ಸೊರಬ ತಾಲೂಕಲ್ಲಿ 15.67 ಕೋಟಿ ರೂ. ನಷ್ಟ

•ಕಳಪೆ ಕಾಮಗಾರಿ ಮುಚ್ಚಿ ಹಾಕಲು ಅಧಿಕಾರಿಗಳಿಗೆ ಅನುಕೂಲ: ಸಾರ್ವಜನಿಕರ ಆರೋಪ

Team Udayavani, Aug 21, 2019, 12:40 PM IST

21-Agust-14

ಸೊರಬ: ನೆರೆ ಹಾನಿಯಲ್ಲಿ ಸೇರ್ಪಡೆಯಾಗಿರುವ ಸೊರಬ ಪಟ್ಟಣದ ಬಿಎಸ್‌ಎನ್‌ಎಲ್ ಕಚೇರಿಯ ಹಿಂಬದಿಯ ಸುಸಜ್ಜಿತ ಕಾಂಕ್ರೀಟ್ ರಸ್ತೆ.

ಸೊರಬ: ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರೈತರ ಬೆಳೆ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿಗೊಳಗಾಗಿದೆ. ಪಟ್ಟಣ ವ್ಯಾಪ್ತಿಯಲ್ಲಿ 15.67 ಕೋಟಿ ರೂ. ನೆರೆ ಹಾವಳಿಯಿಂದ ನಷ್ಟ ಉಂಟಾಗಿದೆ ಎಂದು ಪಪಂ ಅಧಿಕಾರಿಗಳು ತಾಲೂಕು ಆಡಳಿತಕ್ಕೆ ವರದಿ ಸಲ್ಲಿಸಿರುವುದು ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿ, ಚರ್ಚೆಗೆ ಗ್ರಾಸವಾಗಿದೆ.

ಕೃಷಿ ಇಲಾಖೆ, ತಾಪಂ, ಪಿಡಬ್ಲ್ಯುಡಿ ಇಲಾಖೆ, ಮೆಸ್ಕಾಂ ಇಲಾಖೆಗಳು ಸೇರಿ ವಿವಿಧ ಇಲಾಖೆಗಳು ವರದಿ ತಯಾರಿಸಿದ್ದು, ಇಲಾಖೆವಾರು ತಾಲೂಕು ಆಡಳಿತದಿಂದ ಪ್ರಸಕ್ತ ಸಾಲಿನ ಪ್ರಕೃತಿ ನೆರೆ ಹಾವಳಿಯಿಂದ ಉಂಟಾದ ಆಸ್ತಿ-ಪಾಸ್ತಿ ಹಾನಿಯಾದ ಕ್ರೋಢೀಕೃತ ಮಾಹಿತಿ ಸಲ್ಲಿಸಲಾಗಿದೆ. ವರದಿಯಲ್ಲಿ ಸುಮಾರು 1 ನೂರು ಕೋಟಿ ರೂ.ಗಳಿಗೂ ಅಧಿಕ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ ಎಂದು ಪ್ರಾಥಮಿಕ ವರದಿ ಸಲ್ಲಿಸಲಾಗಿದೆ. ಇಲ್ಲಿನ ಪಪಂನಿಂದ ತಾಲೂಕು ಆಡಳಿತಕ್ಕೆ ನೀಡಿದ ವರದಿಯಲ್ಲಿ 15.67 ಕೋಟಿ ರೂ., ನೆರೆ ಹಾವಳಿಯಿಂದ ನಷ್ಟವಾಗಿದೆ ಎಂದು ತಿಳಿಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.

ಕಳಪೆ ಕಾಮಗಾರಿಗೆ ಶುಕ್ರದೆಸೆ: ಪಟ್ಟಣದ ಕೆಲ ವಾರ್ಡ್‌ಗಳಲ್ಲಿ ವಿವಿಧ ಯೋಜನೆಗಳಡಿ ಕೆಲ ವರ್ಷಗಳ ಹಿಂದೆ ಡಾಂಬಾರು ರಸ್ತೆ, ಸಿಸಿ ರಸ್ತೆ, ಚರಂಡಿ ಮತ್ತಿತರರ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿತ್ತು. ಅಂದು ಕೆಲ ವಾರ್ಡ್‌ಗಳಲ್ಲಿ ಕಳಪೆ ಕಾಮಗಾರಿಯಾಗುತ್ತಿದೆ, ಗುಣಮಟ್ಟದ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ ಸಾಕಷ್ಟು ನಿದರ್ಶನಗಳಿದ್ದವು. ಪಪಂ ವತಿಯಿಂದ ನೆಡಸಿದ ಕಾಮಗಾರಿಗಳಲ್ಲಿ ಬಹುತೇಕ ಕಳಪೆಯಾಗಿದ್ದರೂ, ಸಂಬಂಧಪಟ್ಟ ಗುತ್ತಿಗೆದಾರರಿಗೆ ಬಿಲ್ ಪಾವತಿಸಿ ವರುಷಗಳೇ ಉರುಳಿದೆ. ಇಂತಹ ಕೆಲ ಕಾಮಗಾರಿಗಳು ನೆಲಕಚ್ಚಿ ಹೋಗಿರುವುದು ನೆರೆ ಹಾವಳಿಯಿಂದಲೇ ಹಾನಿಯಾಗಿದೆ ಎಂದು ಪಪಂ ಸಲ್ಲಿಸಿದ ವರದಿ ದೋಷಪೂರಿತವಾಗಿದೆ. ಕಳಪೆ ಕಾಮಗಾರಿಗಳನ್ನು ಮುಚ್ಚಿಹಾಕಲು ತಾಲೂಕಿನಲ್ಲಿ ಸುರಿದ ಮಳೆ ಅಧಿಕಾರಿಗಳಿಗೆ ಶುಕ್ರದೆಸೆ ತಂದಿದೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ.

