ಸರ್ಕಾರಿ ಶಾಲೆ ಮಕ್ಕಳಿಗೆ ಬೇಸಿಗೆ ಸಂಭ್ರಮ
48 ದಿನ ವಿಶೇಷ ಶಿಬಿರ ಆಡ್ತಾಡ್ತಾ ಅರಿವು ಕಾರ್ಯಕ್ರಮ ಸರ್ಕಾರಿ ಕಚೇರಿಗಳಂತೆ ಶಾಲೆಗಳೂ ಬೆಳಗ್ಗೆ ಆರಂಭ
Team Udayavani, Mar 31, 2019, 4:00 PM IST
ಸಾಂದರ್ಭಿಕ ಚಿತ್ರ
ಬಾಗಲಕೋಟೆ: ಬೇಸಿಗೆ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಕಚೇರಿಗಳಿಗೆ ನೀಡುವ ಕೆಲಸದ ಅವಧಿ ವಿನಾಯ್ತಿಯನ್ನು ಸರ್ಕಾರಿ ಶಾಲೆಗಳಿಗೂ ನೀಡಲಾಗಿದೆ. ಅಲ್ಲದೇ ಈ ವರ್ಷ ಜಿಲ್ಲೆಯ ಸರ್ಕಾರಿ ಶಾಲೆಗಳ ಮಕ್ಕಳಿಗೆ ಆಡ್ತಾಡ್ತಾ ಅರಿವು ಮೂಡಿಸುವ ಬೇಸಿಗೆ ಸಂಭ್ರಮ ಕಾರ್ಯಕ್ರಮ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ.
ಬಿರು ಬೇಸಿಗೆ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಿಗೆ ಏ.1ರಿಂದ ಬೆಳಗ್ಗೆ 8ರಿಂದ ಮಧ್ಯಾಹ್ನ 1.30ರ ವರೆಗೆ ಕೆಲಸದ ಅವಧಿ ನಿಗದಿ ಮಾಡಲಾಗಿದೆ. ಅದೇ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಶಾಲೆಗಳಿಗೂ ಈ ಆದೇಶ ಅನ್ವಯಿಸಲಾಗಿದೆ. ಸರ್ಕಾರಿ, ಅನುದಾನಿತ ಶಾಲೆಗಳು, ನಿತ್ಯ ಬೆಳಗ್ಗೆ 8ಕ್ಕೆ ಆರಂಭಗೊಂಡು, ಮಧ್ಯಾಹ್ನ 1.30ಕ್ಕೆ ತರಗತಿ ಕೊನೆಗೊಳ್ಳಲಿವೆ.
ಆಡ್ತಾಡ್ತಾ ಅರಿವು: ಕಳೆದ ಎರಡು ವರ್ಷಗಳ ಹಿಂದೆ ಚಾಲ್ತಿಯಲ್ಲಿದ್ದ ಬೇಸಿಗೆ ಸಂಭ್ರಮ ಕಾರ್ಯಕ್ರಮ ಈ ವರ್ಷವೂ ನಡೆಸಲು ಇಲಾಖೆ ಮುಂದಾಗಿದೆ. ಪ್ರತಿದಿನ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬೇಸಿಗೆ ಸಂಭ್ರಮ ಹೆಸರಿನಲ್ಲಿ ಹಲವಾರು ಚಟುವಟಿಕೆ ನಡೆಸಲು ತಯಾರಿ ಮಾಡಿಕೊಳ್ಳಲಾಗಿದೆ. ನೃತ್ಯ, ಸಂಗೀತ, ಸ್ವಚ್ಛತೆ, ಆರೋಗ್ಯ ಅರಿವು, ಸಾಧಕರ ಪರಿಚಯ ಹೀಗೆ ಹಲವು ಕಾರ್ಯಕ್ರಮಗಳನ್ನು ಮಕ್ಕಳಿಗೆ ಆಟ ಆಡಿಸುತ್ತಲೇ ತಿಳಿಸಲು ಶಿಕ್ಷಕರಿಗೆ ಜವಾಬ್ದಾರಿ ವಹಿಸಲಾಗಿದೆ.
ನಿತ್ಯ ಬಿಸಿಯೂಟ: ಬರ ಹಿನ್ನೆಲೆಯಲ್ಲಿ ಈ ವರ್ಷವೂ ಜಿಲ್ಲೆಯ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 461 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಿದ್ದು, ಇಲ್ಲಿ 17,981 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಅಲ್ಲದೇ 841 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿದ್ದು, ಇಲ್ಲಿ 1,56,278 ಮಕ್ಕಳು ವಿದ್ಯಾರ್ಜನೆ ಮಾಡುತ್ತಾರೆ. ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಯ 1,74,259 ಮಕ್ಕಳು ಮಧ್ಯಾಹ್ನ ಬಿಸಿಯೂಟ ಯೋಜನೆ ಲಾಭ ಪಡೆಯಲಿದ್ದಾರೆ.
