18 ಹಳ್ಳಿ ಗಳಿಗೆ ಹೇಮೆ ಹರಿಸಲು ಆಗ್ರಹ


Team Udayavani, Dec 14, 2019, 5:10 PM IST

tk-tdy-1

ತುಮಕೂರು: ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೋರಾ ಮತ್ತು ಚೆನ್ನರಾಯ ದುರ್ಗ ಹೋಬಳಿಯ 18 ಹಳ್ಳಿಗಳಿಗೆ ಹೇಮಾವತಿ ನೀರು ಹರಿಸಬೇಕು ಎಂದು ಆಗ್ರಹಿಸಿ ಶ್ರೀ ಕ್ಷೇತ್ರದ ಸಿದ್ಧರಬೆಟ್ಟ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಶುಕ್ರವಾರ ಬೈಕ್‌ ರ್ಯಾಲಿ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರ ಮೇಶ್ವರ್‌ ಅವರ ತವರು ಕ್ಷೇತ್ರದಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗುತ್ತಿದ್ದು, 18 ಗ್ರಾಮ ಗಳಿಗೆ ನೀರು ಹರಿಸಬೇಕೆಂದು ಸ್ವಾಮೀಜಿಯವರೇ ಬೀದಿಗಿಳಿದು ಹೋರಾಟ ಆರಂಭಿಸಿದ್ದಾರೆ. ಚನ್ನರಾಯದುರ್ಗ ಹೋಬಳಿಯ 18 ಹಳ್ಳಿಗಳಿಗೆ ಹೇಮಾವತಿ ನೀರು ಹರಿಸಬೇಕೆಂದು ಬೈಕ್‌ ರ್ಯಾಲಿ ಮೂಲಕ ನಗರಕ್ಕೆ ಬಂದ ಪ್ರತಿಭಟನಾಕಾರರು ನಗರದಲ್ಲಿ ಪಾದಯಾತ್ರೆ ಮಾಡಿದರು.

ತೋವಿನಕೆರೆಯಿಂದ ಹೊರಟ ರ್ಯಾಲಿಯಲ್ಲಿ 18 ಗ್ರಾಮಗಳ ಮುಖಂಡರ, ರೈತರು ಸೇರಿದಂತೆ ನೂರಾರು ಪ್ರತಿಭಟನಾಕಾರರು ಭಾಗವಹಿಸಿದ್ದರು. ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ರ್ಯಾಲಿ ಅಂತ್ಯಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌ ಅವರಿಗೆ ಶ್ರೀಗಳ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

