ಶೇ.100ರಷ್ಟು ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ
Team Udayavani, Mar 8, 2020, 6:30 PM IST
ತುಮಕೂರು: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನ ಬಳಸಿ ಮಾರ್ಚ್ ಅಂತ್ಯದೊಳಗೆ ಶೇ.100ರಷ್ಟು ಪ್ರಗತಿ ಸಾಧಿಸಬೇಕೆಂದು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್‌ಸಿಪಿ, ಟಿಎಸ್‌ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಲಾಖೆವಾರು ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನ ಹಾಗೂ ವೆಚ್ಚವಾಗಿರುವ ಮೊತ್ತದ ಬಗ್ಗೆ ಇಲಾಖೆಅಧಿಕಾರಿಗಳಿಂದ ದೃಢೀಕರಣ ಪಡೆಯುವಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು.
ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು. ಹೆಚ್ಚುವರಿ ಅನುದಾನ ಬಿಡುಗಡೆಯಾಗುತ್ತಿರುವ ಇಲಾಖೆಗಳಲ್ಲಿ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿಟ್ಟುಕೊಳ್ಳಬೇಕು. ಅಲ್ಲದೆ ಸಮಸ್ಯೆ ಇದ್ದರೆ ನೇರವಾಗಿ ಗಮನಕ್ಕೆ ತರಬೇಕು ಎಂದರು.
ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಪ್ರೇಮ್‌ನಾಥ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರೇಮಾ, ಜಿಲ್ಲಾಮಟ್ಟದ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ
MUST WATCH
ಹೊಸ ಸೇರ್ಪಡೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.