ವಿಠ್ಠಲನ ದರ್ಶನಕ್ಕೆ 12 ಲಕ್ಷ ವಾರಕರಿಗಳು
ಸುನೆವಾಡಿ ತಾಂಡಾದ ವಿಠ್ಠಲ ಚವ್ಹಾಣ ದಂಪತಿಯಿಂದ ಸರ್ಕಾರಿ ಪೂಜೆ
Team Udayavani, Jul 13, 2019, 11:07 AM IST
ಸೊಲ್ಲಾಪುರ: ಆಷಾಢ ಏಕಾದಶಿ ಅಂಗವಾಗಿ ಪಂಢರಪುರ ವಿಠ್ಠಲನ ದರ್ಶನಕ್ಕೆ ಮಹಾರಾಷ್ಟ್ರ ಸೇರಿದಂತೆ ದೇಶದ ಮೂಲೆ-ಮೂಲೆಯಿಂದ ಆಗಮಿಸಿದ ಭಕ್ತ ಸಾಗರ.
ಸೊಲ್ಲಾಪುರ: ಆಷಾಢ ಏಕಾದಶಿ ಅಂಗವಾಗಿ ಮಹಾರಾಷ್ಟ್ರ, ಕರ್ನಾಟಕ ಹಾಗೂ ತೆಲಂಗಾಣ ಸೇರಿದಂತೆ ದೇಶದ ಮೂಲೆ ಮೂಲೆಯಿಂದ ಬಂದಿರುವ ಸುಮಾರು 12 ಲಕ್ಷ ವಾರಕರಿಗಳು (ಭಕ್ತರು) ಶುಕ್ರವಾರ ಪಂಢರಪುರ ವಿಠ್ಠಲನ ದರ್ಶನ ಪಡೆದರು.
ಶುಕ್ರವಾರ ಬೆಳಗ್ಗೆ 2:30 ಗಂಟೆಗೆ ಸರ್ಕಾರಿ ಮಹಾಪೂಜೆಯನ್ನು ಮಹಾರಾಷ್ಟ್ರದ ಲಾತೂರ ಜಿಲ್ಲೆಯ ಅಹಮದಪುರ್ ಗ್ರಾಮದ ಸುನೆವಾಡಿ ತಾಂಡಾದ ವಿಠ್ಠಲ ಚವ್ಹಾಣ ಹಾಗೂ ಪತ್ನಿ ಪ್ರಯಾಗಾಬಾಯಿ ಚವ್ಹಾಣ ಎನ್ನುವ ವಾರಕರಿಗಳು ನೆರವೇರಿಸಲಿದ್ದಾರೆ. ಸರ್ಕಾರಿ ಪೂಜೆ ನಂತರ ವಿಠ್ಠಲನ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ಇಲ್ಲಿನ ಚಂದ್ರಭಾಗಾ ನದಿಯಲ್ಲಿ ಸ್ನಾನ ಮಾಡಿದ ವಾರಕಾರಿಗಳು ಸರದಿಯಲ್ಲಿ ನಿಂತು ವಿಠ್ಠಲ.. ವಿಠ್ಠಲ.. ಜಯ ಹರಿ ವಿಠ್ಠಲ ಎಂದು ನಾಮಸ್ಮರಣೆ ಮಾಡುವ ಮೂಲಕ ಭಕ್ತಿ, ಶ್ರದ್ಧೆಯಿಂದ ದರ್ಶನ ಪಡೆದರು. ಪಂಢರಪುರದೆಲ್ಲೆಡೆ ವಿಠ್ಠಲಮಯ ವಾತಾವರಣ ನಿರ್ಮಾಣವಾಗಿತ್ತು. ವಿಶೇಷವಾಗಿ ಲಕ್ಷಾಂತರ ವಾರಕಾರಿಗಳು ಪಾದಯಾತ್ರೆ ಮೂಲಕ ಪಂಢರಪುರಕ್ಕೆ ಆಗಮಿಸಿ ವಿಠ್ಠಲನ ದರ್ಶನ ಪಡೆದರು. ಯಾವುದೇ ಜಾತಿ-ಭೇದವಿಲ್ಲದೇ ವಾರಕರಿಗಳು ಭಜನೆ ಮತ್ತು ನೃತ್ಯದಲ್ಲಿ ಮಗ್ನರಾಗಿದ್ದರು.
ಸುಮಾರು 10 ಕಿಮೀವರೆಗೆ ಭಕ್ತರ ಸಾಲು ನಿಂತಿತ್ತು. ವಿಠ್ಠಲನ ದರ್ಶನಕ್ಕಾಗಿ ಬೆಳಗ್ಗೆಯಿಂದಲೇ ಸಾಲಾಗಿ ನಿಂತ ಭಕ್ತರ ಜೈ ಘೋಷಣೆಗಳು ಮುಗಿಲು ಮುಟ್ಟಿದ್ದವು. ಪಂಢರಪುರ ಜಾತ್ರಾ ಮಹೋತ್ಸವಕ್ಕೆ 15 ದಿನಗಳಿಂದ ಆಳಂದಿಯಿಂದ ಹೊರಟಿದ್ದ ಸಂತ ಜ್ಞಾನೇಶ್ವರ ಮಹಾರಾಜ, ಶೇಗಾಂವ ಸಂತ ಗಜಾನನ ಮಹಾರಾಜ ಹಾಗೂ ಸಂತ ತುಕಾರಾಮ ಮಹಾರಾಜರ ಪಲ್ಲಕ್ಕಿ ಶುಕ್ರವಾರ ಪಂಢರಪುರಕ್ಕೆ ಆಗಮಿಸಿತ್ತು. ಪಲ್ಲಕ್ಕಿಯೊಂದಿಗೆ ಲಕ್ಷಾಂತರ ವಾರಕರಿಗಳು ಕೇಸರಿ ಧ್ವಜ ಹಿಡಿದು ಸಾಲಾಗಿ ಆಗಮಿಸಿದ್ದರು. ಆಷಾಢ ಏಕಾದಶಿ ನಿಮಿತ್ತ ಪರರಾಜ್ಯಗಳಿಂದ ಬರುವ ಭಕ್ತರಿಗಾಗಿ ವಸತಿಗೃಹ, ಕುಡಿಯುವ ನೀರು, ಶೌಚಾಲಯ, ಆರೋಗ್ಯ ಸೌಲಭ್ಯ ಒದಗಿಸಲಾಗಿತ್ತು. ಅಲ್ಲದೇ ಭಕ್ತರ ಅನುಕೂಲಕ್ಕಾಗಿ ಮಹಾರಾಷ್ಟ್ರ ಸಾರಿಗೆ ಸಂಸ್ಥೆಯಿಂದ ಹೆಚ್ಚಿನ ಬಸ್‌ಗಳನ್ನು ಒದಗಿಸಲಾಗಿತ್ತು. ವಾರಕರಿಗಳ ಆರೋಗ್ಯ ಸೇವೆಗೆ ನೂರಾರು ವೈದ್ಯರನ್ನು ನೇಮಕ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.