ನರೇಗಾ ಫ‌ಲಾನುಭವಿಗಳ ಖಾತೆಗೆ 1,860 ಕೋಟಿ

ಕೋವಿಡ್‌-19 ಗ್ರಾಪಂ ಮಟ್ಟದ ಟಾಸ್ಕ್ ಫೋರ್ಸ್‌ ಸಭೆಯಲ್ಲಿ ಕೆ.ಎಸ್‌.ಈಶ್ವರಪ್ಪ

Team Udayavani, Apr 17, 2020, 3:29 PM IST

ನರೇಗಾ ಫ‌ಲಾನುಭವಿಗಳ ಖಾತೆಗೆ 1,860 ಕೋಟಿ

ಕುಣಿಗಲ್‌: ನರೇಗಾ ಯೋಜನೆಡಿಯಲ್ಲಿ ಯಾರು ಕೂಲಿ ಮಾಡಿ ಬಾಕಿ ಇದೆಯೋ ಹಾಗೂ ಸಾಮಗ್ರಿ ಬಳಸಿದ್ದಿರೋ ಅವರಿಗೆ ಕೇಂದ್ರ ಸರ್ಕಾರ 1,860 ಕೋಟಿ ಹಣ ಬಿಡುಗಡೆ ಮಾಡಿದೆ, ಅಷ್ಟು ಹಣ ವನ್ನು ಎರಡು ಮೂರು ದಿನದ ಒಳಗೆ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಪಂಚಾಯತ್‌ ರಾಜ್‌, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ತಾಲೂಕಿನ ಕೊಪ್ಪ ಗ್ರಾಪಂ ವ್ಯಾಪ್ತಿಯ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ ಎನ್‌ಆರ್‌ಐಜಿ ಜನೆ ಕಾಮಗಾರಿ ಪರಿಶೀಲನೆ ಹಾಗೂ ಕೋವಿಡ್‌-19 ಸಂಬಂಧಪಟ್ಟ ಗ್ರಾಪಂ ಮಟ್ಟದ ಟಾಸ್ಕ್ ಪೋರ್ಸ್‌ ಸಭೆಯಲ್ಲಿ ಮಾತನಾಡಿದರು. ಕೇಂದ್ರ ಸರ್ಕಾರ ಇತ್ತೀಚಿಗೆ ಬಿಡುಗಡೆ ಮಾಡಿರುವ 1860 ಕೋಟಿ ರೂ. ಜತೆಗೆ ಹೆಚ್ಚುವರಿಯಾಗಿ ಒಂದು ಸಾವಿರ ಕೋಟಿ ರೂ. ಹಣ ನೀಡಿದೆ, ಈಗಾಗಲೇ ಕ್ರಿಯಾ ಯೋಜನೆ ತಯಾರಾಗುತ್ತಿದ್ದು ಈ ಸಂಬಂಧ ಎಲ್ಲಾ ಜಿಪಂ ಸಿಇಒಗಳಿಗೆ ಸೂಚಿಸಲಾಗಿದೆ ಎಂದರು.

ಬಾಕಿ ಹಣಕ್ಕೆ ಆಗ್ರಹ: ಶಾಸಕ ಡಾ.ರಂಗನಾಥ್‌ ಮಾತನಾಡಿ, ತಾಲೂಕಿನ ವಿವಿಧೆಡೆ ಚೆಕ್‌ ಡ್ಯಾಂ ನಿರ್ಮಾಣ ಮಾಡಲಾಗಿದೆ. ಆದರೆ ಉಜ್ಜಿನಿ ಗ್ರಾಮದ ಆಗಿರುವ ಅವ್ಯವಹಾರದಿಂದ ಇತರೆ ಯವರು ಮಾಡಿರುವ ಕಾಮಗಾರಿಯ ಬಿಲ್‌ ಅನ್ನು ತಡೆ ಹಿಡಿಯಲಾಗಿದೆ ಕೂಡಲೇ ಹಣ ಬಿಡುಗಡೆ ಮಾಡಿ ಜಾಬ್‌ ಕಾರ್ಡ್‌ ಇರುವರಿಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಪಡಿಸಿದರು.

