ಭಂಟನೂರ ಗ್ರಾಪಂಗೆ ಬೀಗ ಜಡಿದು ಮಹಿಳೆಯರ ಪ್ರತಿಭಟನೆ

Team Udayavani, May 15, 2019, 5:18 PM IST

15-May-31

ತಾಳಿಕೋಟೆ: ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಮಹಿಳೆಯರು ಹಾಗೂ ಗ್ರಾಮಸ್ಥರು ಭಂಟನೂರ ಗ್ರಾಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ತಾಳಿಕೋಟೆ: ತಾಲೂಕಿನ ಭಂಟನೂರ ಗ್ರಾಮದಲ್ಲಿ ಕುಡಿಯುವ ನೀರಿನ ಆಹಾಕಾರ ಬುಗಿಲೆದ್ದಿದೆ. ಇದರಿಂದ ಆಕ್ರೋಶಗೊಂಡ ಗ್ರಾಮದ ಮಹಿಳೆಯರು ಖಾಲಿ ಕೊಡಗಳೊಂದಿಗೆ ಗ್ರಾಪಂ ಕಾರ್ಯಾಲಯಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಭಂಟನೂರ ಗ್ರಾಮದಲ್ಲಿ ಭೀಕರ ಬರದಿಂದ ಜಲ ಮೂಲಗಳೆಲ್ಲವೂ ಬತ್ತಿ ಹೋಗಿದ್ದು ಜನ ಜಾನುವಾರುಗಳಿಗೆ ಕುಡಿಯಲು ನೀರಲ್ಲದೇ ಪರದಾಡುವಂತಾಗಿದೆ. ಕುಡಿಯುವ ನೀರಿನ ಸಮಸ್ಯೆ ನೀಗಿಸಬೇಕೆಂದು ಸುಮಾರು 6 ತಿಂಗಳಿಂದ ಗ್ರಾಪಂ ಅಭಿವೃದ್ಧಿ ಅಕಾರಿ, ತಹಶೀಲ್ದಾರ್‌ ಮತ್ತು ತಾಪಂ ಮುಖ್ಯ ಕಾರ್ಯನಿರ್ವಾಹಕರಿಗೆ ಮನವಿ ಮಾಡುತ್ತ ಬಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಗ್ರಾಮದ ರಾಯಣ್ಣ ಬಡಾವಣೆ ಮತ್ತು ಹಳೆ ಊರು ಸೇರಿದಂತೆ ಇನ್ನೂಳಿದ ಕಡೆಗಳಲ್ಲಿ ಕುಡಿಯಲು ನೀರು ಸಿಗುತ್ತಿಲ್ಲ. ನೀರಿನ ಸಮಸ್ಯೆ ನೀಗಿಸಿ ಎಂದು ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗೆ ಕೇಳಿದರೆ ತಹಶೀಲ್ದಾರ್‌ಗೆ ಕೇಳಿ ತಾಪಂ ಅಧಿಕಾರಿಗೆ ಕೇಳಿ ಎಂದು ಹಾರಿಕೆ ಉತ್ತರಗಳನ್ನು ನೀಡುತ್ತ ಸಾಗಿದ್ದಾರೆ ಎಂದುದೂರಿದರು.

