ಮೋದಿ ಆಡಳಿತ ವಿಶ್ವಕ್ಕೆ ಮಾದರಿ: ಫಡ್ನವೀಸ್
ಕಾಂಗ್ರೆಸ್ ಅನುಭವಿಸಲಿದೆ ಹೀನಾಯ ಸೋಲು ದೇಶ ಮೊದಲು-ಪಕ್ಷ ನಂತರ ಬಿಜೆಪಿ ಸಿದ್ಧಾಂತ
Team Udayavani, Apr 11, 2019, 10:23 AM IST
ಸೊಲ್ಲಾಪುರ: ಅಕ್ಕಲಕೋಟ ನಗರದ ಮಲ್ಲಿಕಾರ್ಜುನ ದೇವಸ್ಥಾನ ಹತ್ತಿರ ಹಮ್ಮಿಕೊಂಡ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾತನಾಡಿದರು.
ಸೊಲ್ಲಾಪುರ: ದೇಶದ ಅಭಿವೃದ್ಧಿಗೆ ಪ್ರಧಾನಿ ಮೋದಿ ಆಡಳಿತ ವಿಶ್ವಕ್ಕೆ ಮಾದರಿಯಾಗಿದೆ. ಅಲ್ಲದೇ ದೇಶದ ರಕ್ಷಣೆಗಾಗಿ ಮೋದಿಯನ್ನು ಮತ್ತೂಮ್ಮೆ ಗೆಲ್ಲಿಸುವ ಮೂಲಕ ಮತ್ತಿಷ್ಟು ದೇಶ ಬಲಿಷ್ಠಗೊಳಿಸಲು ಬಿಜೆಪಿಗೆ ಬೆಂಬಲಿಸಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದರು.
ಸೊಲ್ಲಾಪುರ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಜಯಸಿದ್ಧೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಪರ ಪ್ರಚಾರಕ್ಕಾಗಿ ಅಕ್ಕಲಕೋಟ ನಗರದ ಮಲ್ಲಿಕಾರ್ಜುನ ದೇವಸ್ಥಾನ ಹತ್ತಿರ ಹಮ್ಮಿಕೊಂಡ ಬೃಹತ್ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಸೋಲುವ ಭೀತಿಯಲ್ಲಿದೆ. ದೇಶದಲ್ಲಿ ಬರುವ ದಿನಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಲಿದೆ. ಕಾಂಗ್ರೆಸ್ ಪಕ್ಷಕ್ಕೆ ದೇಶಾಭಿಮಾನವಿಲ್ಲ. ಅಲ್ಲದೇ ದೇಶದ ಅಭಿವೃದ್ಧಿಯ ಗುರಿ ಇಲ್ಲದ ಕಾಂಗ್ರಸ್ ಪಕ್ಷಕ್ಕೆ ಜನರು ಪಾಠ
ಕಲಿಸಲಿದ್ದಾರೆ. ದೇಶ ಮೊದಲು, ಪಕ್ಷ ನಂತರ, ಆನಂತರ ವ್ಯಕ್ತಿ ಇದು ಬಿಜೆಪಿ ಸಿದ್ಧಾಂತವಾಗಿದೆ. ದೇಶದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡುವ ಸಂಕಲ್ಪ ನಮ್ಮದಾಗಿದೆ. ದೇಶದಲ್ಲಿರುವ ಮೋದಿ ಬಿರುಗಾಳಿಗೆ ಕಾಂಗ್ರೆಸ್ ಧೂಳಿಪಟವಾಗಲಿದೆ. ಇದನ್ನು ಸಹಿಸುವ ಶಕ್ತಿ ಕಾಂಗ್ರಸ್ ಪಕ್ಷಕ್ಕೆ ಇಲ್ಲದ್ದಾಗಿದೆ
ಎಂದು ಹೇಳಿದರು.