ಅವ್ಯವಹಾರ: ಜಿಪಂ ಸಿಇಒ ಶುಭಾ ಕಲ್ಯಾಣ್‌ ಮಾತನಾಡಿ, ತಾಲೂಕಿನಲ್ಲಿ ನಿರ್ಮಾಣಗೊಂಡಿರುವ 207ಕ್ಕೂ ಅಧಿಕ ಚೆಕ್‌ ಡ್ಯಾಂ ಪೈಕಿ 13 ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವುದು ತನಿಖೆಯಿಂದ ತಿಳಿದು ಬಂದಿದೆ. 13 ಹೊರತು ಪಡಿಸಿ ಉಳಿದ ಕಾಮಗಾರಿಯ ಬಿಲ್‌ ಹಣ ನೀಡುವಂತೆ ನರೇಗಾ ಆಯುಕ್ತರಿಗೆ ವರದಿ ನೀಡಲಾಗಿದೆ ಎಂದು ಸಚಿವರ ಗಮನಕ್ಕೆ ತಂದ ಅವರು, ಜಿಲ್ಲೆಯ 10 ತಾಲೂಕು ಪೈಕಿ ಏಳು ತಾಲೂಕು ಬರ ಪೀಡಿತ ತಾಲೂಕು ಎಂದು ಘೋಷಣೆ ಮಾಡಲಾಗಿದೆ. ಆ ತಾಲೂಕಿನ ಕುಡಿಯುವ ನೀರಿಗೆ ಒಂದು ಕೋಟಿ ರೂ. ಬಿಡುಗಡೆಯಾಗಿದ್ದು 50 ಲಕ್ಷ ರೂ. ಕುಡಿಯುವ ನೀರಿಗೆ ಖರ್ಚು ಮಾಡಲಾಗಿದೆ. ಬರವಲ್ಲದ ಮೂರು ತಾಲೂಕಿಗೂ 25 ಲಕ್ಷ ರೂ. ಖರ್ಚು ಮಾಡಲಾಗುತ್ತಿದೆ ಎಂದು ಸಿಇಒ ತಿಳಿಸಿದರು.

ಜಿಪಂ ಉಪ ಕಾರ್ಯದರ್ಶಿ ರಮೇಶ್‌, ತಹಶೀಲ್ದಾರ್‌ ವಿ.ಆರ್‌.ವಿಶ್ವನಾಥ್‌, ಡಿವೈಎಸ್‌ಪಿ ಜಗದೀಶ್‌, ತಾಪಂ ಅಧ್ಯಕ್ಷ ಹರೀಶ್‌ನಾಯ್ಕ, ಇಒ ಶಿವರಾಜಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಬಲರಾಮ್‌, ಸದಸ್ಯ ದಿನೇಶ್‌, ಗ್ರಾಪಂ ಅಧ್ಯಕ್ಷೆ ರಶೀದಾ, ಬಿಜೆಪಿ ಮುಖಂಡ ಡಿ.ಕೃಷ್ಣಕುಮಾರ್‌ ಇದ್ದರು.

ಲಾಕ್‌ಡೌನ್‌ ಉಲ್ಲಂಘನೆ
ಕೋವಿಡ್-19 ತಡೆಗೆ ಸಾಮಾಜಿಕ ಅಂತರವಿರಬೇಕೆಂದು ಸರ್ಕಾರವೇ ಕರೆ ನೀಡಿದೆ ಆದರೆ ಗುರುವಾರ ಕೊಪ್ಪದಲ್ಲಿ ನಡೆದ ಕೋವಿಡ್‌-19 ಗ್ರಾಮ ಮಟ್ಟದ ಟಾಸ್ಕ್ ಪೋರ್ಸ್‌ ಸಭೆಯಲ್ಲಿ ಸಚಿವ ಕೆ.ಎಸ್‌.ಈಶ್ವರಪ್ಪ ಅದನ್ನು ಉಲ್ಲಂಘಿಸಿದರು. ಸಚಿವರು ಸಭೆ ಮುಗಿಯುತ್ತಿದಂತೆ ಸಚಿವರ ಸುತ್ತಾ ಪಕ್ಷದ ಕಾರ್ಯಕರ್ತರು, ಅಧಿಕಾರಿಗಳು ಸೇರಿದಂತೆ 20ಕ್ಕೂ ಅಧಿಕ ಮಂದಿ ಸಚಿವರಿಗೆ ಸನ್ಮಾನಿಸಿ ಅವರೊಂದಿಗೆ ಇದ್ದು ಸೆಲ್ಪಿ ತೆಗೆದುಕೊಳ್ಳುತ್ತಾ ಸಾಮಾಜಿಕ ಅಂತರ ಪಾಲಿಸಲಿಲ್ಲ.

ಟಾಪ್ ನ್ಯೂಸ್

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Divorce: A.R. Rahman ends 29 years of marriage

Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

PKL 11: defeat for bengaluru bulls against Patna pirates

PKL 11: ಬುಲ್ಸ್‌ ಗೆ 10ನೇ ಸೋಲು

Women’s Asian Champions Trophy Hockey: India advances to final; opponent China

Women’s Asian Champions Trophy Hockey: ಫೈನಲ್‌ಗೆ ಲಗ್ಗೆ ಹಾಕಿದ ಭಾರತ; ಎದುರಾಳಿ ಚೀನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Gangolli

Kaup: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Court-1

Kasaragod: ಪಟಾಕಿ ದುರಂತ; ಜಾಮೀನು ರದ್ದಿಗೆ ತಡೆಯಾಜ್ಞೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.