ಕ್ರೀಡೆ ಆರೋಗ್ಯಕ್ಕೆ ಸಹಕಾರಿ
ಪಠ್ಯ ಜತೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿ: ಲಕ್ಷ್ಮೀಕಾಂತ
Team Udayavani, Aug 31, 2019, 4:33 PM IST
ಸುರಪುರ: ಬೋನ್ಹಾಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಟ್ಟರಾಜ ಜನಕಲ್ಯಾಣ ಯುವಕ ಸಂಘದಿಂದ ಕ್ರೀಡಾ ಸಾಮಗ್ರಿ ವಿತರಿಸಲಾಯಿತು.
ಸುರಪುರ: ಉತ್ತಮ ಆರೋಗ್ಯಕ್ಕಾಗಿ ಕ್ರೀಡೆಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ಭಾರತ ಸರಕಾರ ನೆಹರು ಯುವ ಕೇಂದ್ರ ಆಯ್ಕೆ ಸಮಿತಿ ಸದಸ್ಯ ಲಕ್ಷ್ಮೀಕಾಂತ ದೇವರಗೋನಾಲ ಹೇಳಿದರು.
ತಾಲೂಕಿನ ಬೋನ್ಹಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಣವ್ ಸಾಂಸ್ಕೃತಿಕ ಸೇವಾ ಸಮಿತಿ ಹಾಗೂ ಪುಟ್ಟರಾಜ ಜನಕಲ್ಯಾಣ ಯುವಕ ಸಂಘ ಏರ್ಪಡಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಓದು ಎಷ್ಟು ಮುಖ್ಯವೋ ಆಟ ಕೂಡ ಅಷ್ಟೇ ಮುಖ್ಯವಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ಲವಲವಿಕೆ ಹೆಚ್ಚಾಗಿ ಓದಿನಲ್ಲಿ ಆಸಕ್ತಿ ಮೂಡತ್ತದೆ ಎಂದು ತಿಳಿಸಿದರು.
ಸುರೇಶ ಕುಂಬಾರ ಮಾತನಾಡಿ, ದೇಶ ಕಂಡ ಅಪ್ರತಿಮ ಶ್ರೇಷ್ಠ ಕ್ರೀಡಾಪಟು ಮೇಜರ್ ಧ್ಯಾನ್‌ಚಂದ್ ಅವರ ಜನ್ಮದಿನ ಪ್ರಯುಕ್ತ ನಾವು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ನೆಹರು ಯುವ ಕೇಂದ್ರ ಆಯ್ಕೆ ಸಮಿತಿ ಸದಸ್ಯ ಗಂಗಾಧರ ನಾಯಕ ಮಾತನಾಡಿ, ಇಂದಿನ ಮಕ್ಕಳು ಮೊಬೈಲ್, ಕಂಪ್ಯೂಟರ್, ಅಂತರ್ಜಾಲದಲ್ಲಿ ಆಟವಾಡುತ್ತಾರೆ. ಆದರೆ ದೇಹಕ್ಕೆ ದಂಡಿಸುವ ವಾಯ್ನಾಮ ಆಗುವ ಯಾವುದೇ ಕ್ರೀಡೆ ಆಡುತ್ತಿಲ್ಲ. ಹೀಗಾಗಿ ಅನಾರೋಗ್ಯಕ್ಕೆ ಈಡಾಗುತ್ತಿದ್ದಾರೆ. ಉತ್ತಮ ಆರೋಗ್ಯ ಗಳಿಸಲು ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು. ಈ ವೇಳೆ ಗುರು ಪುಟ್ಟರಾಜ ಯುವಕ ಸಂಘದಿಂದ ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿ ವಿತರಿಸಲಾಯಿತು. ಶಾಲೆ ಪ್ರಧಾನ ಗುರು ಶರಣು ಪಾಕರಡ್ಡಿ ಅಧ್ಯಕ್ಷತೆ ವಹಸಿದ್ದರು. ಯುವಕ ಸಂಘದ ಅಧ್ಯಕ್ಷ ಕ್ಷೀರಲಿಂಗಯ್ಯ ಹಿರೇಮಠ ಪ್ರಾಸ್ತವಿಕ ಮಾತನಾಡಿದರು. ಎಸ್‌ಡಿಎಂ ಸದಸ್ಯ ಸಿದ್ರಾಮಪ್ಪ ಕಟ್ಟಿಮನಿ, ಗ್ರಾಮದ ಪ್ರಮುಖ ಸಂಗಯ್ಯಸ್ವಾಮಿ ಹಿರೇಮಠ, ಶಿಕ್ಷಕರಾದ ಮಾನಪ್ಪ, ಯಮನೂರಪ್ಪ, ಗುರಪ್ಪ ಮೇಘಾ ಗಂಗನಗೌಡರ, ಈರಮ್ಮ ಇದ್ದರು. ಮಾನಪ್ಪ ಸ್ವಾಗತಿಸಿದರು. ಗುರಪ್ಪ ನಿರೂಪಿಸಿದರು. ಮೇಘಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್
Sullia: ಜಾಕ್‌ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.