ಬರೋಬ್ಬರಿ 15 ಕೋಟಿ ಹಾನಿ!: ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಡಾಂಬಾರು ರಸ್ತೆ 2.85 ಕೋಟಿ ರೂ, ಕಾಂಕ್ರೀಟ್ ರಸ್ತೆ 76 ಲಕ್ಷ ರೂ., ಮಣ್ಣಿನ ಚರಂಡಿ 3.20 ಕೋಟಿ ರೂ., ಕಾಂಕ್ರೀಟ್ ತಡೆಗೋಡೆ 50 ಲಕ್ಷ ರೂ., ಜಲ್ಲಿ ರಸ್ತೆ 3.69 ಕೋಟಿ ರೂ., ಹಾಗೂ ಗಂಧದ ಕಾಂಪ್ಲೆಕ್ಸ್‌ ಸಮೀಪದಲ್ಲಿ ಡಾಂಬರ್‌ ರಸ್ತೆ ಹಾಗೂ ಚಪ್ಪಡಿ ಚರಂಡಿ ಹಾಳಾಗಿದ್ದು ಸುಮಾರು 60 ಲಕ್ಷ ರೂ., ಹಾನಿಯಾಗಿದೆ. ಉಳಿದಂತೆ ಪಪಂ ಆಡಳಿತಕ್ಕೊಳಪಡುವ ಹೊಳೆ ಜೋಳದಗುಡ್ಡೆ ಜಾಕ್‌ವೆಲ್ ಬಳಿಯ ಪುಟ್ ಬಿಡ್ಜ್ ಹಾನಿಯಾಗಿದ್ದು ಸುಮಾರು 80 ಲಕ್ಷ ರೂ., ನಷ್ಟವಾಗಿದೆ ಎಂದು ವರದಿ ಸಲ್ಲಿಸಲಾಗಿದೆ.

ತಜ್ಞರ ವರದಿಯೇ ಸಂಶಯ?: ನೆರೆ ಹಾಗೂ ಮಳೆಯಿಂದ ಹಾನಿಯಾದ ವರದಿ ತಯಾರಿಕೆಯನ್ನು ಸಂಬಂಧಪಟ್ಟ ತಜ್ಞ ಅಭಿಯಂತರರು ಸಿದ್ಧಪಡಿಸಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಕಳೆದ ನಾಲ್ಕೈದು ವರ್ಷಗಳಿಂದ ದುರಸ್ತಿಯನ್ನು ಎದುರು ನೋಡುತ್ತಿದ್ದ ರಸ್ತೆ-ಚರಂಡಿಗಳು ವರದಿಯಲ್ಲಿ ಸೇರ್ಪಡೆಯಾಗಿರುವುದರ ಹಿಂದೆ ಭ್ರಷ್ಟಾಚಾರದ ವಾಸನೆ ಬಡಿಯುತ್ತಿದೆ. ಪಟ್ಟಣದ ಸಾಗರ ರಸ್ತೆಯ ಎರಡು ಭಾಗದ ರಾಜಕಾಲುವೆ ಮಳೆಯಿಂದ ಹಾನಿಯಾಗಿದ್ದು, 80 ಲಕ್ಷ ರೂ., ನಷ್ಟವಾಗಿದೆ ಹಾಗೂ ಬೀದಿ ದೀಪ ಮತ್ತು ವಿದ್ಯುತ್‌ ಲೈನ್‌ಗೆ ಸುಮಾರು 20 ಲಕ್ಷ ರೂ. ನಷ್ಟವಾಗಿದೆ ಎಂದು ವರದಿ ಸಲ್ಲಿಸಲಾಗಿದೆ.

ಒಟ್ಟಾರೆ ಸ್ಥಳೀಯ ಪಪಂ ಸಲ್ಲಿಸಿದ ಮಳೆ ಹಾನಿ ವರದಿಯೂ ಅಭಿವೃದ್ಧಿಗೋ ಅಥವಾ ಕಳಪೆ ಕಾಮಗಾರಿಗಳನ್ನು ಮುಚ್ಚಿಹಾಕುವ ಪ್ರಯತ್ನವೇ?. ಅಥವಾ ಕಾಟಾಚಾರಕ್ಕೆ ಸಲ್ಲಿಸಿದ ವರದಿಯೇ ಎಂಬುದನ್ನು ಸಂಬಂಧಪಟ್ಟ ಇಲಾಖಾ ಮೇಲಧಿಕಾರಿಗಳು ಖುದ್ದು ಪರಿಶೀಲನೆ ನಡೆಸಿ, ಲೋಪಯುಕ್ತ ವರದಿ ತಯಾರಿಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಟಾಪ್ ನ್ಯೂಸ್

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.