ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮುಖ್ಯ
ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕಾನೂನು ನೆರವಿಗೆ ಸಿದ್ಧ
Team Udayavani, Jul 19, 2019, 1:30 PM IST
ತೀರ್ಥಹಳ್ಳಿ: ಕೋಣಂದೂರಿನಲ್ಲಿ ನಡೆದ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ತೀರ್ಥಹಳ್ಳಿ ನ್ಯಾಯಾಲಯದ ನ್ಯಾಯಾಧೀಶೆ ಗೀತಾಂಜಲಿ ಮಾತನಾಡಿದರು.
ತೀರ್ಥಹಳ್ಳಿ: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೂಡ ಕಾನೂನಿನ ನೆರವು ನೀಡಲು ಕಾನೂನು ಸೇವಾ ಪ್ರಾಧಿಕಾರ ಯಾವಾಗಲೂ ಸಿದ್ದವಿದೆ. ಶೋಷಿತರು, ಬಡವರು ಆರ್ಥಿಕವಾಗಿ ಹಿಂದುಳಿದವರು ಇದರ ಪ್ರಯೋೕಜನವನ್ನ ಪಡೆಯಬೇಕು. ಸಮಾಜದಲ್ಲಿ ನಡೆಯುವ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಅರಿವು ಅಗತ್ಯ ಎಂದು ತೀರ್ಥಹಳ್ಳಿ ನ್ಯಾಯಾಲಯದ ನ್ಯಾಯಾಧೀಶೆ ಗೀತಾಂಜಲಿ ಹೇಳಿದರು.
ತಾಲೂಕಿನ ಕೋಣಂದೂರಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತೀರ್ಥಹಳ್ಳಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ರೋಟರಿ ಭವನದಲ್ಲಿ ಆಯೋಜಿಸಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನೈಸರ್ಗಿಕ ದುರಂತಕ್ಕೀಡಾದವರಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ದೊರೆಯುವ ಕಾನೂನು ಸೇವೆಗಳು ಮತ್ತು ಸರ್ಕಾರಿ ಸೌಲಭ್ಯಗಳನ್ನು ಪ್ರತಿಯೊಬ್ಬ ನಾಗರಿಕರು ಪಡೆದುಕೊಳ್ಳಬೇಕು. ಕಾನೂನಿನ ಅರಿವನ್ನು ಅರ್ಥ ಮಾಡಿಕೊಂಡು ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿದ್ದ ತೀರ್ಥಹಳ್ಳಿ ವಕೀಲರ ಸಂಘದ ಉಪಾಧ್ಯಕ್ಷ ಎಂ. ಎನ್. ರಮೇಶ್ ಮಾತನಾಡಿ, ಹಲವು ವರ್ಷಗಳ ಯಾವುದೇ ಅರಿವು ಕಾರ್ಯಾಗಾರಗಳು ನಡೆಯುತ್ತಿರಲಿಲ್ಲ. ನಮ್ಮ ಸಂವಿದಾನದಲ್ಲಿರುವ ವಿಚಾರಗಳ ಬಗ್ಗೆ ಪ್ರತಿಯೊಬ್ಬರೂ ತಿಳಿಯಬೇಕು. ಕಾನೂನಿನ ಅಡಿಯಲ್ಲಿ ಎಲ್ಲರೂ ಸಮಾನರು ಎಂದು ತಿಳಿಸಿದರು.
ಕಂದಾಯ ಇಲಾಖೆಯ ವತಿಯಿಂದ ತಹಶೀಲ್ದಾರ್ ಆನಂದ ನಾಯಕ್, ಪ್ರಕೃತಿ ವಿಕೋಪದಿಂದ ದುರಂತಗಳಾದಾಗ ಸರ್ಕಾರದಿಂದ ಸಿಗುವ ಪರಿಹಾರಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮವನ್ನುದ್ದೇಶಿಸಿ ಸರ್ಕಲ್ ಇನ್ಸ್‌ಪೆಕ್ಟರ್ ಎಚ್. ಎಸ್. ಸುರೇಶ್ ಮತ್ತು ಸರ್ಕಾರಿ ಅಭಿಯೋಜಕರಾದ ಬಿನು ಡಿ. ಮಾತನಾಡಿದರು
ಹೆಚ್ಚುವರಿ ವ್ಯವಹಾರ ನ್ಯಾಯಾಧೀಶರಾದ ನಿವೇದಿತಾ ಎನ್., ಕೋಣಂದೂರು ಗ್ರಾಪಂ ಅಧ್ಯಕ್ಷೆ ವಿಶಾಲಾಕ್ಷಿ ಪ್ರಫುಲ್ಚಂದ್ರ, ಉಪಾಧಕ್ಷೆ ಗಾಯತ್ರಿ ಸುಧಾಕರ್ ಶೆಟ್ಟಿ, ಗ್ರಾಪಂ ಸದಸ್ಯ ಸತೀಶ್ ಶೆಟ್ಟಿ, ಕೆ. ಎಂ. ಮೋಹನ್ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ವಿನಾಯಕ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.