ಮತ್ತೆ ಅಬ್ಬರಿಸಿದ ಕೃಷ್ಣಾನದಿ ಪ್ರವಾಹ

ಹೊಲ-ಗದ್ದೆಗಳಿಗೆ ನುಗ್ಗಿದ ನೀರು

Team Udayavani, Oct 24, 2019, 1:11 PM IST

24-October-11

ಸಿದ್ದಯ್ಯ ಪಾಟೀಲ

ಸುರಪುರ: ನಾರಾಯಣಪುರ ಬಸವಸಾಗರ ಜಲಾಶಯದಿಂದ ಬುಧವಾರ 3.70 ಲಕ್ಷ ಕ್ಯೂಸೆಕ್‌ ನೀರು ಕೃಷ್ಣಾ ನದಿಗೆ ಹರಿಬಿಟ್ಟ ಪರಿಣಾಮ ನೆರೆ ಹಾವಳಿಯಿಂದಾಗಿ ಹೊಲ-ಗದ್ದೆಗಳಿಗೆ ನೀರು ನುಗ್ಗುತ್ತಿದ್ದು, ಅಪಾರ ಪ್ರಮಾಣದಲ್ಲಿ ಮತ್ತೂಮ್ಮೆ ಬೆಳೆ ನಷ್ಟ ಆಗುವ ಲಕ್ಷಣಗಳು ಕಂಡು ಬರುತ್ತಿದೆ.

ಇದರಿಂದ ನದಿಪಾತ್ರದ ಜನರಲ್ಲಿ ಆತಂಕ ಮನೆ ಮಾಡಿದೆ. ಕಳೆದ ಎರಡು ತಿಂಗಳ ಹಿಂದೆ ಪ್ರವಾಹ ಉಂಟಾಗಿ ತಾಲೂಕಿನಲ್ಲಿ ನದಿ ಪಾತ್ರದ ಜಮೀನುಗಳಿಗೆ ನೀರು ನುಗ್ಗಿ ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಾಶವಾಗಿತ್ತು.

ಪ್ರವಾಹದಿಂದ ಸುಧಾರಿಸಿಕೊಳ್ಳುವ ಮುನ್ನವೇ ಮತ್ತೂಮ್ಮೆ ಪ್ರವಾಹ ಎದುರಾಗಿರುವುದು ರೈತರನ್ನು ನಿದ್ದೆಗೆಡುವಂತೆ ಮಾಡುತ್ತಿದೆ. ಹಿಂದೆ ಬಂದಿದ್ದ ಭೀಕರ ಪ್ರವಾಹದಲ್ಲಿ ಬೆಳೆಗಳೆಲ್ಲ ಕೊಚ್ಚಿ ಹೋಗಿ ರೈತರ ಬದುಕನ್ನು ನುಚ್ಚು ನೂರು ಮಾಡಿತ್ತು.

ತುತ್ತಿನ ಚೀಲ ತುಂಬಿಸಿಕೊಳ್ಳಲು ರೈತ ಸಾಲ ಸೂಲ ಮಾಡಿ ಮತ್ತೂಮ್ಮೆ ಬೆಳೆ ಬಿತ್ತನೆ ಮಾಡಿದ್ದ. ಇನ್ನೇನು ಒಂದೆರಡು ತಿಂಗಳಲ್ಲಿ ಬೆಳೆ ಕೈಗೆ ಬರುವ ನಿರೀಕ್ಷೆಯಲ್ಲಿದ್ದರು. ಆದರೆ ಪುನಃ ಪ್ರವಾಹ ಎದುರಾಗಿರುವುದು ರೈತರಿಗೆ ಬರಸಿಡಿಲು ಎರಗಿದಂತಾಗಿದೆ.

