ತುರುವೇಕೆರೆ ಅಭಿವೃದ್ಧಿಗೆ 230 ಕೋಟಿ ಮಂಜೂರು

Team Udayavani, Jan 29, 2020, 3:00 AM IST

turuvekere

ತುರುವೇಕೆರೆ: ಕ್ಷೇತ್ರದ ಅಭಿವೃದ್ಧಿಗೆ ಸಿಎಂ ಯಡಿಯೂರಪ್ಪ ಬದ್ಧರಾಗಿದ್ದು, ಈಗಾಗಲೂ ತಾಲೂಕಿನ ಅಭಿವೃದ್ಧಿಗೆ 230 ಕೋಟಿ ರೂ. ಅನುದಾನ ಮಂಜೂರುಗೊಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಸೂಕ್ತ ಚರಂಡಿ, ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗಲಿವೆ ಎಂದು ಶಾಸಕ ಮಸಾಲ ಜಯರಾಮ್‌ ಭರವಸೆ ನೀಡಿದರು.

ಬಹುವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಮುನಿಯೂರು-ಕಲ್ಲೂರು ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಮಸಾಲಾ ಜಯರಾಮ್‌, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ್‌ ಭೂಮಿ ಪೂಜೆ ನೆರವೇರಿಸಿ, ತಾಲೂಕಿನ ಜನರ ಬಹುವರ್ಷಗಳ ಕನಸಿನ ಕಾಮಗಾರಿಗೆ ಚಾಲನೆ ನೀಡಿದರು. ಈ ಮೂಲಕ ತಾಲೂಕಿನ ಮುನಿಯೂರು ಗ್ರಾಮದಲ್ಲಿ ಮುನಿಯೂರು ಗೇಟ್‌ನಿಂದ ಶ್ರೀರಾಂಪುರದವರೆಗೆ 2.50 ಕೋಟಿ ರೂ. ವೆಚ್ಚದ 5 ಕಿಲೋ ಮೀಟರ್‌ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ದೊರೆಯಿತು.

ಮೂಲಸೌಕರ್ಯ ಅಭಿವೃದ್ಧಿಗೆ ಸಂಕಲ್ಪ: ಸರ್ಕಾರ, ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ತಾಲೂಕಿನ ಎಲ್ಲ ಹಳ್ಳಿಗಳ ರಸ್ತೆ ಹಾಗೂ ಮೂಲ ಸೌಕರ್ಯಗಳ ಅಭಿವೃದ್ಧೀಗೆ ಸಂಕಲ್ಪ ಮಾಡಲಾಗಿದೆ. ಗ್ರಾಮಸ್ಥರಿಗೆ ನೀಡಿದ್ದ ಭರವಸೆಯಂತೆ ಮುನಿಯನೂರು ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಕಳೆದ ವರ್ಷವೇ ಚಾಲನೆ ನೀಡಬೇಕಾಗಿತ್ತು. ಆದರೆ ಗುತ್ತಿಗೆದಾರರು ನ್ಯಾಯಾಲಯದ ಮೊರೆ ಹೋಗಿದ್ದರಿಂದ ತಡವಾಯಿತು.

ಹಠಬಿಡದೆ ಲೋಕೋಪಯೋಗಿ ಸಚಿವರ ಬಳಿ ಹಲವು ಬಾರಿ ತೆರಳಿ, ಈ ಹಿಂದೆ ಇದ್ದ ಅನುದಾನಕ್ಕೆ ಹೆಚ್ಚುವರಿ ಅನುದಾನ ಪಡೆದು 23ರಂದೇ ಸರ್ಕಾರದ ಮಟ್ಟದಲ್ಲಿ ಕಾಮಗಾರಿಗೆ ಅನುಮೋದನೆ ಪಡೆದುಕೊಳ್ಳಲಾಗಿದೆ. ಈಗಲೇ ತಡವಾಗಿದ್ದು, ಮತ್ತೂ ವಿಳಂಬವಾಗಬಾರದು ಎಂಬ ಕಾರಣಕ್ಕೆ ಚಾಲನೆ ನೀಡಿದ್ದೇನೆ. ರಸ್ತೆ ಇಕ್ಕೆಲಗಳಲ್ಲಿರುವ ಮನೆಯವರು ಸ್ವಯಂಪ್ರೇರಣೆಯಿಂದ ಜಾಗ ತೆರವು ಮಾಡಿಕೊಡಬೇಕು. 7.5 ಮೀಟರ್‌ ವಿಸ್ತಾರವಾದ ರಸ್ತೆ ನಿರ್ಮಾಣವಾಗಲಿದೆ ಎಂದು ಹೇಳಿದರು.

