ಕೂತಗೋಡು ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ ಗರಿ

Team Udayavani, Oct 23, 2019, 5:19 PM IST

23-October-26

ಶೃಂಗೇರಿ: ತಾಲೂಕಿನ ಕೂತಗೋಡು ಗ್ರಾಮ ಪಂಚಾಯಿತಿ ಅಭಿವೃದ್ಧಿ ಮೂಲಕ ಪ್ರಸಕ್ತ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ಸರಕಾರದ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಜನರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದೆ. 2011ರ ಜನಗಣತಿಯಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2458 ಜನಸಂಖ್ಯೆ ಇದ್ದು, ಸರಕಾರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಇದೆ. ಶೇ.90 ರಷ್ಟು ಸಾಕ್ಷರತೆಯನ್ನು ಹೊಂದಿದ ಕೂತುಗೋಡಿನ ಸಾಕಷ್ಟು ಜನರು ದೇಶ, ವಿದೇಶಗಳಲ್ಲಿ ಉನ್ನತ ಹುದ್ದೆಯಲ್ಲಿದ್ದಾರೆ.

ಬೆಟ್ಟಗೆರೆ, ವೈಕುಂಠಪುರ, ಕೊಚ್ಚವಳ್ಳಿ, ಕೂತುಗೋಡು, ಗುಂಡ್ರೆ 5 ಕಂದಾಯ ಗ್ರಾಮಗಳನ್ನು ಕೂತುಗೋಡು ಗ್ರಾಮ ಪಂಚಾಯಿತಿ ಹೊಂದಿದೆ. 5 ಗ್ರಾಮಗಳಲ್ಲಿ 55ಕ್ಕೂ ಮಿಗಿಲಾಗಿ ಹಳ್ಳಿಗಳಿವೆ. ಸ್ವಚ್ಛತೆ ಹಾಗೂ ಶಿಸ್ತನ್ನು ಗ್ರಾಪಂ ಅಳವಡಿಸಿಕೊಂಡಿದೆ. ಕಚೇರಿಯಲ್ಲಿರುವ ಸೂಚನಾ ಫಲಕದಲ್ಲಿ ಸರಕಾರದಿಂದ ಬಂದ ಆದೇಶಗಳನ್ನು ಕ್ರಮವಾಗಿ ಜೋಡಿಸಿಡಲಾಗಿದೆ. ಬಯಲು ಮಲ ವಿಸರ್ಜನೆ ಅನಾಗರೀಕತೆಯ ಲಕ್ಷಣ, ಶೌಚಾಲಯ ನಿರ್ಮಿಸಿ ಬಳಸುವುದೇ ನಾಗರೀಕತೆಯ ಲಕ್ಷಣ ಎಂಬ ನಾಮಫಲಕವಿದೆ.

ಕೂತುಗೋಡು ಗ್ರಾಪಂನಲ್ಲಿ ನಾಗೇಶ್‌ ಹೆಗ್ಡೆ ಕೊಚ್ಚವಳ್ಳಿ(ಅಧ್ಯಕ್ಷ), ಚಂದ್ರಾವತಿ ಸುರೇಶ್‌ (ಉಪಾಧ್ಯಕ್ಷೆ), ಗಾಯಿತ್ರಿ ನಾಗೇಶ್‌, ಪ್ರಮೋದಿನಿ ಎಲ್ಲಪ್ಪ, ನಾರಯಣ್‌, ಪ್ರೇಮ್‌ ಕುಮಾರ್‌, ಪ್ರೇಮ ಚಂದ್ರಶೇಖರ್‌ (ಸದಸ್ಯರು). ನರೇಗಾ ಯೋಜನೆಯ ವಿವರ- 2018-19ರಲ್ಲಿ ನರೇಗಾ ಯೋಜನೆಯಡಿ ವಿವಿಧ ಕಾಮಗಾರಿಗಳಿಗಾಗಿ 13.64 ಲಕ್ಷ ರೂ.ಅನುದಾನ ವಿನಿಯೋಗಿಸಲಾಗಿದೆ. ಶೌಚಾಲಯ, ವಿವಿಧ ವಸತಿ ಯೋಜನೆಗೆ ಅನುದಾನ, ಕಾಂಕ್ರೀಟ್‌ ರಸ್ತೆ, ಸಾರ್ವಜನಿಕರಿಗಾಗಿ ಬಾವಿ, ದನದ ಕೊಟ್ಟಿಗೆ, ಕಾಲುಸಂಕ ನಿರ್ಮಾಣ ಮುಂತಾದ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಸರಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿದ ಕೀರ್ತಿಗೆ ಕೂತುಗೋಡು ಗ್ರಾಪಂ ಪಾತ್ರವಾಗಿದೆ.

ಭ್ರಷ್ಟಾಚಾರ ತಾಂಡವಾಡುವ ಈ ಕಾಲದಲ್ಲಿ ಗ್ರಾಪಂ ಆಡಳಿತ ಪಾರದರ್ಶಕತೆ ಕಾಯ್ದುಕೊಂಡಿದೆ. ಸಾಮಾನ್ಯ, ವಾರ್ಡು, ಗ್ರಾಮ ಸಭೆಗಳನ್ನು ನಿಗದಿತ ಸಮಯದಲ್ಲಿ ಮಾಡಿ ಜನಸಾಮಾನ್ಯರ ಸಮಸ್ಯೆಗೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅಭಿವೃದ್ಧಿ ಕಾರ್ಯದಲ್ಲಿ ಸರಕಾರದ ಆದೇಶದಂತೆ ಅನುದಾನವನ್ನು ಸಮರ್ಪಕವಾಗಿ ಜನಪ್ರತಿನಿಧಿ ಗಳು  ತ್ಯಂತ ವಿವೇಚನೆಯಿಂದ ಬಳಸುತ್ತಿದ್ದು, ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಪ್ರತಿ ಹಳ್ಳಿಯಲ್ಲಿ ಶೌಚಾಲಯಗಳನ್ನು ನಿರ್ಮಿಸಿದ ಖ್ಯಾತಿಯ ಜೊತೆಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ಇಲಾಖೆಯ ಪಂಚತಂತ್ರ, ಗಾಂಧೀ ಸಾಕ್ಷಿ ತಂತ್ರಾಂಶದಲ್ಲಿ ಅಳವಡಿಸಿರುವುದು, ಕಾಯಕ, ನರೇಗಾ, ಸಕಾಲ ಯೋಜನೆಯಡಿ ಗ್ರಾಮಸ್ಥರಿಗೆ ಸ್ಪಂದನೆ, ಸರಕಾರದ ಎಲ್ಲಾ ಯೋಜನೆ‌ಗಳ ಅನುಷ್ಠಾನ ಹಾಗೂ ದಾಖಲೆಗಳ ಸಮರ್ಪಕ ನಿರ್ವಹಣೆಯ ಬಗ್ಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಆರ್‌.ಪಿ.ಅಮೀರ್‌ ಸುಹಿಲ್‌, ಕಾರ್ಯದರ್ಶಿ ಅನ್ನಪೂರ್ಣಾ ಹಾಗೂ ಸಿಬ್ಬಂದಿ ನಿರಂತರ ಶ್ರಮ ಗಮನಾರ್ಹವಾಗಿದೆ.

ಟಾಪ್ ನ್ಯೂಸ್

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.