ಕಾರ್ಮಿಕರು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಲಿ
ಶಿಕ್ಷಣದಿಂದ ಮಾತ್ರ ಬದುಕು ಬದಲಾಯಿಸಿಕೊಳ್ಳಲು ಸಾಧ್ಯ
Team Udayavani, May 16, 2019, 4:46 PM IST
ಸುರಪುರ: ಇಲ್ಲಿಯ ನ್ಯಾಯಾಲಯದಲ್ಲಿ ಏರ್ಪಡಿಸಿದ್ದ ಕಾರ್ಮಿಕ ದಿನಾಚರಣೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಧೀಶ ಸಾಯಿಬಣ್ಣ ಮೇಲಗಲ್ ಉದ್ಘಾಟಿಸಿದರು.
ಸುರಪುರ: ಬದುಕು ಕಟ್ಟಿಕೊಡುವಲ್ಲಿ ಬಡತನ ಭದ್ರ ಬುನಾದಿ ಇದ್ದಂತೆ. ಈ ಬಗ್ಗೆ ಯಾವೊಬ್ಬ ಕಾರ್ಮಿಕರಲ್ಲಿಯೂ ಕೀಳರಿಮೆ ಬೇಡ. ಒಪ್ಪತ್ತು ಉಪಾವಿಸವಿದ್ದರೂ ಪರವಾಗಿಲ್ಲ. ಮಕ್ಕಳಿಗೆ ಶಿಕ್ಷಣ ಕೊಡಿಸಿ ಅವರನ್ನು ಅಧಿಕಾರಿಗಳನ್ನಾಗಿ ಮಾಡಿ ಎಂದು ದಾವಣಗೇರಿ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶ ಸಾಯಿಬಣ್ಣ ಮೇಲಗಲ್ ಹೇಳಿದರು.
ಇಲ್ಲಿಯ ನ್ಯಾಯಾಲಯದಲ್ಲಿ ಬುಧವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಜಿಲ್ಲಾ ಹಾಗೂ ತಾಲೂಕು ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಕಾರ್ಮಿಕ ದಿನಾಚರಣೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರದ ಸೌಲಭ್ಯಗಳಿಂದ ಬಡತನ ದೂರಾಗಲು ಸಾಧ್ಯವಿಲ್ಲ. ಶಿಕ್ಷಣದಿಂದ ಮಾತ್ರ ಬದುಕು ಬದಲಾಯಿಸಿಕೊಳ್ಳಲು ಸಾಧ್ಯ. ಆದ್ದರಿಂದ ಮಕ್ಕಳಿಗೆ ಶಿಕ್ಷಣ ಕೊಡಿಸಿ ವಿದ್ಯಾವಂತರನ್ನಾಗಿ ಮಾಡಿ ಅವರು ಒಳ್ಳೆ ಉದ್ಯೋಗ ಪಡೆದಲ್ಲಿ ಬಡತನ ದೂರವಾಗುತ್ತದೆ ಎಂದು ಸಲಹೆ ನೀಡಿದರು.
ಸಿವಿಲ್ ನ್ಯಾಯಾಧೀಶ ವಿನೋದ ಬಾಳನಾಯಕ ಮಾತನಾಡಿ, ದುಡಿಯುವ ವರ್ಗಗಳಿಗಾಗಿ ಸರ್ಕಾರ ಕಾರ್ಮಿಕ ಇಲಾಖೆಯಿಂದ ಅನೇಕ ಸೌಲಭ್ಯ ನೀಡುತ್ತಿದೆ. ಕಟ್ಟಡ ಮತ್ತು ಇತರೆ ಕಾರ್ಮಿಕರು ಇಲಾಖೆಯಲ್ಲಿ ಅಗತ್ಯ ದಾಖಲೆ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದರು.
