ಬಿಜೆಪಿ ಬೆಂಬಲಿಸಿ ಸಂವಿಧಾನ ಉಳಿಸಿ

Team Udayavani, Mar 24, 2019, 1:32 PM IST

bjp-ban

ಸಕಲೇಶಪುರ: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಸಂವಿಧಾನ ಉಳಿಸಲು ಮತದಾರರು ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಹೇಳಿದರು.

ಪಟ್ಟಣದ ಒಕ್ಕಲಿಗ ಸಮುದಾಯಭವನದಲ್ಲಿ ಸಕಲೇಶಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿ ಹಾಸನ ಜಿಲ್ಲೆಯಲ್ಲಿ ಕುಟುಂಬ ರಾಜಕೀಯ ನಡೆಯುತ್ತಿದ್ದು ಇದಕ್ಕೆ ಮತದಾರರು ತಕ್ಕ ಪಾಠ ಕಲಿಸಬೇಕಾಗಿದೆ ಎಂದರು.

ಕಾಂಗ್ರೆಸ್‌ ಕಾರ್ಯಕರ್ತರ ನಿರ್ಲಕ್ಷ್ಯ: ಯಾವುದೇ ಅನುಭವ ಇಲ್ಲದವರಿಗೆ ಸಂಸತ್ತಿಗೆ ಕಳುಹಿಸಲು ಟಿಕೆಟ್‌ ನೀಡಲಾಗುತ್ತಿದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರವಿದ್ದರೂ ಸಹ ಕಾಂಗ್ರೆಸ್‌ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ ಅಧಿಕಾರ ಸಿಕ್ಕಿದಾಗ ಸಂಪೂರ್ಣವಾಗಿ ಕಾಂಗ್ರೆಸ್ಸಿಗರನ್ನು ಮರೆತ ದೇವಗೌಡರ ಕುಟಂಬಕ್ಕೆ ಇದೀಗ ಕಾಂಗ್ರೆಸ್‌ ಮುಖಂಡರ ನೆನಪಾಗುತ್ತಿದೆ. ತಮ್ಮ ಸ್ವಾರ್ಥಕ್ಕಾಗಿ ದೇವೇಗೌಡರ ಕುಟುಂಬದವರು ಏನು ಬೇಕಾದರು ಮಾಡುತ್ತಾರೆ ಎಂದರು.

ಕಳೆದ ಬಾರಿ ನಾನು ಕಾಂಗ್ರೆಸ್‌ನಿಂದ ಲೋಕಸಭಾ ಚುನಾವಣೆಯಲ್ಲಿ ಸ್ಫರ್ಧಿಸಿದಾಗ ಸಕಲೇಶಪುರ ಕ್ಷೇತ್ರ ನನಗೆ 4,200 ಮತಗಳನ್ನು ಮುನ್ನಡೆ ಕೊಟ್ಟಿದೆ. ಜಿಲ್ಲೆಯಲ್ಲಿ ದೇವೇಗೌಡರ ಕುಟುಂಬ ರಾಜಕಾರಣದ ವಿರುದ್ಧವಿರುವರು ಈ ಕ್ಷೇತ್ರದ ಜನ ಅದಕ್ಕಾಗಿ ಇಲ್ಲಿನ ಜನತೆಯನ್ನು ಅಭಿನಂದಿಸುತ್ತೇನೆ.

ಹೊಳೆ ನರಸೀಪುರ ಅಭಿವೃದ್ಧಿ: ದೇವೇಗೌಡರ ಬಹುತೇಕ ಅನುದಾನ ಹೊಳೆನರಸೀಪುರಕ್ಕೆ ಮಾತ್ರ ಸೀಮಿತವಾಗಿದೆ, ಜಿಲ್ಲೆಯ ಇತರ ಕಡೆಗೆ ಅನುದಾನ ನೀಡಿರುವ ಬಗ್ಗೆ ಅವರು ಮಾಹಿತಿ ನೀಡಲಿ, ಬಿಜೆಪಿ ಸಹಾಯವಿಲ್ಲದಿದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ 37 ಸ್ಥಾನ ಗೆಲ್ಲುತ್ತಿರಲಿಲ್ಲ. ಹಾಸನ ಜಿಲ್ಲೆಯ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಜೆಡಿಎಸ್‌ ಶಾಸಕರಿದ್ದರು ಸಹ ಅವರಿಗೆ ಯಾಕೆ ಮಂತ್ರಿ ಸ್ಥಾನ ನೀಡಿಲ್ಲ ಎಂದರು.

