ತಾಲೂಕಿನ ಸಮಗ್ರ ಅಭಿವೃದ್ಧಿಯೇ ಧ್ಯೇಯ
Team Udayavani, Dec 22, 2019, 3:56 PM IST
ಸೊರಬ: ತಾಲೂಕಿನ ಸಮಗ್ರ ಅಭಿವೃದ್ಧಿ ನನ್ನ ಧ್ಯೇಯವಾಗಿದ್ದು, ಚಿಕ್ಕಪುಟ್ಟ ಗ್ರಾಮಗಳನ್ನು ಪಟ್ಟಣದ ಮುಖ್ಯ ರಸ್ತೆಗಳಿಗೆ ಸಂಪರ್ಕ ಕಲ್ಪಿಸಿ ಆ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದು ಹಾಗೂ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸುವುದು ನನ್ನ ಗುರಿಯಾಗಿದೆ ಎಂದು ಶಾಸಕ ಕುಮಾರ್ ಬಂಗಾರಪ್ಪ ಹೇಳಿದರು.
ತಾಲೂಕಿನ ಕುಂದಗಸವಿ ಗ್ರಾಮದಲ್ಲಿ ಸಾಗರ- ಹಾವೇರಿ ರಸ್ತೆಯ ಕವಡಿ ಗ್ರಾಮದಿಂದ ಕುಂದಗಸವಿ ಎಸ್ಸಿ ಕೇರಿಗೆ ಸಂಪರ್ಕ ಕಲ್ಪಿಸುವ ಸುಮಾರು 1 ಕೋಟಿ ರೂ. ವೆಚ್ಚದ ಡಾಂಬರೀಕರಣ ರಸ್ತೆಯ ಶಂಕುಸ್ಥಾಪನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮಗಳ ಅಭಿವೃದ್ಧಿಯಲ್ಲಿ ರಸ್ತೆ, ನೀರು ಬಹು ಮುಖ್ಯವಾದ ಪಾತ್ರವನ್ನು ವಹಿಸುತ್ತವೆ. ಈ ನಿಟ್ಟಿನಲ್ಲಿ ನೀರಾವರಿ ಮತ್ತು ರಸ್ತೆಯ ಅಭಿವೃದ್ಧಿಯೆಡೆಗೆ ಗಮನ ಕೊಡುತ್ತೇನೆ. ನಾನು ಶಾಸಕನಾಗಿ ದಿ.ಬಂಗಾರಪ್ಪನವರ ಹಿಂದುಳಿದ ವರ್ಗದ ಏಳಿಗೆಯನ್ನು ಮುಂದುವರಿಸಿಕೊಂಡು ಮುಖ್ಯಮಂತ್ರಿ ಯಡಿಯೂರಪ್ಪನವರ ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ಎನ್ನುವ
ಧ್ಯೇಯ ವಾಕ್ಯದೊಂದಿಗೆ ತಾಲೂಕಿನ ಕುಗ್ರಾಮಗಳನ್ನು ಅಭಿವೃದ್ಧಿಯ ಪಥದೆಡೆಗೆ ತೆಗೆದುಕೊಂಡು ತಾಲೂಕನ್ನು ಸರ್ವತೋಮುಖ ಅಭಿವೃದ್ಧಿಪಡಿಸುತ್ತೇನೆ ಎಂದರು.
ಜಿಪಂ ಸದಸ್ಯೆ ತಾರಾ ಶಿವಾನಂದ್, ತಾಪಂ ಅಧ್ಯಕ್ಷೆ ನಯನಾ ಶ್ರೀಪಾದ್ ಹೆಗಡೆ, ತಾಪಂ ಸದಸ್ಯ ನಾಗರಾಜ್ ಚಿಕ್ಕಸವಿ, ಶಿಗ್ಗಾ ಗ್ರಾಪಂ ಅಧ್ಯಕ್ಷೆ ವಸಂತಾ ಶಿವಮೂರ್ತಿ, ಉಪಾಧ್ಯಕ್ಷ ಪ್ರಭಾಕರ,
ಪ್ರಮುಖರಾದ ಎಂ.ಡಿ. ಉಮೇಶ್, ಕೃಷ್ಣಪ್ಪ ಶಿಗ್ಗಾ, ಭೋಗೇಶ್, ಗ್ರಾಮದ ಪ್ರಮುಖರಾದ ಲಕ್ಕಪ್ಪ, ನೀಲಕಂಠಪ್ಪ, ಕೆರಿಯಪ್ಪ, ಹನುಮಂತಪ್ಪ, ಕಾಳಿಂಗಪ್ಪ, ಬಸವರಾಜಪ್ಪ, ಲೇಕಪ್ಪ, ಕೃಷ್ಣಮೂರ್ತಿ, ಅಜ್ಜಪ್ಪ, ಶೇಖರಪ್ಪ, ಹುಚ್ಚಪ್ಪ, ಪ್ರವೀಣ್, ಲಿಂಗರಾಜ, ಡಾಕಪ್ಪ, ಗಣೇಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.