ಮಕ್ಕಳ ಸಾಗಾಟ ತಡೆಯಲು ಸಹಕರಿಸಿ
Team Udayavani, Nov 15, 2019, 6:37 PM IST
ಸುರಪುರ: ಸಮಾಜದಲ್ಲಿ ಮಕ್ಕಳ ಮೇಲೆ ಹಲ್ಲೆ, ದೌರ್ಜನ್ಯ ಲೈಂಗಿಕ ಕಿರುಕುಳ, ಕಳ್ಳ ಸಾಗಾಟ ಅವ್ಯಾಹತವಾಗಿ ನಡೆದಿವೆ. ಇದನ್ನು ತಡೆಯುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಈ ದಿಸೆಯಲ್ಲಿ ಸಾರ್ವಜನಿಕರು ಕಾನೂನಿನೊಂದಿಗೆ ಸಹಕರಿಸಬೇಕು ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ತಯ್ಯಬಾ ಸುಲ್ತಾನಾ ಹೇಳಿದರು.
ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಕನೂನು ಸೇವಾ ಸಮಿತಿ, ವಕೀಲರ ಸಂಘ, ಸಿಡಿಪಿಒ ಸೇರಿದಂತೆ ಇತರೆ ಇಲಾಖೆಗಳ ಸಹಯೋಗದಲ್ಲಿ ಗುರುವಾರ ಆಯೋಜಿಸಲಾಗಿದ್ದ ಮಕ್ಕಳ ದಿನಾಚರಣೆ ಹಾಗೂ ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ ಕಾನೂನಿನ ನೆರವು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳನ್ನು ಕದ್ದು ದೊಡ್ಡ ದೊಡ್ಡ ನಗರಗಳಿಗೆ ಸಾಗಿಸಲಾಗುತ್ತಿದೆ. ಕರೆದೊಯ್ದು ಮಕ್ಕಳನ್ನು ಮಾರಾಟ ಮಾಡಲಾಗುತ್ತಿದೆ. ಕೆಲ ಗುಂಪುಗಳು ಆ ಮಕ್ಕಳನ್ನು ಬೇರೆ ಬೇರೆ ವೃತ್ತಿಗಳಲ್ಲಿ ತೊಡಗಿಸಿಕೊಂಡು ಹಣ ಸಂಪಾದಿಸುವ ದಂಧೆಗೆ ಇಳಿದಿವೆ. ಇದನ್ನು ತಡೆಯಲು ಎಂದು ಹೇಳಿದರು. ತಪ್ಪು ಮಾಡುವವರಿಗೆ ಕಾನೂನಿನ ಅರಿವು ಇರುವುದಿಲ್ಲ. ಕಾನೂನಿನ ಜ್ಞಾನ ಅವಶ್ಯಕವಾಗಿದೆ. ಇತ್ತೀಚೆಗೆ ದೇಶ ಸೇರಿದಂತೆ ರಾಜ್ಯದಲ್ಲಿ ಮಕ್ಕಳ ಮೇಲಿನ ದಬ್ಟಾಳಿಕೆ ಹೆಚ್ಚಾಗುತ್ತಿರುವ ಪ್ರಕರಣ ಕಾಣಬಹುದು. ಮಕ್ಕಳಿಗೆ ಕಿರುಕುಳ ನೀಡುವುದು ಕಾನೂನು ಪ್ರಕಾರ ಅಪರಾಧ. ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಕೆಲಸವಾಗಬೇಕು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾದಲ್ಲಿ ಪೋಷಕರಿಗೆ ತಿಳಿಸಬೇಕು. ಪೋಷಕರು ಪೊಲೀಸರಿಗೆ ಮಾಹಿತಿ ನೀಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಮೊಬೈಲ್ ಎಷ್ಟು ಪ್ರಯೋಜನಕಾರಿಯೋ ಅಷ್ಟೇ ಅಪಾಯಕಾರಿ. ಅಗತ್ಯಕ್ಕೆ ತಕ್ಕಷ್ಟು ಬಳಸಬೇಕು. ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ಓದಿ ಯಶಸ್ಸು ಪಡೆಯಬೇಕು ಎಂದು ಹೇಳಿದರು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಅಮರನಾಥ ಬಿ. ಎನ್. ಮಾತನಾಡಿ, ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಮಹಿಳೆಯರ ಅಭಿವೃದ್ಧಿಗೆ ಒತ್ತು ನೀಡಬೇಕು. ಕೂಲಿಗಾಗಿ ಮಕ್ಕಳನ್ನು ಶಾಲೆ ಬಿಡಿಸುವುದು ಸರಿಯಲ್ಲ. ಬಾಲ್ಯದಲ್ಲಿಯೇ ಮದುವೆ ಮಾಡುವುದು ಅಕ್ಷಮ್ಯ ಅಪರಾಧ. ಹೀಗಾಗಿ ಹೆಣ್ಣು ಮಕ್ಕಳನ್ನು ರಕ್ಷಿಸುವ ಮೂಲಕ ಅವರನ್ನು ಮುಖ್ಯವಾಹಿನಿಗೆ ಕರೆ ತರುವ ಕೆಲಸ ಆಗಬೇಕಿದೆ. ಪೋಷಕರು ಮಕ್ಕಳಲ್ಲಿ ತಾರತಮ್ಯ ಮಾಡಬಾರದು. ಗಂಡು ಮಗನಿಗೆ ನೀಡುವಷ್ಟು ಅವಕಾಶ ಪ್ರೋತ್ಸಾಹ ಹೆಣ್ಣುಮಕ್ಕಳಿಗೂ ನೀಡಬೇಕು ಎಂದು ಹೇಳಿದರು.
ಜೀವನದ ಕೊನೆ ಅವಧಿಯಲ್ಲಿ ನೆರವಿಗೆ ಹೆಣ್ಣು ಮಕ್ಕಳು ನಿಲ್ಲುತ್ತಾರೆಯೇ ಹೊರತು ಪುರುಷರಲ್ಲ. ಮೂಢನಂಬಿಕೆಯಿಂದಾಗಿ ಗಂಡು ಮಗುವೇ ಬೇಕು ಎಂದು ಹೆಣ್ಣು ಭ್ರೂಣಹತ್ಯೆ ವ್ಯಾಪಾಕವಾಗಿ ನಡೆಯುತ್ತಿದೆ. ಹೆಣ್ಣು ಶಿಶು ಹತ್ಯೆ ಮಹಾಪಾಪ. ಇದನ್ನು ತಡೆಯಲು ಕಾನೂನಿನೊಂದಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹೇಳಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಾಲ್‌ಸಾಬ್ ಪೀರಾಪುರ, ವಕೀಲರಾದ ಜಯಲಲಿತಾ ಪಾಟೀಲ, ಶಖಾವತ್‌ಹುಸೇನ್ ಉಪನ್ಯಾಸ ನೀಡಿದರು ಕಾಲೇಜಿನ ಪ್ರಾಚಾರ್ಯ ವೆಂಕಟೇಶ ನಾಯಕ ಅಧ್ಯಕ್ಷತೆ ವಹಿಸಿದ್ದರು. ವಕೀಲ ಸಂಘದ ಅಧ್ಯಕ್ಷ ಮಹಮದ್ ಹುಸೇನ್, ವಕೀಲ ಗುರುಪಾದಪ್ಪ ಬನ್ಹಾಳ, ಸಮಾಜ ಕಲ್ಯಾಣ ಅಧಿಕಾರಿ ಸತ್ಯನಾರಾಯಣ ದರಬಾರಿ, ಎಸ್.ಎಸ್. ಕರಿಕಬ್ಬಿ ಇದ್ದರು. ಬಸವರಾಜ ಗೋಗಿ ಸ್ವಾಗತಿಸಿದರು. ವಕೀಲ ಮಲ್ಲಣ್ಣ ಭೋವಿ ನಿರೂಪಿಸಿದರು. ಅಸೀನಾಬಾನು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.