ಅಲ್ಲದೇ 9 ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಗಳಿದ್ದು, ಇಲ್ಲಿ 848 ಮಕ್ಕಳು, 104 ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗಳಿದ್ದು, ಇಲ್ಲಿ 31,381 ವಿದ್ಯಾರ್ಥಿಗಳಿದ್ದಾರೆ. ಅವರಿಗೂ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ.
ಇನ್ನು ಜಿಲ್ಲೆಯಲ್ಲಿ 183 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಇಲ್ಲಿ 30,784 ಮಕ್ಕಳಿದ್ದಾರೆ. 124 ಅನುದಾನಿತ ಪ್ರೌಢ ಶಾಲೆಗಳಿದ್ದು, ಇಲ್ಲಿ 28,155 ಮಕ್ಕಳು ವ್ಯಾಸಂಗ ಮಾಡುತ್ತಾರೆ. ಇದರಲ್ಲಿ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ಪರೀಕ್ಷೆ ಬರೆದು ತೆರಳಿದ್ದು, ಅವರನ್ನು ಹೊರತುಪಡಿಸಿದ ಉಳಿದ ಮಕ್ಕಳಿಗೆ ಬಿಸಿ ಊಟ ಹಾಗೂ ಬೇಸಿಗೆ ಸಂಭ್ರಮ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಡಿಡಿಪಿಐ ಬಿ.ಎಚ್. ಗೋನಾಳ ತಿಳಿಸಿದರು.
ಏ.10ರ ವರೆಗೆ ಶಾಲೆಗಳಲ್ಲಿ ಎಂದಿನಂತೆ ಪಠ್ಯಕ್ರಮ ನಡೆಯಲಿವೆ. ಏ.11ರಿಂದ ಮೇ 28ರ ವರೆಗೆ ಒಟ್ಟು 48 ದಿನಗಳ ಕಾಲ ಶಾಲೆಗಳಿಗೆ ಸರ್ಕಾರಿ ರಜೆ ಇದ್ದು, ಆ ದಿನಗಳಲ್ಲಿ ಬೇಸಿಗೆ ಸಂಭ್ರಮ ಕಾರ್ಯಕ್ರಮ, ಬಿಸಿ ಊಟ ನೀಡಲಾಗುವುದು. ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಜನಪ್ರತಿನಿಧಿಗಳನ್ನೂ ಬೇಸಿಗೆ ಸಂಭ್ರಮ ಕಾರ್ಯಕ್ರಮದಲ್ಲಿ ಒಗ್ಗೂಡಿಸಿಕೊಳ್ಳಲಾಗುವುದು. ಈ ಕುರಿತು ಜಿಪಂ ಸಿಇಒ ಗಂಗೂಬಾಯಿ ಮಾನಕರ ವಿಶೇಷ ನಿರ್ದೇಶನ ನೀಡಿದ್ದು, ಬೇಸಿಗೆ ಸಂಭ್ರಮ ವೇಳೆ ಬಿಸಿಯೂಟ ನೀಡುವಾಗ ಮಕ್ಕಳಿಗೆ ಇಡ್ಲಿ, ಸಿಹಿ ತಿನಿಸು ಸಹಿತ ವಿಶೇಷ ತಿನಿಸು ಕೊಡಲು ಸೂಚಿಸಿದ್ದಾರೆ. ಇದಕ್ಕಾಗಿ ದಾನಿಗಳ ಸಹಕಾರವೂ ಪಡೆಯಲಾಗುವುದು ಎಂದು ಡಿಡಿಪಿಐ ಗೋನಾಳ ಉದಯವಾಣಿಗೆ ವಿವರಿಸಿದರು.
ಸರ್ಕಾರಿ ಕಚೇರಿಗಳಂತೆ ಶಾಲೆಗಳೂ ನಿತ್ಯ ಬೆಳಗ್ಗೆ 8ರಿಂದ ಮಧ್ಯಾಹ್ನ 1.30ರ ವರೆಗೆ ಕಾರ್ಯ ನಿರ್ವಹಿಸಲಿವೆ. ಈ ಬಾರಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗಾಗಿ ಬೇಸಿಗೆ ಸಂಭ್ರಮ ನಡೆಸಲಾಗುತ್ತಿದೆ. ನಿತ್ಯ ಆಟವಾಡುತ್ತಲೇ ಹಲವು ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಗುವುದು.
. ಬಿ.ಎಚ್. ಗೋನಾಳ, ಡಿಡಿಪಿಐ
ಸರ್ಕಾರಿ ಕಚೇರಿ ವೇಳೆಯಂತೆ ಶಾಲೆಗಳನ್ನೂ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಸಲು ಆದೇಶಿಸಿರುವುದು ಒಳ್ಳೆಯ ಕೆಲಸ. ಈ ಆದೇಶ ಮಾಡಿದ ಸರ್ಕಾರವನ್ನು, ಶಿಕ್ಷಕರ ಸಂಘದಿಂದ ಅಭಿನಂದಿಸುತ್ತೇವೆ.
. ಚಂದ್ರಶೇಖರ ನುಗ್ಲಿ,
ರಾಜ್ಯ ಪ್ರಧಾನ ಕಾರ್ಯದರ್ಶಿ,
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ
ವಿಶೇಷ ವರದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.