ಮಾದಕ ವ್ಯಸನಕ್ಕೆ ತುತ್ತಾಗುತ್ತಿದೆ ಯುವಜನಾಂಗ

ಅರಿವಿನಿಂದ ಬದಲಾವಣೆ • ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ ಸಲಹೆ

Team Udayavani, Jun 27, 2019, 5:01 PM IST

27-June-40

ತುಮಕೂರು ನಗರದ ಅಚರ್ಡ್‌ ಕೇಂದ್ರದಲ್ಲಿ ಬುಧವಾರ ಮಾದಕ ವಸ್ತುಗಳ ದುರ್ಬಳಕೆ ಹಾಗೂ ಅಕ್ರಮ ಸಾಗಾಟದ ವಿರುದ್ಧ ಆಯೋಜಿಸಿದ್ದ ಅಂತಾರಾಷ್ಟ್ರೀಯ ದಿನಾಚರಣೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ ಮಾತನಾಡಿದರು.

ತುಮಕೂರು:ಮಾದಕ ವ್ಯಸನಿಗಳಾಗುತ್ತಿರುವವರಲ್ಲಿ ಯುವಜನಾಂಗದ ಸಂಖ್ಯೆ ಹೆಚ್ಚಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ ಆತಂಕ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಪಂಚಾಯತ್‌, ಜಿಲ್ಲಾ ಪೊಲೀಸ್‌ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಚರ್ಡ್‌ ಮದ್ಯವರ್ಜನ ಹಾಗೂ ಸಮಗ್ರ ಪುನರ್ವ ಸತಿ ಕೇಂದ್ರಗಳ ಸಹಯೋಗದಲ್ಲಿ ನಗರದ ಅಚರ್ಡ್‌ ಕೇಂದ್ರದಲ್ಲಿ ಬುಧವಾರ ಮಾದಕ ವಸ್ತುಗಳ ದುರ್ಬಳಕೆ ಹಾಗೂ ಅಕ್ರಮ ಸಾಗಾಟದ ವಿರೋಧಿ ಅಂತಾರಾಷ್ಟ್ರೀಯ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಮಾದಕ ವಸ್ತುಗಳ ದುರ್ಬಳಕೆ ಹಾಗೂ ಕಳ್ಳಸಾಗಾಣಿಕೆ ದಿನೆದಿನೇ ಹೆಚ್ಚಾಗುತ್ತಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆ ಯಲ್ಲಿ ಮಾದಕ ವಸ್ತುಗಳ ದುಶ್ಚಟಕ್ಕೆ ಬಲಿಯಾಗು ತ್ತಿದ್ದಾರೆ. ಮಾದಕ ವಸ್ತುಗಳ ದುರ್ಬಳಕೆ ಹಾಗೂ ಕಳ್ಳ ಸಾಗಣಿಕೆ ವಿರುದ್ಧ ಕಟ್ಟುನಿಟ್ಟಿನ ಕಾಯ್ದೆಗಳಿದ್ದರೂ ಹೊಲಗಳಲ್ಲಿ ಗಾಂಜಾ ಬೆಳೆಯುವುದು ನಿಂತಿಲ್ಲ. ಗಾಂಜಾ ಬೆಳೆಗೆ ಸಂಬಂಧಿ ಸಿದಂತೆ ಕಳೆದ 6 ತಿಂಗಳಲ್ಲಿ ಹೆಚ್ಚಿನ ಪ್ರಕರಣಗಳು ನ್ಯಾಯಾಲಯದ ಮುಂದೆ ಬಂದಿವೆ ಎಂದು ಹೇಳಿದರು.

ನಿಗಾ ಇಡಿ: ಹದಿ ಹರೆಯದ ಮಕ್ಕಳು ಮಾದಕ ದ್ರವ್ಯ ಸೇವನೆಗೆ ಬಲಿಯಾದರೆ, ಅವರ ಆರೋಗ್ಯ ಹಾಳಾಗು ವುದಲ್ಲದೆ ಕುಟುಂಬ ವರ್ಗದವರು ದುಷ್ಪರಿಣಾಮ ಎದುರಿಸಬೇಕಾಗುತ್ತದೆ. ಒಮ್ಮೆ ಮಾದಕ ವ್ಯಸನಿ ಗಳಾದವರನ್ನು ವ್ಯಸನಮುಕ್ತರನ್ನಾಗಿಸುವುದು ಬಹಳ ಕಷ್ಟ. ಈ ನಿಟ್ಟಿನಲ್ಲಿ ಪೋಷಕರು ಮಕ್ಕಳ ಚಲನವಲನದ ಮೇಲೆ ನಿಗಾ ಇಟ್ಟಿರಬೇಕು ಎಂದರು.