ನೀರಿನ ಸಮಸ್ಯೆ ನಿವಾರಣೆ ಕುರಿತು ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ತಹಶೀಲ್ದಾರ್‌ ಕಚೇರಿಗೆ ಗ್ರಾಮಸ್ಥರೊಂದಿಗೆ ತೆರಳಿ ಅಧಿಕಾರಿಗಳ ಸಭೆ ನಡೆಸಿ ಭಂಟನೂರ ಗ್ರಾಮಕ್ಕೆ ಬಂದಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಗ್ರಾಮದ ಹೊರ ವಲಯದಲ್ಲಿರುವ ಖಾಸಗಿ ವ್ಯಕ್ತಿಯ ಬೋರ್‌ವೆಲ್ದಿಂದ ಸುಮಾರು 300 ಮೀ. ಪೈಪ್‌ಲೈನ್‌ ಮಾಡಿಸಿ ಎರಡು ನೀರಿನ ಗುಮ್ಮಿಗಳಿಗೆ ನೀರೊದಗಿಸಲು ಸೂಚಿಸಿದ್ದರು. ಆ ಸಮಯದಲ್ಲಿ ಶಾಸಕ ಮಾತಿಗೆ ತಲೆ ಅಲ್ಲಾಡಿಸಿದ್ದ ಅಕಾರಿಗಳೇ ಈಗ ಶಾಸಕರ ಮಾತಿಗೆ ಕಿಮ್ಮತ್ತು ಇಲ್ಲದಂತೆ ವರ್ತಿಸಿ ಗ್ರಾಮಸ್ಥರ ತಾಳ್ಮೆ ಪರಿಕ್ಷೆ ಮಾಡುತ್ತಿದ್ದಾರೆ. ಕೂಡಲೇ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಗ್ರಾಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿರುವ ಸುದ್ದಿ ತಿಳಿದ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸುರಳಕರ ಹಾಗೂ ತಾಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಕೆ. ದೇಸಾಯಿ ಅವರು ಖಾಸಗಿ ಜಮೀನಿನಲ್ಲಿರುವ ಬೊರ್‌ವೆಲ್ ಮಾಲೀಕನಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಕುಡಿಯುವ ನೀರೊದಗಿಸಲು ಮನವಿ ಮಾಡಿ ಗ್ರಾಮಸ್ಥರಿಗೆ ತಾತ್ಕಾಲಿಕ ಪರಿಹಾರ ನೀಡಿದರು.

ಪ್ರತಿಭಟನಾ ನಿರತ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕೇವಲ ತಾತ್ಕಾಲಿಕ ಪರಿಹಾರ ನೀಡಿದರೆ ಸಾಲದು. ತಿಂಗಳಾಂತ್ಯದೊಳಗೆ ಶಾಶ್ವತ ಪರಿಹಾರ ನೀಡಬೇಕು. ಇಲ್ಲದಿದ್ದರೆ ಗ್ರಾಪಂ ಕಚೇರಿ ಮುಂದೆ ಅಮರಣ ಉಪವಾಸ ಸತ್ಯಾಗ್ರಹ ಕೈಗೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.

ಪ್ರತಿಭಟನಾ ನೇತೃತ್ವದಲ್ಲಿ ಗ್ರಾಮದ ಮುಖಂಡರುಗಳಾದ ಮಡಿವಾಳಪ್ಪ ಐನಾಪುರ, ಗುರುಸ್ವಾಮಿ ಬಳಬಟ್ಟಿ, ಧರ್ಮಯ್ಯ ಹಿರೇಮಠ, ಶಿವನಗೌಡ ಸಾಸನೂರ, ಸಿದ್ದನಗೌಡ ಬಸರಡ್ಡಿ, ರಾಮನಗೌಡ ಐನಾಪುರ, ಜಟ್ಟೆಪ್ಪ ಆಲ್ಯಾಳ, ಜಟ್ಟೆಪ್ಪ ಬ್ಯಾಕೋಡ, ಬೀಮಣ್ಣ ತಳ್ಳಳ್ಳಿ, ಸಾಯಬಣ್ಣ ತಳ್ಳಳ್ಳಿ, ಯಲ್ಲಪ್ಪ ಗುರಿಕಾರ, ಒಳಗೊಂಡಂತೆ ನೂರಾರು ಗ್ರಾಮಸ್ಥರರು ಹಾಗೂ ಮಹಿಳೆಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bunts Hostel, ಕರಂಗಲ್ಪಾಡಿ ಜಂಕ್ಷನ್‌: ಶಾಶ್ವತ ಡಿವೈಡರ್‌ ನಿರ್ಮಾಣ ಕಾಮಗಾರಿ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

9

Bunts Hostel, ಕರಂಗಲ್ಪಾಡಿ ಜಂಕ್ಷನ್‌: ಶಾಶ್ವತ ಡಿವೈಡರ್‌ ನಿರ್ಮಾಣ ಕಾಮಗಾರಿ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.