕೆಲಸ ಕಾರ್ಯಗಳಿಗೆ ನೀರು ಯೋಚಿಸಿ ಬಳಸಬೇಕಾದ ಅನಿವಾರ್ಯತೆ ಎದುರಾಗಿದೆ.
ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದ 3ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ಮಂಜೂರಾದ ವಿದ್ಯಾರ್ಥಿಗಳ ಸಂಖ್ಯೆ 300 ಆದರೆ 607 ವಿದ್ಯಾರ್ಥಿಗಳಿದ್ದು, 3 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಮಂಜೂರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 300 ಆದರೆ 537 ವಿದ್ಯಾರ್ಥಿಗಳ ಸೇರ್ಪಡೆಯಾಗಿದ್ದು, ಒಟ್ಟು 1144 ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿರುವುದರಿಂದ ನೀರು, ಶೌಚಾಲಯ, ಕೊಠಡಿಗಳ ಸಮಸ್ಯೆ ಉಂಟಾಗಿದೆ.
ವಿದ್ಯಾರ್ಥಿಗಳಿಗೆ ನೀರು ಪೂರೈಕೆ ಮಾಡಲು ಕೊರೆಸಿದ ಕೊಳವೆ ಬಾವಿಗಳಲ್ಲಿ ನೀರು ಸಂಪೂರ್ಣವಾಗಿ ಬತ್ತಿ ಹೋಗಿರುವುದರಿಂದ ವಿದ್ಯಾರ್ಥಿ ನಿಲಯಗಳಿಗೆ ಹಣ ನೀಡಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ವಿದ್ಯಾರ್ಥಿಗಳ ದಿನ ನಿತ್ಯದ ಬಳಕೆಗಾಗಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿದ್ದರೂ ಸಾಲದಾಗಿದೆ.
ವಸತಿ ನಿಲಯಗಳಲ್ಲಿರುವ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ವಾಟರ್ ಫಿಲ್ಟರ್‌ಗಳು ಕಾರ್ಯನಿರ್ವಹಿಸದಿರುವುದರಿಂದ ಹಣ ನೀಡಿ ಖಾಸಗಿ ಶುದ್ಧ ಕುಡಿಯುವ ನೀರಿನ ಘಟಕಗಳಿಂದ ವಿದ್ಯಾರ್ಥಿಗಳಿಗೆ ಕುಡಿಯುವ ನೀರನ್ನು ತರಲಾಗುತ್ತಿದೆ. ನಿತ್ಯ ಒಂದು ವಸತಿ ನಿಲಯಗಳಲ್ಲಿ ಅಂದಾಜು ಒಂದು ಸಾವಿರ ರೂ. ಕುಡಿಯುವ ನೀರು ಮತ್ತು ಬಳಕೆಗೆ ಬೇಕಾದ ನೀರನ್ನು ಖರೀದಿಸಲಾಗುತ್ತಿದ್ದು, ಸಮಾಜ ಕಲ್ಯಾಣ ಇಲಾಖೆಯಿಂದ ಲಕ್ಷಾಂತರ ರೂ. ಕೇವಲ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ಖರ್ಚು ಮಾಡುತ್ತಿದೆ.
ಸರ್ಕಾರದ ಆದೇಶದಂತೆ ಪ.ಜಾತಿಯಿಂದ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಯನ್ನು ವಸತಿ ನಿಲಯಗಳಲ್ಲಿ ಸೇರ್ಪಡೆ ಮಾಡಿಕೊಳ್ಳಲೇ ಬೇಕು ಎಂಬ ನಿಯಮ ಇರುವುದರಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿ ವಸತಿ ನಿಲಯಗಳಲ್ಲಿ ಕುಡಿಯುವ ನೀರು, ಶೌಚಾಲಯ, ಕೊಠಡಿಗಳ ಕೊರತೆ ಉಂಟಾಗಿದೆ.
ವಸತಿ ನಿಲಯಗಳಲ್ಲಿ ಮಂಜೂರಾದ ವಿದ್ಯಾರ್ಥಿಗಳಿಗಿಂತ ಹೆಚ್ಚಿನ ವಿದ್ಯಾರ್ಥಿಗಳು ವಾಸಿಸುತ್ತಿರುವುದರಿಂದ ನೀರಿನ ಕೊರತೆಯಿಂದಾಗಿ ನಗರದ ನಂ.1 ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ 233 ವಿದ್ಯಾರ್ಥಿಗಳಿದ್ದು, ಕೇವಲ 8 ಶೌಚಾಲಯಗಳಿರುವುದರಿಂದ ಸ್ವಚ್ಛತೆಯಿಲ್ಲದೆ ಇರುವುದು ಮತ್ತು ವಸತಿ ನಿಲಯದ ಆವರಣದಲ್ಲಿ ಕಲುಷಿತ ನೀರು ಸಂಗ್ರಹಗೊಂಡು ಗಬ್ಬು ನಾರುತ್ತಿವೆ.ಕೊಠಡಿಗಳ ಮೇಲ್ಚಾವಣಿಯ ಸಿಮೆಂಟ್ ಉದುರಿ ಬೀಳುತ್ತಿದ್ದು, ವಿದ್ಯಾರ್ಥಿಗಳು ಆತಂಕದಲ್ಲೇ ವಾಸ ಮಾಡುತ್ತಿದ್ದಾರೆ.
ವಸತಿ ನಿಲಯದಲ್ಲಿ ಬಳಕೆ ಮತ್ತು ಕುಡಿಯುವ ನೀರಿಗೆ ತೊಂದರೆಯಾಗಿರುವುದಲ್ಲದೆ ಶೌಚಾಲಯಗಳು ಕಡಿಮೆ ಇರುವುದರಿಂದ ಶೌಚಕ್ಕೆ ತೊಂದರೆಯಾಗುತ್ತಿದೆ. ಅಲ್ಲದೆ ಕೊಠಡಿಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವುದರಿಂದ ಮಲಗಲು ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
MUST WATCH
ಹೊಸ ಸೇರ್ಪಡೆ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.