9 ವರ್ಷಗಳಿಂದ ನೀರಿಲ್ಲ: ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿದ್ಧರಬೆಟ್ಟ ಬಾಳೆಹೊನ್ನೂರು ಶಾಖಾ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಕೊರಟಗೆರೆ ಪಟ್ಟಣ ಹಾಗೂ ಮಾರ್ಗಮಧ್ಯದಲ್ಲಿ ಬರುವ ತೋವಿನಕೆರೆ ಸೇರಿದಂತೆ 17 ಹಳ್ಳಿಗಳಿಗೆ ಹೇಮಾವತಿ ನಾಲೆಯನ್ನು ಮೂಲವಾಗಿಸಿಕೊಂಡು ಕುಡಿಯುವ ನೀರು ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಮಂಜೂರಾತಿ ನೀಡಿ 14 ವರ್ಷವಾಗಿದೆ. 9 ವರ್ಷದ ಹಿಂದೆಯೇ ಕೊರಟಗೆರೆಗೆ ನೀರು ಒದಗಿಸುವ ಪೈಪ್‌ ಲೈನ್‌ ಕಾಮಗಾರಿ ಮುಗಿದಿದ್ದು, ಅಗ್ರಹಾರ ಕೆರೆಗೆ ನೀರು ಬಿಡಲಾಗಿದೆ. ಆದರೆ, ಮಾರ್ಗಮಧ್ಯದಲ್ಲಿ ಬರುವ 18 ಹಳ್ಳಿಗಳಿಗೆ ನೀರು ಒದಗಿಸುವ ಯಾವುದೇ ಕೆಲಸ ಪ್ರಾರಂಭಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಾಮಗಾರಿ ಮುಗಿದರೂ ನೀರಿಲ್ಲ: ಭಾರತ ಸರ್ಕಾರದ ನಗರಾಭಿವೃದ್ಧಿ ಮತ್ತು ಬಡತನ ನಿರ್ಮೂಲನೆ ಮಂತ್ರಾಲಯದ ಜಂಟಿ ಸಲಹೆಗಾರರು ಪತ್ರದ ಮೂಲಕ 2005ರಲ್ಲಿ ತಾಂತ್ರಿಕ ಅನುಮೋದನೆ ನೀಡಿದ್ದಾರೆ. ಇದಕ್ಕೆ ರಾಜ್ಯ ಸರಕಾರದಿಂದಲೂ ಅನುಮೋದನೆ ದೊರಕಿದೆ. ಆದೇಶದನ್ವಯ ಕೊರಟಗೆರೆ ಹಾಗೂ ಮಾರ್ಗಮಧ್ಯದ 18 ಹಳ್ಳಿಗೆ ಹೇಮಾವತಿ ನಾಲೆಯಿಂದ ಕುಡಿಯುವ ನೀರು ಹರಿಸಬೇಕು. ಕಾಮಗಾರಿ ಮಗಿದಿದೆ, ಎಲ್ಲಾ ಕೆರೆಗಳ ವಾಲ್‌ಗ‌ಳನ್ನು ಅಳವಡಿಸಲಾಗಿದೆ. ಆದರೆ, ಕೆರೆಗಳಿಗೆ ನೀರು ಮಾತ್ರ ಹರಿಸಿಲ್ಲ ಎಂದು ಅಳಲು ತೋಡಿಕೊಂಡರು.

ಈ ಭಾಗದಲ್ಲಿ ಅಂತರ್ಜಲದ ಮಟ್ಟ ಕುಸಿದಿದೆ. ಸುಮಾರು 1,200 ರಿಂದ 1,500 ಅಡಿ ಕೊಳವೆ ಬಾವಿ ಕೊರೆಸಿದರೂ, ಹನಿ ನೀರು ಸಿಗುತ್ತಿಲ್ಲ. ನೀರು ಸಿಕ್ಕರೂ, ಕುಡಿಯಲು ಯೋಗ್ಯವಾಗಿರುವುದಿಲ್ಲ. ರೈತರು ನೀರಿನ ಸಮಸ್ಯೆಯಿಂದ ತೋಟ ಹಾಗೂ ಇನ್ನಿತರ ಬೆಳೆಗಳನ್ನು ಕಳೆದುಕೊಂಡಿದ್ದಾರೆ. ಮಳೆಯಾಶ್ರಯ ಬಿಟ್ಟರೆ ಯಾವುದೇ ರೀತಿಯ ನೀರಿನ ಮೂಲಗಳು ಈ ಭಾಗದಲ್ಲಿ ಇಲ್ಲ ಎಂದರು.

ಪ್ರತಿಭಟನೆಯಲ್ಲಿ ಡಮರುಗ ಉಮೇಶ್‌, ವಾಲೆಚಂದ್ರಯ್ಯ, ಕಾಂತರಾಜು, ಸದಾಶಿವಯ್ಯ, ಸುಧಾ, ದಸಂಸ ರಾಜಾಧ್ಯಕ್ಷ ಡಾ.ನಾಗರಾಜ್‌, ಅರುಣ್‌, ಹೇಮಂತ್‌, ಸ್ವಾಮಿ, ನಾಗರಾಜಯ್ಯ ಹಾಗೂ ರೈತ ಮುಖಂಡರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.