ಮತ್ತಷ್ಟು ಅನುದಾನ ತರಲಿ: ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ್‌ ಮಾತನಾಡಿ, ಹಾಲಿ ಶಾಸಕ ಮಸಾಲೆ ಜಯರಾಮ್‌ ಅವರಿಗೆ ರಾಜ್ಯದಲ್ಲಿ ಅವರದೇ ಸರ್ಕಾರವಿದೆ. ಅವರಿಗೆ 3000 ಸಾವಿರ ಕೋಟಿಗೂ ಹೆಚ್ಚು ಅನುದಾನ ತರುವ ಅವಕಾಶವಿದೆ. ಹೀಗಾಗಿ ಇನ್ನು ಹೆಚ್ಚಿನ ಅನುದಾನ ತಂದು ತಾಲೂಕಿನ ಸಮಗ್ರ ಅಭಿವೃದ್ಧಿ ಮಾಡಲಿ ಎಂದು ಆಶಯ ವ್ಯಕ್ತಪಡಿಸಿದರು. ನಂತರ ಇದೇ ರಸ್ತೆ ಮಾರ್ಗವಾದ ಕೊಂಡಜ್ಜಿ ಕ್ರಾಸ್‌ನಿಂದ ಚಿಕ್ಕಗೊರಾಘಟ್ಟ ಮಾರ್ಗವಾಗಿ ವರಹಾಸಂದ್ರದವರೆಗೆ 63 ಲಕ್ಷ ವೆಚ್ಚದಲ್ಲಿ ಮರು ಡಾಂಬರೀಕರಣ ಕಾಮಗಾರಿಗೆ ಶಾಸಕ ಮಸಾಲೆ ಜಯರಾಮ್‌ ಚಾಲನೆ ನೀಡಿದರು.

ತುಮುಲ್‌ ಅಧ್ಯಕ್ಷ ಮಹಾಲಿಂಗಪ್ಪ, ಎಪಿಎಂಸಿ ಸದಸ್ಯ ವಿ.ಟಿ.ವೆಂಕಟರಾಮಯ್ಯ, ಎಇಇ ಗುರುಸಿದ್ದಪ್ಪ, ಸಹಾಯಕ ಎಂಜಿನಿಯರ್‌ ಕಣ್ಮಣಿ, ಮುಖಂಡರಾದ ದುಂಡಾರೇಣುಕಪ್ಪ, ಕೊಂಡಜ್ಜಿ ವಿಶ್ವನಾಥ್‌, ಮುದ್ದೇಗೌಡ, ಡಿ.ಆರ್‌.ಬಸವರಾಜ್‌, ದೊಂಬರನಹಳ್ಳಿ ಪ್ರಸಾದ್‌, ವಿ.ಬಿ.ಸುರೇಶ್‌, ಕಾಳಂಜೀಹಳ್ಳಿ ಸೋಮಣ್ಣ , ಪಪಂ ಸದಸ್ಯ ಅಂಜನ್‌ ಕುಮಾರ್‌, ನಾಗಲಾಪುರ ಮಂಜಣ್ಣ, ಮೈನ್ಸ್‌ರಾಜಣ್ಣ, ಕೀರ್ತಿ, ಪಂಚಾಯತ್‌ ಕಾವಲು ಸಮಿತಿಯ ವೆಂಕಟೇಶ್‌, ಗುತ್ತಿಗೆದಾರರುಗಳಾದ ರಾಮಲಿಂಗಯ್ಯ, ಕೊಡಗಿಹಳ್ಳಿ ಸಿದ್ದಲಿಂಗಣ್ಣ ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.