ಕೈ ಮುಖಂಡರ ಜತೆ ಸಮಸ್ಯೆ ಇಲ್ಲ
Team Udayavani, Mar 24, 2019, 12:37 PM IST
ಬೆಂಗಳೂರು: ನನ್ನ ಮತ್ತು ಕಾಂಗ್ರೆಸ್ ಮುಖಂಡರ ಜತೆ ಯಾವುದೇ ಸಮಸ್ಯೆ ಇಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜತೆ ಸಭೆ ನಡೆಸಿದ ಅವರು, ನಾನು ಕಾಂಗ್ರೆಸ್ ನಾಯಕರನ್ನು ಸರಿಯಾಗಿ ನಡೆಸಿಕೊಂಡಿಲ್ಲ. ಕೇಸ್ ಹಾಕಿಸಿದ್ದೇನೆ ಎನ್ನುವುದು ಸುಳ್ಳು.
ಯಾವುದೇ ಸಮಸ್ಯೆ ಕ್ಷೇತ್ರದಲ್ಲಿ ಇಲ್ಲ. ಟೀ ಕುಡಿದು ಮಾತನಾಡಿಕೊಂಡು ಬಂದಿದ್ದೇವೆ ಎಂದು ಹೇಳಿದರು. ಕೋಮುವಾದಿ ಪಕ್ಷ ದೂರವಿಡಲು ಎರಡು ಪಕ್ಷದ ನಾಯಕರು ಒಟ್ಟಿಗೆ ಸೇರಿ ಕೆಲಸ ಮಾಡಲು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದೂ ತಿಳಿಸಿದರು.
ಮೈತ್ರಿ ಅಭ್ಯರ್ಥಿ ಪರ ಕೆಲಸ: ಹಾಸನ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಪರವಾಗಿ ಕೆಲಸ ಮಾಡಬೇಕು, ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ, ಕಾಂಗ್ರೆಸ್‌ನ ಗೋಪಾಲಸ್ವಾಮಿ ಹೇಳಿದ್ದಾರೆ.
ಕ್ಷೇತ್ರದಲ್ಲಿ ಯಾವುದೇ ಸಮಸ್ಯೆ ಮಾಡಿಕೊಳ್ಳಬಾರದು ಎಂದೂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದೂ ತಿಳಿಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ ದೇಶಕ್ಕೆ ಒಂದು ಸಂದೇಶ ರವಾನೆ ಮಾಡುತ್ತೇವೆ. ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡುವ ಬಗ್ಗೆ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದೂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.