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಿಂದ ಸಾಮಾನ್ಯ ಜನರಿಗೆ ಉತ್ತಮ ಸೌಲಭ್ಯ ದೊರೆಯುತ್ತಿದೆ. ದೇಶದಲ್ಲಿರುವ ಭ್ರಷ್ಟಾಚಾರಕ್ಕೆ ಈಗಾಗಲೇ ಕಡಿವಾಣ
ಹಾಕಲಾಗಿದ್ದು, ಭ್ರಷ್ಟಾಚಾರ ಮುಕ್ತ ಭಾರತವಾಗಿದೆ. ನಮ್ಮ ಸೈನಿಕರು ಭಯೋತ್ಪಾದನೆಗೆ ತಕ್ಕ ಉತ್ತರ ಕೊಡುತ್ತಿದ್ದಾರೆ. ಪ್ರಧಾನಿ ಮೋದಿ ದೇಶದ ರಕ್ಷಣೆಗಾಗಿ, ಬಲಿಷ್ಠ ರಾಷ್ಟಕ್ಕಾಗಿ ಹಗಲಿರುಳು ದುಡಿಯುತ್ತಿದ್ದಾರೆ.
ಆದ್ದರಿಂದ ದೇಶದ ಸ್ವಾಭಿಮಾನಕ್ಕಾಗಿ ಬಿಜೆಪಿ ಅಭ್ಯರ್ಥಿ ಡಾ| ಜಯಸಿದ್ಧೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿಗೆ ಮತದಾನ ಮಾಡುವಂತೆ ಮತದಾರರಿಗೆ ಕರೆ ನೀಡಿದರು.
ಪ್ರಾರಂಭದಲ್ಲಿ ಸಿಎಂ ಫಡ್ನವಿಸ್ ಅವರು ಶಿವಾಜಿ ಮಹಾರಾಜರ ಮೂರ್ತಿಗೆ ಪುಷ್ಪಹಾರ ಹಾಕುವ ಮೂಲಕ ಸಭೆಗೆ ಚಾಲನೆ ನೀಡಿದರು. ಜಿಲ್ಲಾ
ಉಸ್ತುವಾರಿ ಸಚಿವ ವಿಜಯಕುಮಾರ ದೇಶಮುಖ, ಮಾಜಿ ಸಚಿವ ಲಕ್ಷ್ಮಣರಾವ್ ಡೋಬಳೆ, ಶಿವಸೇನಾ ಪಕ್ಷದ ಸಂಜಯ ದೇಶಮುಖ, ಸುನೀಲ ಬಂಡಗಾರ,
ಸುರೇಖಾ ಹೋಳಿಕಟ್ಟಿ, ಭೀಮಾಶಂಕರ ಇಂಗಳೆ, ಮಹೇಶ ಹಿಂಡೋಳೆ ಹಾಗೂ ಮತ್ತಿತರರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಸೊಲ್ಲಾಪುರ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಜಯಸಿದ್ಧೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ, ಸಹಕಾರ ಸಚಿವ ಸುಭಾಷ ದೇಶಮುಖ, ಬಿಜೆಪಿ ಜಿಲ್ಲಾಧ್ಯಕ್ಷ ಶಹಾಜಿ ಪವಾರ, ಬಿಜೆಪಿ ತಾಲೂಕು ಅಧ್ಯಕ್ಷ ಸಚಿನ ಕಲ್ಯಾಣಶೆಟ್ಟಿ, ಮಾಜಿ ಶಾಸಕ ಸಿದ್ರಾಮಪ್ಪಾ ಪಾಟೀಲ, ಮೇಯರ್ ಶೋಭಾ ಬನಶೆಟ್ಟಿ, ರಾಜೇಂದ್ರ ಮಿರಗಣೆ, ಗಣೇಶ ವಾನಕರ್, ಶೋಭಾ ಖೇಡಗಿ, ಆನಂದ ತಾನವಡೆ, ಯಶ್ವಂತ ಧೋಂಗಡೆ, ಸುರೇಖಾ ಹೋಳಿಕಟ್ಟಿ, ಪ್ರದೀಪ ಪಾಟೀಲ, ಋತುರಾಜ ರಾಠೊಡ, ಯೋಗೇಶ ಪವಾರ, ಮಹೇಶ ಪಾಟೀಲ ಮತ್ತಿತರರು
ವೇದಿಕೆಯಲ್ಲಿದ್ದರು. ಶ್ವೇತಾ ಹುಲ್ಲೆ ನಿರೂಪಿಸಿದರು, ಚಂದ್ರಕಾಂತ ಧಸಲೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Kaup town: ಟ್ರಾಫಿಕ್ ಒತ್ತಡ, ಪಾರ್ಕಿಂಗ್ ಕಿರಿಕಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.