ಹೆರಿಗೆ, ಮಕ್ಳಳ ಶಿಕ್ಷಣ, ಸಾಲ ಸೌಲಭ್ಯ, ಸಲಕರಣೆ, ಮದುವೆಗೆ ಧನ ಸಹಾಯ ಸೇರಿದಂತೆ ಇತರೆ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ. ಈ ಬಗ್ಗೆ ಕಾರ್ಮಿಕರು ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿನ ಕಾನೂನು ಸೇವಾ ಪ್ರಾಧಿಕಾರದಿಂದ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಟಂಟಂ, ಆಟೋ, ಪಿಕಪ್ ಸೇರಿದಂತೆ ಇತರೆ ಸರುಕು ಸಾಗಣೆ ವಾಹನಗಳಲ್ಲಿ ಮದುವೆ ದಿಬ್ಬಣಗಳಿಗೆ ಪ್ರಯಾಣ ಮಾಡುವುದು. ಹೊಲ ಗದ್ದೆಗಳಿಗೆ ಕಾರ್ಮಿಕರನ್ನು ಕರೆದು ಕೊಂಡು ಹೋಗುವುದು. ಪ್ರಯಾಣಿಕರನ್ನು ಹೊತ್ತೂಯುವುದು ಅಪರಾಧ. ಇಂತಹ ಘಟನೆ ಕಂಡು ಬಂದಲ್ಲಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಬೇಕು. ಇಂತಹ ಸಂದರ್ಭಗಳಲ್ಲಿ ಅವಘಡ ನಡೆದು ಸಾವು ನೋವು ಆದರೆ ಮೃತ ಕಟುಂಬದವರಿಗೆ ಯಾವುದೇ ಪರಿಹಾರ ಸಿಗುವುದಿಲ್ಲ. ಕಾರಣ ಕಾರ್ಮಿಕರು ಈ ಬಗ್ಗೆ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
ಕಾರ್ಮಿಕ ಯೋಜನಾ ನಿರ್ದೇಶಕ ರಘುವೀರ ಸಿಂಗ್ ಠಾಕೂರ ಮಾತನಾಡಿ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಾದ ಕೃಷಿ ಕೂಲಿ, ಹಮಾಲರು, ಕಟ್ಟಡ, ಕಲ್ಲು ಕ್ವಾರಿ, ಗಣಿ, ಇಟ್ಟಂಗಿ ಬಟ್ಟಿ ಟೈಲರ್‌ಗಳು, ಚಿಂದಿ ಆಯುವವರು, ಗೃಹ ಕಾರ್ಮಿಕರು ಮೆಕ್ಯಾನಿಕ್, ಅಗಸರು, ಕ್ಷೌರಿಕರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಮಂಡಕ್ಕಿ ಸೇರಿದಂತೆ ಇತರೆ ವರ್ಗದ ಕಾರ್ಮಿಕರ ಹೆಸರು ನೋಂದಾಯಿಸಲಾಗುತ್ತಿದೆ. ರೇಷನ್ ಕಾರ್ಡ್, ಆಧಾರ್ ಕಾರ್ಡ್, ಭಾವಚಿತ್ರ ಇತರೆ ದಾಖಲೆ ನೀಡಿ ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.
ವಿವಿಧ ಇಲಾಖೆಗಳಲ್ಲಿ ಸೇವೆಯಲ್ಲಿರುವ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷ ಹಣಮಂತ್ರಾಯ ಕರಡಿ. ಸದಸ್ಯ ಮಾಳಪ್ಪ ವಂಟೂರ, ತಾಲೂಕು ಕಾರ್ಮಿಕ ಅಧಿಕಾರಿ ಶಿವಶಂಕರ ತಳವಾರ, ಸಿಡಿಪಿ ಲಾಲಸಾಹೇಬ ಪೀರಾಪುರ, ವಕೀಲರ ಸಂಘದ ಅಧ್ಯಕ್ಷ ನಂದನಗೌಡ ಪಾಟೀಲ ಮಕ್ಕಳ ರಕ್ಷಣಾ ಘಟಕದ ರಾಜೇಂದ್ರಯಾದವ ವೇದಿಕೆಯಲ್ಲಿದ್ದರು. ವಕೀಲ ಅಪ್ಪಣ್ಣ ಗಾಯಕವಾಡ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.