ಮಕ್ಕಳಲ್ಲಿ ಸಂಶೋಧನಾ ಪ್ರವೃತ್ತಿ ಬೆಳೆಸಿ

ಯುವವಿಜ್ಞಾನಿ ಸ್ಪರ್ಧೆ ಪ್ರಶಸ್ತಿ ಪ್ರದಾನ • ಶಿಕ್ಷಕರಿಗೆ ಸಲಹೆ ನೀಡಿದ ಕಾಮಾಕ್ಷಿ

Team Udayavani, Aug 12, 2019, 4:08 PM IST

12-Agust-43

ತುಮಕೂರಿನ ಆರ್ಯನ್‌ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಯುವ ವಿಜ್ಞಾನಿ ಸ್ಪರ್ಧೆಯ ವಿಜೇತರು ಗಣ್ಯರೊಂದಿಗೆ ಇರುವುದು.

ತುಮಕೂರು: ಪಾಠ ಪ್ರವಚನದ ಜೊತೆಗೆ ಮಕ್ಕಳಲ್ಲಿ ಸಂವಹನಾ ಕೌಶಲ್ಯ, ತಾರ್ಕಿಕ ಚಿಂತನೆ ಹಾಗೂ ಸಂಶೋಧನಾತ್ಮಕ ಪ್ರವೃತ್ತಿ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಎಂ.ಆರ್‌.ಕಾಮಾಕ್ಷಿ ಅಭಿಪ್ರಾಯಪಟ್ಟರು.

ನಗರದ ಆರ್ಯನ್‌ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ತುಮಕೂರು ಅವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಯುವವಿಜ್ಞಾನಿ ಸ್ಪರ್ಧೆ ಕಾರ್ಯಕ್ರಮದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಸ್ಪರ್ಧೆಗಳಲ್ಲಿ ಮಕ್ಕಳು ಹೆಚ್ಚಾಗಿ ಭಾಗವಹಿಸಲಿ: ವಿಜ್ಞಾನ ಮತ್ತು ತಂತ್ರಜ್ಞಾನ ಮುಂದುವರಿದಂತೆ ಮನುಷ್ಯನ ಅಗತ್ಯತೆಗಳು ಹೆಚ್ಚಿವೆ. ಮನುಷ್ಯನ ಅಗತ್ಯತೆಗಳಿಂದ ಉಂಟಾಗುವ ಸಮಸ್ಯೆ ಪರಿಹರಿಸಿಕೊಳ್ಳಲು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕಿದೆ. ಇದು ಶಿಕ್ಷಕರಿಂದ ಮಾತ್ರ ಸಾಧ್ಯವಿದ್ದು ಇಂತಹ ಸ್ಪರ್ಧೆಗಳಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದು ಹೇಳಿದರು.

ಶಿಕ್ಷಣ ನಮ್ಮ ಜವಾಬ್ದಾರಿ: ಜಗತ್ತಿನ ಮೂಲೆ ಮೂಲೆಗಳಲ್ಲಿ ನಡೆಯಲಿರುವ ಘಟನೆಗಳನ್ನು ನಾವು ಮನೆಯಲ್ಲಿಯೇ ಕುಳಿತು ಟೀವಿ, ಮೊಬೈಲ್ಗಳಲ್ಲಿ ನೋಡುವಂತಹ, ತಿಳಿದುಕೊಳ್ಳುವಂತಹ ತಂತ್ರಜ್ಞಾನ ಇದೆ. ಇದನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಆಲೋಚಿಸುವಂತೆ ಮಾಡುವ ಶಿಕ್ಷಣ ನೀಡುವುದು ನಮ್ಮ ಜವಾಬ್ದಾರಿ ಎಂದು ನುಡಿದರು.

ಸಾಧಿಸುವ ಛಲವಿರಲಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಲಲಿತಾಕುಮಾರಿ ಮಾತನಾಡಿ, ಮಕ್ಕಳ ಸಾಧನೆಗಳನ್ನು ತಿಳಿಸುತ್ತಾ ಮಕ್ಕಳು ವೈಚಾರಿಕತೆಯನ್ನು ಬೆಳೆಸಿಕೊಂಡು ಸಾಧಿಸುವ ಛಲವನ್ನು ಹೊಂದಬೇಕು ಎಂದು ಕಿವಿಮಾತು ಹೇಳಿದರು.

ಶಿಕ್ಷಣ ಇಲಾಖೆ ಸಹಕಾರ ನೀಡಲಿ: ಅಧ್ಯಕ್ಷತೆ ವಹಿಸಿದ್ದ ಕರಾವಿಪ ಜಿಲ್ಲಾ ಅಧ್ಯಕ್ಷ ಕ್ಯಾಲೆಂಡರ್‌ ಶಿವಕುಮಾರ್‌ ಮಾತನಾಡಿ, ಶಾಲಾ ಹಂತದಿಂದಲೇ ವಿದ್ಯಾರ್ಥಿಗಳು ಚಿಂತನಾಶೀಲತೆ ಬೆಳೆಸಿಕೊಳ್ಳುವಂತೆ ಪ್ರೇರೇಪಿಸುವ ಕಾರ್ಯಕ್ರಮಗಳನ್ನು ಕರಾವಿಪ ಹಮ್ಮಿಕೊಳ್ಳುತ್ತದೆ. ಶಿಕ್ಷಣ ಇಲಾಖೆ ಇದೇ ರೀತಿ ಸಹಕಾರ ನೀಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಡಿಡಿಪಿಐ ಕಚೇರಿ ವಿಜ್ಞಾನ ವಿಷಯ ಪರಿವೀಕ್ಷಕಿ ಪ್ರತಿಭಾ, ಆರ್ಯನ್‌ ಪ್ರೌಢಶಾಲೆ ಮುಖ್ಯ ಶಿಕ್ಷಕ ಗೋಪಾಲ್, ಕರಾವಿಪ ಜಿಲ್ಲಾ ಖಜಾಂಚಿ ಸಿದ್ದಪ್ಪ, ಜಿಲ್ಲಾ ಕಾರ್ಯದರ್ಶಿ ವಸಂತ ಕುಮಾರ್‌, ಶಿಕ್ಷಕರಾದ ನಾಗೇಶ್‌, ಪರಮೇಶ್ವರಯ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.