ವಿಶ್ವಾಸದಿಂದ ಮನವೊಲಿಸಿ: ಪೋಷಕರ ಪ್ರೀತಿ ಯಿಂದ ವಂಚಿತರಾದವರು, ಮಾನಸಿಕ ಒತ್ತೂಡಕ್ಕೊಳ ಗಾದವರು ಕ್ಷಣಿಕ ಸುಖಕ್ಕಾಗಿ ಯುವಜನಾಂಗ ಮಾದಕ ವ್ಯಸನಿಗಳಾಗುತ್ತಿದ್ದಾರೆ. ವ್ಯಸನರಾದ ಮಕ್ಕಳನ್ನು ಹೆದರಿಸಿ ಬೆದರಿಸಿ ಸರಿದಾರಿಗೆ ತರಲಾಗು ವುದಿಲ್ಲ. ಪ್ರೀತಿ ವಿಶ್ವಾಸದಿಂದ ಮನವೊಲಿಸಿ ತಿಳಿಹೇಳ ಬೇಕು ಎಂದು ಹೇಳಿದರು. ಮಾದಕ ವಸ್ತುಗಳ ಮಾರಾಟದ ಬಗ್ಗೆ ಸುಳಿವು ಸಿಕ್ಕಿದವರು ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡ ಬೇಕು ಎಂದರಲ್ಲದೆ ದಿನಾಚರಣೆಯಿಂದ ಜವಾಬ್ದಾರಿ ಮುಗಿಯುವುದಿಲ್ಲ. ಮಾದಕ ಮುಕ್ತ ಸ್ವಸ್ಥ ಸಮಾಜ ನಿರ್ಮಿಸುವುದು ನಮ್ಮೆಲ್ಲರ ಹೊಣೆ ಎಂದು ತಿಳಿಸಿದರು.

ಇಲಾಖೆಯದ್ದಷ್ಟೇ ಜವಾಬ್ದಾರಿಯಲ್ಲ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೋನ ವಂಶಿಕೃಷ್ಣ ಮಾತ ನಾಡಿ, ವಿಶ್ವ ಸಂಸ್ಥೆಯು 1987ರಿಂದ ಈ ದಿನ ಆಚರಿಸಲು ಘೋಷಿಸಿದ್ದು, ಈ ವರ್ಷ ಆರೋಗ್ಯಕ್ಕಾಗಿ ನ್ಯಾಯ, ನ್ಯಾಯಕ್ಕಾಗಿ ಆರೋಗ್ಯ ಎಂಬ ಘೋಷಾ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಮಾದಕ ವಸ್ತುಗಳ ದುರ್ಬಳಕೆ ಹಾಗೂ ಅಕ್ರಮ ಸಾಗಾಟದ ವಿರುದ್ಧ ದನಿ ಎತ್ತುವುದು ಯಾವುದೇ ಒಂದು ಇಲಾಖೆ ಜವಾಬ್ದಾರಿಯಲ್ಲ. ಸಾರ್ವಜನಿಕರು, ಅಧಿಕಾರಿಗಳು, ಪೋಷಕರು ಕೈ ಜೋಡಿಸಬೇಕು ಎಂದು ಕರೆ ನೀಡಿದರು.

