ಸಿದ್ದರಬೆಟ್ಟ ಶ್ರೀಮಠದಲ್ಲಿ 16ನೇ ವಾರ್ಷಿಕೋತ್ಸವ ; ಜನಜಾಗೃತಿ ಧರ್ಮ ಸಮಾವೇಶ
27 ಜೋಡಿ ಸಾಮೂಹಿಕ ವಿವಾಹ ಮಹೋತ್ಸವ ; ಡಾ.ಮಂಜುನಾಥ್‌ಗೆ ಸಿದ್ದಶ್ರೀ ಪ್ರಶಸ್ತಿ ಪ್ರಧಾನ
Team Udayavani, Jun 23, 2022, 6:50 PM IST
ಕೊರಟಗೆರೆ: ಸಿದ್ದರಬೆಟ್ಟದ ಶ್ರೀವೀರಭದ್ರ ಶಿವಚಾರ್ಯರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಸಿದ್ದರಬೆಟ್ಟ ಶ್ರೀಮಠವು ಮಾನವ ಧರ್ಮ ಸ್ಥಾಪನೆಗೆ ಆದ್ಯತೆ ನೀಡಿದೆ. ಜಗದ್ಗುರು ರೇಣುಕಾಚಾರ್ಯ ಮತ್ತು ಬಸವಣ್ಣನವರ ಆಶೀರ್ವಾದ ಸದಾ ಶ್ರೀಮಠದ ಮೇಲೆ ಇರಲಿದೆ ಎಂದು ಬಾಳೆಹೊನ್ನೂರು ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ1008 ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದಕರು ತಿಳಿಸಿದರು.
ಕೊರಟಗೆರೆ ತಾಲೂಕಿನ ಸಸ್ಯಸಂಜೀವಿನಿ ಕ್ಷೇತ್ರ ಸಿದ್ದರಬೆಟ್ಟದ ಶ್ರೀಬಾಳೆಹೊನ್ನೂರು ಖಾಸ ಶಾಖಾ ಮಠದಲ್ಲಿ ಗುರುವಾರ ಏರ್ಪಡಿಸಲಾಗಿದ್ದ 16 ನೇ ವಾರ್ಷಿಕೋತ್ಸವ, ಸಾಮೂಹಿಕ ವಿವಾಹ ಮಹೋತ್ಸವ, ಸಿದ್ದಶ್ರೀ ಪ್ರಶಸ್ತಿ ಪ್ರಧಾನ ಮತ್ತು ಜನಜಾಗೃತಿ ಧರ್ಮ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಕೇದಾರಪೀಠದ ಶ್ರೀಹಿಮವತ್ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ1008 ಜಗದ್ಗುರು ರಾವಲ್ ಪದವಿಭೂಷಿತ ಭೀಮಾಶಂಕರಲಿAಗ ಶಿವಾಚಾರ್ಯ ಭಗವತ್ಪಾದಕರು ಮಾತನಾಡಿ ಕೇದಾರನಾತಪೀಠ ಮತ್ತು ರಂಭಾಪುರಿ ಶ್ರೀಮಠ ವರ್ಷಕ್ಕೆ ೧ತಿಂಗಳು ಧರ್ಮಜಾಗೃತಿ ಸಮಾವೇಶಗಳಿಗೆ ಮೀಸಲು ಇರಿಸಿದೆ. ಧರ್ಮಜಾಗೃತಿ ಕಾರ್ಯಕ್ರಮಕ್ಕೆ ಭಕ್ತಾವೃಂದ್ದ ಸಹಾಯಹಸ್ತ ಮತ್ತು ಸ್ವಯಂಪ್ರೇರಿತವಾಗಿ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು.
ವಸತಿ ಸಚಿವ ವಿ.ಸೋಮಣ್ಣ ಮಾತನಾಡಿ, 16 ವರ್ಷದಲ್ಲಿ ೫೦ವರ್ಷದ ಸಾಧನೆ ಮಾಡಿರುವ ಸಿದ್ದರಬೇಟ್ಟ ಶ್ರೀಗಳ ಕಾರ್ಯ ಶ್ಲಾಘನೀಯ. ಸಿದ್ದರಬೆಟ್ಟ ಶ್ರೀಮಠಕ್ಕೆ ಕೊರಟಗೆರೆ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಭಕ್ತರಿದ್ದಾರೆ. ಸಿದ್ದರಬೆಟ್ಟ ಶ್ರೀಮಠದ ಭಕ್ತರಾಗಿ ನಾವು ಶ್ರೀಗಳು ತೋರಿಸಿದ ಕೆಲಸ ಮಾಡುತ್ತೇವೆ. ಗ್ರಾಮೀಣ ಪ್ರದೇಶದ ಅಭಿವೃದ್ದಿ ಕೆಲಸ ಮತ್ತು ಅನುಧಾನದ ಜವಾಬ್ದಾರಿ ನನ್ನದು. ಶ್ರೀಮಠದ ಜೊತೆಯಲ್ಲಿ ರಾಜ್ಯ ಸರಕಾರ ಮತ್ತು ನಾನು ಸದಾ ಇರುತ್ತೇನೆ ಎಂದು ಭರವಸೆ ನೀಡಿದರು.
