ಎನ್‌ಎಂಸಿ ಮಸೂದೆ ಜಾರಿಗೆ ವೈದ್ಯರ ವಿರೋಧ
ಸೇವೆ ಸ್ಥಗಿತಗೊಳಿಸಿ ಕೇಂದ್ರದ ವಿರುದ್ಧ ಪ್ರತಿಭಟನೆ • ಜಿಲ್ಲಾಧಿಕಾರಿ ಡಾ.ರಾಕೇಶ್‌ಕುಮಾರ್‌ಗೆ ಮನವಿ
Team Udayavani, Aug 1, 2019, 4:30 PM IST
ತುಮಕೂರಿನ ಭಾರತೀಯ ವೈದ್ಯಕೀಯ ಸಂಘ ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ಕುಮಾರ್‌ಗೆ ಮನವಿ ಸಲ್ಲಿಸಿತು.
ತುಮಕೂರು: ನೀತಿ ಆಯೋಗದ ಶಿಫಾರಸಿನಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಜಾರಿಗೊಳಿಸ ಬಾರದು ಎಂದು ಒತ್ತಾಯಿಸಿ ನಗರದಲ್ಲಿ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ನೂರಾರು ಖಾಸಗಿ ವೈದ್ಯರು ಬುಧವಾರ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.
ಭಾರತೀಯ ವೈದ್ಯಕೀಯ ಸಂಘದಿಂದ ದೇಶಾದ್ಯಂತ ಖಾಸಗಿ ಆಸ್ಪತ್ರೆ ಬಂದ್‌ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ನಗರದಲ್ಲಿಯೂ ನೂರಾರು ವೈದ್ಯರು ಟೌನ್‌ಹಾಲ್ನ ಬಿಜಿಎಸ್ ವೃತ್ತದಲ್ಲಿರುವ ಭಾರತೀಯ ವೈದ್ಯಕೀಯ ಸಂಘದ ಕಚೇರಿ ಮುಂದೆ ಸಂಘದ ಜಿಲ್ಲಾಧ್ಯಕ್ಷ ಡಾ. ಪರಮೇಶ್ವರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಎನ್‌ಎಂಸಿ ಮಸೂದೆ ವಾಪಸ್ ಪಡೆಯುವಂತೆ ಆಗ್ರಹಿಸಿದರು.
ಜಿಲ್ಲೆಯಾದ್ಯಂತ ಮುಷ್ಕರ ಬೆಂಬಲಿಸಿ ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ವಿಭಾಗದಲ್ಲಿ ವೈದ್ಯಕೀಯ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸ ಲಾಗುತ್ತಿದೆ. ನಮ್ಮ ಬೇಡಿಕೆ ಈಡೇರುವವರೆಗೆ ಹೋರಾಟ ಇರುತ್ತದೆ ಎಂದು ಎಚ್ಚರಿಸಿ, ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ಕುಮಾರ್‌ಗೆ ಮನವಿ ಸಲ್ಲಿಸಿದರು.
ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಅಧ್ಯಕ್ಷ ಡಾ. ಪರಮೇಶ್ವರಪ್ಪ ಮಾತನಾಡಿ, ಹಿಂದೆ ಇದ್ದ ಎಂಸಿಎ ರದ್ದುಗೊಳಿಸಿ ಬಡವರ ವಿರೋಧಿಯಾಗಿರುವ
ಎನ್‌ಎಂಸಿ ಮಸೂದೆ ಜಾರಿಯಾದರೆ ಬಡವರು, ದಲಿತರು, ಹಿಂದುಳಿದವರು ವೈದ್ಯಕೀಯ ಶಿಕ್ಷಣ ಪಡೆಯುವುದು ಕಷ್ಟವಾಗಲಿದೆ. ಕೇಂದ್ರ ಸರ್ಕಾರ ಮಸೂದೆ ಜಾರಿಗೆ ತರಬಾರದು ಎಂದು ಒತ್ತಾಯಿಸಿದರು. ಎಂಸಿಎಯಲ್ಲಿ ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿ ಪ್ರತಿನಿಧಿಗಳನ್ನು ಚುನಾಯಿಸಲಾಗುತಿತ್ತು. ಇದರಲ್ಲಿ ವೈದ್ಯರೇ ಇರುತ್ತಿದ್ದರಿಂದ ವೈದ್ಯಕೀಯ ಕ್ಷೇತ್ರದ ಸಾಧಕ- ಬಾಧಕಗಳ ಬಗ್ಗೆ ಅರಿವು ಇರುತ್ತಿತ್ತು. ಆದರೆ ಈಗ ಇದನ್ನು ರದ್ದುಗಳಿಸಿ ಎನ್‌ಎಂಸಿ ಮಸೂದೆ ಜಾರಿಗೊಳಿಸಲು ಮುಂದಾಗಿದ್ದು, ಇದರಲ್ಲಿ ಸರ್ಕಾರದ ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ಆರೋಪಿಸಿದರು.
ಖಾಸಗಿ ವೈದ್ಯಕೀಯ ಕಾಲೇಜುಗಳ ಶೇ. 40 ಸೀಟುಗಳಿಗೆ ಶುಲ್ಕ ನಿಗದಿ ಮಾಡುವ ಅಧಿಕಾರ ಸರ್ಕಾರದ ಬಳಿ ಇರಲಿದೆ. ಹೀಗಾಗಿ ಖಾಸಗಿ ವೈದ್ಯಕೀಯ ಕಾಲೇಜುಗಳು ಸರ್ಕಾರಿ ಕೋಟಾದಡಿ ಸೀಟು ಬಿಟ್ಟು ಉಳಿದ ಸೀಟುಗಳಿಗೆ ಮನಬಂದಂತೆ ಶುಲ್ಕ ವಿಧಿಸಲಿವೆ. ಇದರಿಂದ ಬಡವರು, ದಲಿತರಿಗೆ ವೈದ್ಯಕೀಯ ಶಿಕ್ಷಣ ಎಂಬುದು ಗಗನಕುಸುವಾಗಲಿದೆ. ಈ ಕ್ರಮದಿಂದ ವೈದ್ಯಕೀಯ ಲೋಕಕ್ಕೆ ತೊಂದರೆಯಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಹಲವು ಲೋಪ ಹೊಂದಿರುವ ಅವೈಜ್ಞಾನಿಕ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಬಾರದು. ಈ ನಿರ್ಧಾರದಿಂದ ಕೇಂದ್ರ ಸರ್ಕಾರ ಹಿಂದೆ ಸರಿಯಬೇಕು ಎಂದು ಆಗ್ರಹಿಸಿ ವೈದ್ಯರು ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಡಾ. ಪ್ರಭಾಕರ್, ಡಾ. ರಾಜೇಂದ್ರಪ್ರಸಾದ್,ಡಾ. ಭೂಷಣ್, ಡಾ. ರಂಗೇಗೌಡ, ಡಾ. ಸಂಜಯ್, ಡಾ. ಸುರೇಶ್‌ಬಾಬು, ಡಾ. ಲೋಕೇಶ್ ಬಾಬು, ಡಾ. ಹರೀಶ್, ಡಾ. ತ್ಯಾಗರಾಜು, ಡಾ. ಮಹೇಶ್, ಡಾ. ಲಕ್ಷ್ಮೀಕಾಂತ್, ಡಾ. ಅರುಂಧತಿ, ಡಾ. ಕವಿತಾ, ಡಾ. ಸತೀಶ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.