ಆಶ್ರಯ ಫ್ಲ್ಯಾಟ್ ಒತ್ತುವರಿ ವಿರುದ್ಧ ಕ್ರಮಕ್ಕೆಆಗ್ರಹ

Team Udayavani, Nov 1, 2019, 2:20 PM IST

1-November-29

ತಾಳಿಕೋಟೆ: ತಾಲೂಕಿನ ಅಸ್ಕಿ ಗ್ರಾಪಂ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ 2000/2001ನೇ ಸಾಲಿನಲ್ಲಿ ಸುಮಾರು 35 ಜನರಿಗೆ ಆಶ್ರಯ ಪ್ಲಾಟ್‌ಗಳನ್ನು ಹಂಚಿಕೆ ಮಾಡಲಾಗಿದೆ. ಸದರಿ ಜಾಗೆಯನ್ನು ಗ್ರಾಮದ ಪ್ರಭಾವಿ ವ್ಯಕ್ತಿಗಳು ಕಬಳಿಕೆ ಮಾಡುವುದರೊಂದಿಗೆ ಜಾಗೆಗಳನ್ನು ಮಾರಾಟ ಮಾಡುತ್ತಾ ಸಾಗಿದ್ದಾರೆ. ಕೂಡಲೇ ಕ್ರಮಕೈಗೊಂಡು ದಲಿತ ಜನಾಂಗದವರಿಗೆ ಆಗುತ್ತಿರುವ ಅನ್ಯಾಯ ತಪ್ಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ನೀರಲಗಿ ಗ್ರಾಮದಿಂದ ಅಸ್ಕಿ ಗ್ರಾಮದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಈ ವೇಳೆ ಸಂಘಟನೆಯ ಜಿಲ್ಲಾಧ್ಯಕ್ಷ ಶರಣು ಜಮಖಂಡಿ ಮಾತನಾಡಿ, ಸರ್ವೇ ನಂ.186ರ 3.20 ಗುಂಟೆ ರಾಜ್ಯಪಾಲರ ಹೆಸರಿನಲ್ಲಿರುವ ಈ ಜಾಗೆಯಲ್ಲಿ 2000/01ರಲ್ಲಿ ಜಾಗೆ ಇಲ್ಲದ ದಲಿತ ಜನಾಂಗದ 7 ಜನರನ್ನು ಸೇರಿಸಿ ಒಟ್ಟು 35 ಪ್ಲಾಟ್‌ ಗಳನ್ನು ಹಂಚಿಕೆ ಮಾಡಲಾಗಿದೆ. ಸದರಿ ಹಂಚಿಕೆ ಮಾಡಲಾದ ಪ್ಲಾಟ್‌ಗಳಿಗೆ ಸಂಬಂಧಿಸಿದ ಹಕ್ಕು ಪತ್ರಗಳನ್ನೂ ಸಹ ನೀಡಲಾಗಿದೆ. ಹಕ್ಕು ಪತ್ರದಲ್ಲಿ ಚೆಕ್ಕಬಂದಿ ಹಾಕದಿರುವುದರಿಂದ ಮನೆಗಳನ್ನು ಕಟ್ಟಿಸಿಕೊಳ್ಳಲು ಆಗಿಲ್ಲ. ಈ ಕುರಿತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ, ತಾಪಂ ಇಒ, ಪಿಡಿಒಗಳಿಗೆ ಪ್ಲಾಟ್‌ ಗುರುತಿಸಿ ಚೆಕ್ಕಬಂದಿ ನಿರ್ಮಿಸಿ ಮನೆ ಕಟ್ಟಿಸಿಕೊಳ್ಳಲು ಉತ್ತಾರೆ ನೀಡಬೇಕೆಂದು ಮನವಿ ಸಲ್ಲಿಸಿದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ಡಿಎಸ್‌ಎಸ್‌ ಉತ್ತರ ಕರ್ನಾಟಕ ಅಧ್ಯಕ್ಷ ಅಶೋಕ ಸುಲ್ಪಿ ಮಾತನಾಡಿ, ಅಸ್ಕಿ ಗ್ರಾಪಂ ವ್ಯಾಪ್ತಿಯ ನೀರಲಗಿ ಗ್ರಾಮದ ಪ್ರಭಾವಿ ವ್ಯಕ್ತಿಗಳು ತಮ್ಮ ರಾಜಕೀಯ ಒತ್ತಡದಿಂದ ಹಂಚಿಕೆ ಮಾಡಲಾದ ಪ್ಲಾಟ್‌ಗಳು ತಮ್ಮದೇ ಎಂದು ಮಾರಾಟ ಮಾಡುತ್ತಾ ಸಾಗಿದ್ದಾರೆ. ಆದರೆ ಸದರಿ ಪ್ಲಾಟ್‌ಗಳಿಗೆ ಸಂಬಂಧಿಸಿ ಹಕ್ಕುಪತ್ರದೊಂದಿಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ
ಇಲ್ಲದ ಸಬೂಬ ಹೇಳುತ್ತಾರೆ. ಕೂಡಲೇ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಿ ದಲಿತ ಜನಾಂಗದವರಿಗೆ ನ್ಯಾಯ ಒದಗಿಸಿ ಕೊಡಬೇಕೆಂದು ಒತ್ತಾಯಿಸಿದರು.

ಡಿಎಸ್‌ಎಸ್‌ ತಾಲೂಕು ಸಂಘಟನಾ ಸಂಚಾಲಕ ಚಂದ್ರಶೇಖರ ದೊಡಮನಿ, ತಾಳಿಕೋಟೆ ತಾಲೂಕು ಸಂಚಾಲಕ ಯಮನೂರಿ ಬೇಕಿನಾಳ ಮಾತನಾಡಿದರು. ನಂತರ ಉಪತಹಶೀಲ್ದಾರ್‌ ಅಶೋಕ ಶರ್ಮಾ ಅವರಿಗೆ ಮನವಿ ಸಲ್ಲಿಸಲಾಯಿತು.

ಸಂಘಟನೆಯ ಮುಖಂಡರಾದ ಅಶೋಕ ಶುಲ್ಪಿ, ಸಂಗಮೇಶ ನಡುವಿನಕೇರಿ, ಬಾಬು ಕೆಳಗಿನಮನಿ, ತಿಪ್ಪಣ್ಣ ಮಾದರ, ಅನಿಲ ಬಡಿಗೇರ, ಪ್ರಕಾಶ ಮಲ್ಲಾರಿ, ಜಾನು ಗುಡಿಮನಿ, ಪರಶುರಾಮ ಬ್ಯಾಕೋಡ, ಹಣಮಂತ ವಡ್ಡರ, ಗುರುಪ್ರಸಾದ ಬಿ.ಜಿ., ಸಿದ್ರಾಮ ಮೇಲಿನಮನಿ, ಸೋಮಪ್ಪ ನಡುವಿನಮನಿ, ಸಾಯಬಣ್ಣ ನಡುವಿನಮನಿ, ಪರಶುರಾಮ ಜಾಲಹಳ್ಳಿ, ಬಾಬಾಸಾಹೇಬ ಮುಜಾವರ ಸೇರಿದಂತೆ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು .

ಟಾಪ್ ನ್ಯೂಸ್

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.