ಭೂ ಕುಸಿತ, ತೋಟ-ಗದ್ದೆ ಜಲಾವೃತ

ಮುಳುಗಿದೆ ಜಲಾವೃತಗೊಂಡ ತುಂಗಾ ನದಿ ನಡುವಿನ ರಾಮಮಂಟಪ •ಹಾರಿಹೋದ ಮನೆಯ ಹೆಂಚುಗಳು

Team Udayavani, Aug 9, 2019, 12:52 PM IST

9-Agust-21

ಸಾಗರ: ಕಲ್ಮನೆ ಸಮೀಪದ ಲಕ್ಮನೆಯಲ್ಲಿ ತೋಟಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ.

ತೀರ್ಥಹಳ್ಳಿ: ಆಶ್ಲೇಷ ಮಳೆಯ ಅಬ್ಬರವು ತಾಲೂಕಿನಾದ್ಯಂತ ಕಳೆದ 2ದಿನಗಳಿಂದ ಮುಂದುವರಿದಿದೆ. ಬುಧವಾರ ಬೆಳಗ್ಗೆ ಜಲಾವೃತಗೊಂಡ ತುಂಗಾ ನದಿ ನಡುವಿನ ಶ್ರೀರಾಮ ಮಂಟಪ ಯಥಾಸ್ಥಿತಿಯಲ್ಲಿದೆ. ತುಂಗಾನದಿಯಲ್ಲಿ 86 ಅಡಿ ನೀರು ಹರಿಯುತ್ತಿದ್ದು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಳೆದ 2 ದಿನಗಳಿಂದ ತೀರ್ಥಹಳ್ಳಿ ಹಾಗೂ ಆಗುಂಬೆ ಭಾಗದಲ್ಲಿ ಸತತ ಗಾಳಿ ಮಳೆಗೆ ಗದ್ದೆ ಹಾಗೂ ಅಡಕೆ ತೋಟಗಳಲ್ಲಿ ಅಪಾರ ಹಾನಿಯಾಗಿದೆ. ತಾಲೂಕಿನಲ್ಲಿ 14 ಮನೆಗಳು ಹಾಗೂ 150ಕ್ಕೂ ಹೆಚ್ಚು ಹೆಕ್ಟೇರ್‌ ಪ್ರದೇಶಗಳು ಹಾನಿಯಾಗಿವೆ. ನೂರಾರು ಕಿಮೀ ರಸ್ತೆಗಳು ಗ್ರಾಮೀಣ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ.

ಕಳೆದ 24 ಗಂಟೆಗಳಲ್ಲಿ ತೀರ್ಥಹಳ್ಳಿಯಲ್ಲಿ 99.4 ಮಿಮೀ ಹಾಗೂ ಆಗುಂಬೆಯಲ್ಲಿ 276 ಮಿಮೀ ಮಳೆಯಾಗಿದೆ. ಆಗುಂಬೆ ಭಾಗದಲ್ಲಿ ಸುರಿಯುತ್ತಿರುವ ಮಳೆಯೊಂದಿಗೆ ಗಾಳಿಯ ಆರ್ಭಟಕ್ಕೆ ಅನೇಕ ಮನೆಗಳ ಹೆಂಚುಗಳು ಹಾರಿ ಹೋಗಿವೆ. ಅಡಕೆ ತೋಟಗಳಲ್ಲಿ ಗಾಳಿಗೆ ಅಡಕೆ ಮರಗಳು ಮುರಿದು ದಿಕ್ಕಾ ಪಾಲಾಗಿವೆ. ಕಳೆದ 3 ದಿನಗಳಿಂ ಆಗುಂಬೆ ಭಾಗದಲ್ಲಿ ವಿದ್ಯುತ್‌ ಇಲ್ಲದೆ ಗ್ರಾಮಸ್ಥರು ಪರದಾಡುವಂತಾಗಿದೆ. ತಾಲೂಕಿನಾದ್ಯಂತ ಭಾರೀ ಮಳೆಗೆ ವಿದ್ಯುತ್‌ ಕಂಬಗಳು ಉರುಳಿವೆ.

ಕುರುವಳ್ಳಿಯ ಜೋಪಡಿವಾಸಿಗಳಿಗೆ ಪಟ್ಟಣದ ರಾಮೇಶ್ವರ ಸಭಾಭವನದ ಗಂಜಿಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ತಾಲೂಕು ಆಡಳಿತ ತಿಳಿಸಿದೆ. ಗುರುವಾರ ಜಿಲ್ಲಾ ಉಸ್ತುವಾರಿ ಅಧಿಕಾರಿ ಮಣಿವಣ್ಣನ್‌ ಹಾಗೂ ಶಾಸಕ ಆರಗ ಜ್ಞಾನೇಂದ್ರ ಗಂಜಿಕೇಂದ್ರದಲ್ಲಿನ ನಿರಾಶ್ರಿತರ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿ ಉಪಹಾರ ಸೇವಿಸಿದರು. ಕ್ಷೇತ್ರದ ಮಾಜಿ ಶಾಸಕ ಕಿಮ್ಮನೆ ರತ್ನಾಕರ್‌ ಪಟ್ಟಣದ ರಾಮೇಶ್ವರ ಸಭಾಭವನದ ಗಂಜಿಕೇಂದ್ರಕ್ಕೆ ಭೇಟಿ ನೀಡಿ ನಿರಾಶ್ರಿತರ ಯೋಗಕ್ಷೇಮ ವಿಚಾರಿಸಿದರು. ಗುರುವಾರವೂ ತಾಲೂಕಿನ ಎಲ್ಲಾ ಶಾಲಾ- ಕಾಲೇಜುಗಳಿಗೆ ಭಾರೀ ಮಳೆಯ ಕಾರಣ ರಜೆ ಘೋಷಿಸಿಲಾಗಿತ್ತು.

ತಡೆಗೋಡೆ ಕುಸಿತ: ತಾಲೂಕಿನ ಬೆಜ್ಜವಳ್ಳಿ ಆಯನೂರು ರಸ್ತೆಯ ಹೊನ್ನಸ್‌ಗದ್ದೆಯ ಬಳಿ ರಸ್ತೆ ಪಕ್ಕ ತಡೆಗೋಡೆಯೊಂದು ಭಾರೀ ಮಳೆಗೆ ಕುಸಿದಿದೆ. ಇದರಿಂದ ಪಕ್ಕದ ಅಡಕೆ ತೋಟ ಹಾಗೂ ರೈತರ ಗದ್ದೆಯ ಮೇಲೆ ಧಾರಾಕಾರ ನೀರು ಹರಿದು ತೋಟ- ಗದ್ದೆಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಆರಗ ಜ್ಞಾನೇಂದ್ರ ಪರಿಶೀಲನೆ ನಡೆಸಿ ಕಳೆದ ವರ್ಷ ನಿರ್ಮಾಣಗೊಂಡ ಈ ತಡೆಗೋಡೆಯ ಕಳಪೆ ಕಾಮಗಾರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಕೂಡಲೇ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಂಡು ದುರಸ್ತಿ ಮಾಡುವಂತೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.