ಇಲಾಖೆಯ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಮಾದಕ ವಸ್ತುಗಳ ಅಕ್ರಮ ಸಾಗಾಟದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ತರಬೇತಿ ನೀಡ ಲಾಗುತ್ತಿದೆ. ಮಾದಕ ವಸ್ತುಗಳ ಸೇವನೆ ಒಂದು ಸಾಮಾಜಿಕ ಪಿಡುಗಾಗಿದ್ದು, ಇದನ್ನು ತಡೆಗಟ್ಟಲು ಯುವ ಜನಾಂಗ ಮುಂದಾಗಬೇಕು ಎಂದು ತಿಳಿಸಿ ದರು. ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿ ಪ್ರೇಮ್‌ಕುಮಾರ್‌ ಮಾತನಾಡಿ, 15ರಿಂದ 20 ವರ್ಷ ವಯೋಮಾನದವರು ಈ ದುಶ್ಚಟಕ್ಕೆ ಬಲಿ ಯಾಗುತ್ತಿ ದ್ದಾರೆ. ಓದಬೇಕಾದ ವಯಸ್ಸಿನಲ್ಲಿ ಕುತೂ ಹಲಕ್ಕಾಗಿ ಮಾದಕ ವ್ಯಸನಿಗಳಾಗುತ್ತಿದ್ದಾರೆ. ಅಲ್ಲದೆ ಮಾನಸಿಕ ಒತ್ತಡಕ್ಕೊಳಗಾದವರು ಧ್ಯಾನ, ಹಿರಿಯರ ಮಾರ್ಗ ದರ್ಶನ ಮತ್ತಿತರ ಮಾರ್ಗ ಅನುಸರಿಸದೆ ಮದ್ಯ ಸೇವನೆಯಂತಹ ದುಶ್ವಟ ಬೆಳೆಸಿಕೊಳ್ಳುತ್ತಿದ್ದಾರೆ. ಸಿನಿಮಾ, ಸಾಮಾಜಿಕ ಜಾಲತಾಣಗಳಲ್ಲಿರುವ ಋಣಾ ತ್ಮಕ ಅಂಶ ಗಣನೆಗೆ ತೆಗೆದುಕೊಳ್ಳದೆ ಧನಾತ್ಮಕ ಅಂಶ ಮಾತ್ರ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕುಷ್ಠರೋಗ ನಿಯಂತ್ರಣ ಮತ್ತು ಮಾನಸಿಕ ರೋಗ ನಿವಾರಣಾಧಿಕಾರಿ ಡಾ. ಚೇತನ್‌ ಮಾತನಾಡಿ, ಮಾದಕ ವಸ್ತುಗಳ ಅಕ್ರಮ ಮಾರಾಟದ ಜಾಲ ನಗರದಲ್ಲಿ ಮಾತ್ರ ಹರಡಿದ್ದು, ವ್ಯಸನಿಗಳ ಸಂಖ್ಯೆ ಹೆಚ್ಚಾದಂತೆ ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರಗಳಲ್ಲಿಯೂ ತನ್ನ ಜಾಲವನ್ನು ಹರಡುವ ಸಾಧ್ಯತೆ ಇದೆ ಎಂದು ಹೇಳಿದರು.

ದೂರವಿರುವುದೇ ಲೇಸು: ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ.ಶರತ್‌ ವಿಶ್ವರಾಜ್‌ ಮಾತನಾಡಿ, ಡಿ-ಅಡಿಕ್ಷನ್‌ ಕೇಂದ್ರಗಳಲ್ಲಿ ಮಾದಕ ವ್ಯಸನಿಗಳನ್ನು ವ್ಯಸನಮುಕ್ತರನ್ನಾಗಿಸ ಬಹುದು. ಕುತೂಹಲಕ್ಕೆ ಆರಂಭವಾಗುವ ಮಾದಕ ಸೇವನೆ ನಂತರ ಚಟವಾಗಿ ಬೆಳೆಯುತ್ತದೆ.

ಈ ಚಟ ಬಿಟ್ಟಾಗ ದೇಹದಲ್ಲಿ ವಿಚಿತ್ರ ಅನುಭವ ಅನುಭವ ಗಳಾಗುತ್ತವೆ. ಈ ನಿಟ್ಟಿನಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮ ಅರಿತು ಅದರಿಂದ ದೂರ ವಿರುವುದೇ ಲೇಸು. ಉತ್ತಮ ಅಭಿರುಚಿ ಬೆಳೆಸಿ ಕೊಂಡಲ್ಲಿ ಆರೋಗ್ಯಕರ ಹಾಗೂ ನೆಮ್ಮದಿಯುತ ಜೀವನ ನಮ್ಮದಾಗುತ್ತದೆ ಎಂದು ಸಲಹೆ ನೀಡಿದರು. ಅಚರ್ಡ್‌ ಮದ್ಯವರ್ಜನ ಮತ್ತು ಪುನರ್ವಸತಿ ಕೇಂದ್ರದಲ್ಲಿ ವ್ಯಸನ ಮುಕ್ತರಾದವರು ಅನುಭವ ಹಂಚಿಕೊಂಡರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷೆ ಜಿ.ಕೆ.ಅನಿಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜು, ಜಿಲ್ಲಾ ಹಿರಿಯ ನಾಗರಿಕರ ಮತ್ತು ವಿಕಲಚೇತನರ ಕಲ್ಯಾಣಾಧಿಕಾರಿ ರಮೇಶ್‌, ಅಚರ್ಡ್‌ ಸಂಸ್ಥೆಯ ನಿರ್ವಾಹಕ ನಿರ್ದೇಶಕ ಡಾ.ಎಚ್.ಜಿ. ಸದಾಶಿವಯ್ಯ, ಕಾರ್ಯದರ್ಶಿ ಮಾಲಾ ಸದಾಶಿವಯ್ಯ ಇದ್ದರು.

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.