ಸಿದ್ದರಬೆಟ್ಟ ಶ್ರೀಮಠದ ಪೀಠಾಧ್ಯಕ್ಷ ಶ್ರೀವೀರಭದ್ರ ಶಿವಚಾರ್ಯ ಸ್ವಾಮೀಜಿ ಮಾತನಾಡಿ ಭಕ್ತರ ಸಹಕಾರ ಮತ್ತು ಸಹಾಯದಿಂದ ಸಿದ್ದರಬೆಟ್ಟ ಶ್ರೀಮಠ ಭಕ್ತರಿಗೆ ಆಸರೆಯಾಗಿದೆ. ಸಿದ್ದರಬೆಟ್ಟ ಶ್ರೀಮಠದಿಂದ ಪ್ರತಿವರ್ಷ ೧ಗ್ರಾಮವನ್ನು ದತ್ತು ಪಡೆದು ಅಭಿವೃದ್ದಿ, ಶಿಕ್ಷಣ ಮತ್ತು ಉದ್ಯೋಗಕ್ಕೆ ಆಧ್ಯತೆ ನೀಡುತ್ತೇವೆ. ಪರಿಶುದ್ದವಾದ ಭಸ್ಮ ಘಟಕವು ಸಿದ್ದರಬೆಟ್ಟ ಶ್ರೀಮಠದಲ್ಲಿ ಪ್ರಾರಂಭವಾಗಿದೆ ಎಂದು ತಿಳಿಸಿದರು.
ಕಣ್ವಕುಪ್ಪೆ ಶ್ರೀಮಠದ ಡಾ.ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ದೊಡ್ಡಗುಣಿಯ ಶ್ರೀರೇವಣ್ಣಸಿದ್ದ ಶಿವಚಾರ್ಯ ಸ್ವಾಮಿಗಳು, ಎಲೆರಾಂಪುರದ ಡಾ.ಹನುಮಂತನಾಥ ಸ್ವಾಮೀಜಿ, ದೇವಾಪುರದ ಶ್ರೀಶಿವಮೂರ್ತಿ ಶಿವಚಾರ್ಯ ಸ್ವಾಮೀಜಿ, ಮಳಲಿಮಠದ ಡಾ.ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಕಾರದಮಠದ ಶ್ರೀಕಾರದ ವೀರಬಸವ ಸ್ವಾಮೀಜಿಗಳ ಸಮ್ಮುಖದಲ್ಲಿ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.
ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ತುಮಕೂರು ಸಂಸದ ಜಿ.ಎಸ್.ಬಸವರಾಜು, ಕೊರಟಗೆರೆ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್, ಪಿಡಬ್ಲ್ಯೂಡಿ ಅಪರ ರಾಜ್ಯ ಕಾರ್ಯದರ್ಶಿ ಅನಿಲ್‌ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕರವಿ, ಅಖಿಲಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಸಿದ್ದಮಲ್ಲಪ್ಪ, ಹಾಲು ಒಕ್ಕೂಟದ ನಿರ್ದೇಶಕ ಈಶ್ವರಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Waqf; ವಿಜಯೇಂದ್ರ ವಿರುದ್ಧ ಲಂಚ ಆರೋಪ: ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ
Sri Lanka; ಭಾರತದ ವಿರುದ್ದ ನಮ್ಮ ಭೂಮಿಯನ್ನು ಬಳಸಲು ಬಿಡೆವು: ಲಂಕಾ ಅಧ್ಯಕ್ಷ ಡಿಸಾನಾಯಕೆ
Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?
Kiccha Sudeep: ಬಿಗ್ ಬಾಸ್‌ಗೆ ಗುಡ್ ಬೈ.. ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ಕಿಚ್ಚ
ಮದುವೆಯ ಮೊದಲ ರಾತ್ರಿಯೇ ಪತಿಗೆ ಹಾಲಿನಲ್ಲಿ ಮತ್ತು ಬರುವ ಔಷಧಿ ಹಾಕಿ ನಗನಗದು ದೋಚಿದ ಪತ್ನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.