ತಾಲೂಕಿನ ನದಿಪಾತ್ರದ ಗ್ರಾಮಗಳಾದ ಬೆಂಚಿಗಡ್ಡಿ, ಲಿಂಗದಹಳ್ಳಿ, ಬಂಡೊಳ್ಳಿ, ತಿಂಥಿಣಿ, ದೇವಾಪುರ, ಶೆಳ್ಳಗಿ, ಮುಷ್ಠಳ್ಳಿ, ಹೆಮ್ಮಡಗಿ, ಚೌಡೇಶ್ವರಿಹಾಳ, ಸೂಗೂರು ಸೇರಿದಂತೆ ಇತರೆ ಗ್ರಾಮಗಳಲ್ಲಿ ಕೈಗೆ ಬಂದಿದ್ದ ಬೆಳೆಗಳು ಜಲಾವೃತಗೊಳ್ಳುತ್ತಿವೆ.

ಬೆಳೆಗಳು ಕೊಚ್ಚಿ ಹೋಗುವ ಸಂಭವ: ದೇವಪುರ, ಶೆಳ್ಳಗಿ, ಮುಷ್ಠಳ್ಳಿ, ಚೌಡೇಶ್ವರಿಹಾಳ ಸೇರಿದಂತೆ ನದಿ ಪಾತ್ರದ ಜಮೀನುಗಳಿಗೆ ಪ್ರವಾಹದ ನೀರು ನುಗ್ಗುತ್ತಿದ್ದು, ಹೊಲಗಳು ಜಲಮಯವಾಗುತ್ತಿವೆ. ನದಿಗೆ ಇನ್ನಷ್ಟು ನೀರು ಹರಿಸಿದಲ್ಲಿ ಭತ್ತ, ಹತ್ತಿ, ಶೇಂಗಾ, ಸೂರ್ಯಕಾಂತಿ, ಸಜ್ಜೆ, ಮೆಣಸಿನಕಾಯಿ ಇತರೆ ಬೆಳೆಗಳು ಕೊಚ್ಚುಕೊಂಡು ಹೋಗುವ ಸಂಭವವಿದೆ. ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಜಮೀನುಗಳ ಬದುಗಳಲ್ಲಿ ಕುಳಿತು ನೀರು ಆವರಿಸುವುದನ್ನು ವೀಕ್ಷಿಸುತ್ತಿರುವುದು ಎಲ್ಲೆಡೆ ಸಾಮಾನ್ಯವಾಗಿದೆ.

ಜಾಕ್‌ವೆಲ್‌ ರಕ್ಷಣೆ: ನಗರಕ್ಕೆ ನೀರು ಸರಬರಾಜು ಮಾಡುವ ಇಂಟೆಕ್‌ವೆಲ್‌ ನದಿಯಲ್ಲಿ ಸಂಪೂರ್ಣ ಮುಳಗಿ ಹೋಗಿದೆ. ಇದರಿಂದ ನಗರಕ್ಕೆ ಕುಡಿಯುವ ನೀರು ಸರಬರಾಜಿನಲ್ಲಿ ಮತ್ತೂಮ್ಮೆ ವ್ಯತ್ಯಯವಾಗುವ ಲಕ್ಷಣ ಗೋಚರಿಸುತ್ತಿದೆ. ಜಾಕ್‌ ವೆಲ್‌ ಮುಳುಗವು ಸಾಧ್ಯತೆ ಇದ್ದು, ಮುಂಜಾಗ್ರತೆ ವಹಿಸಿ ನಗರಸಭೆಯವರು ಜಾಕ್‌ವೆಲ್‌ನಲ್ಲಿದ್ದ ಮೋಟಾರ್‌ ಗಳನ್ನು ಹೊರ ತೆಗೆಯುವ ಕಾರ್ಯ ಭರದಿಂದ ನಡೆಸಿದ್ದಾರೆ.

ಟಾಪ್ ನ್ಯೂಸ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Pune: Batter collapses on the field!; Video goes viral

Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!;‌ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

6-dandeli

Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ

5-gokarna

Gokarna ಬೀಚಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಸಾವು

4-gundlupete

Gundlupete: ಹೆಣ್ಣಾನೆ ಮೃತದೇಹ ಪತ್ತೆ: ಆಂಥಾಕ್ಸ್ ಕಾಯಿಲೆ ಶಂಕೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

6-dandeli

Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.