ದೇಶದ ಪ್ರಧಾನಿ ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗಲು, ಈ ದೇಶದ ರಕ್ಷಣೆಗಾಗಿ ಬಿಜೆಪಿಯ ಪರ ಪ್ರತಿಯೊಬ್ಬರು ವೈಮನಸ್ಸು ತೊರೆದು ಒಟ್ಟಾಗಿ ಕೆಲಸ ಮಾಡಬೇಕು ಹಾಗೂ ಸೋಮವಾರ ನಡೆಯಲಿರುವ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ವಿಧಾನಪರಿಷತ್‌ ಸದಸ್ಯ ಪ್ರಾಣೇಶ್‌ ಮಾತನಾಡಿ, ಮೋದಿರವರು ಮತ್ತೂಮ್ಮೆ ಪ್ರಧಾನಿಯಾಗದಿದ್ದಲ್ಲಿ ಅವರಿಗೆ ನಷ್ಟವಿಲ್ಲ, ಆದರೆ ಈ ದೇಶಕ್ಕೆ ನಷ್ಟವಾಗುತ್ತದೆ. ಈ ನಿಟ್ಟಿನಲ್ಲಿ ದೇಶದ ಉಳಿವಿಗಾಗಿ ನಾವು ಮೋದಿರವರ ಪರ ಕೆಲಸ ಮಾಡಿ ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಎ.ಮಂಜಣ್ಣನವರನ್ನು ಗೆಲ್ಲಿಸುವ ಕೆಲಸ ಮಾಡೋಣ ಎಂದರು.

ಕುಟುಂಬ ರಾಜಕಾರಣದಿಂದ ಜನ ಬೇಸತ್ತಿದ್ದು ಈ ಬಾರಿ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ. ಈ ಹಿಂದೆ ವಾಜಪೇಯಿಯವರು ಪ್ರಧಾನಿ ಮಂತ್ರಿಯಾಗಿದ್ದಾಗ ಬೇರೆ ಯಾರೂ ಮಾಡದ ಅಭಿವೃದ್ಧಿ ಕೆಲಸಗಳನ್ನು ಮಾಡಿದರು. ಕಾರ್ಯಕರ್ತರು ಅತಿಯಾದ ಆತ್ಮವಿಶ್ವಾಸದಿಂದ ಮೈಮರೆತ ಕಾರಣ ಅವರು ಸೋಲನ್ನಭವಿಸಬೇಕಾಯಿತು. ಆದರೆ ಈ ಬಾರಿ ಈ ರೀತಿಯಾಗಬಾರದು ಎಲ್ಲಾರು ಒಟ್ಟಾಗಿ ಕಾಂಗ್ರೆಸ್‌ ಮತಗಳನ್ನು ಸೆಳೆಯುವ ಪ್ರಯತ್ನ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ರೈತ ಮೋರ್ಚಾ ಅಧ್ಯಕ್ಷ ಬೆಣ್ಣೂರು ರೇಣುಕುಮಾರ್‌, ಮಾಜಿ ಶಾಸಕ ಬಿ.ಆರ್‌ ಗುರುದೇವ್‌, ಹಿಂದುಳಿದ ವರ್ಗಗಳ ಅಧ್ಯಕ್ಷ ಲಕ್ಷ್ಮಣ್‌, ಬಿಜೆಪಿ ತಾಲೂಕು ಅಧ್ಯಕ್ಷ ಪ್ರತಾಪ್‌, ಆಲೂರು ಮಂಡಲ ಅಧ್ಯಕ್ಷ ಲೋಕೇಶ್‌, ಹಾಸನ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನಾಗೇಶ್‌, ಸಕಲೇಶಪುರ ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಅಮಿತ್‌ ಶೆಟ್ಟಿ, ಪುರಸಭಾ ಸದಸ್ಯರುಗಳಾದ ವನಜಾಕ್ಷಿ, ರೇಖಾ ರುದ್ರಕುಮಾರ್‌, ಪಕ್ಷದ ಮುಖಂಡರುಗಳಾದ ಶಾಂತ ಸುಧೀರ್‌, ಜೈಮಾರುತಿ ದೇವರಾಜ್‌, ಅವರೆಕಾಡು ಪೃಥ್ವಿ, ಧರ್ಮರಾಜ್‌, ಲೋಹಿತ್‌ ಜಂಭರ್ಡಿ, ದೀಪಕ್‌, ದುಷ್ಯಂತ್‌, ಸೇರಿದಂತೆ ಇನ್ನು ಅನೇಕರು ಹಾಜರಿದ್ದರು.

ಟಾಪ್ ನ್ಯೂಸ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.