ಪ.ಜಾತಿ, ಪಂಗಡದವರ ಅಭಿವೃದ್ಧಿಗೆ 27,699 ಕೋಟಿ
Team Udayavani, Jun 6, 2020, 6:44 AM IST
ತುಮಕೂರು: 2020-21ನೇ ಸಾಲಿನಲ್ಲಿ ರಾಜ್ಯದಲ್ಲಿರುವ ಪ.ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರ ಅಭಿವೃದ್ಧಿಗಾಗಿ 27699 ಕೋಟಿ ರೂ.ಗಳನ್ನು ಮೀಸಲಿಟಿದ್ದು, ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಹೇಳಿದರು.
ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಡಾ.ಬಿ. ಆರ್.ಅಂಬೇಡ್ಕರ್ ಭವನ ಮತ್ತು ಸರ್ಕಾರಿ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳು ಮತ್ತು ವಸತಿ ಶಾಲೆಗಳ ನೂತನ ಕಟ್ಟಡಗಳ ಹಾಗೂ ಪದವಿ ಪೂರ್ವ ಕಾಲೇಜಿನ ಕಟ್ಟಡಗಳ ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಜಿಲ್ಲಾಮಟ್ಟದ ವನ ಮಹೋತ್ಸವದಲ್ಲಿ ಮಾತನಾಡಿದರು.
1600 ಮಕ್ಕಳಿಗೆ ಅನುಕೂಲ: ಪಾವಗಡದಲ್ಲಿ ಸುಮಾರು 88 ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿನಿಲಯಗಳು, ಪಿಯು ಕಾಲೇಜು ಹಾಗೂ ಸೆಕೆಂಡರಿ ಸ್ಕೂಲ್ ಕಟ್ಟಡಗಳ ಉದ್ಘಾಟನೆಯಾಗಿದೆ. ಇದರಿಂದ ಸುಮಾರು ಎಸ್‌ಸಿ-ಎಸ್‌ಟಿ ಜನಾಂಗದ 1600 ಮಕ್ಕಳಿಗೆ ಓದಲು ವ್ಯವಸ್ಥೆಯಾಗುತ್ತದೆ ಎಂದರು.
6.11 ಲಕ್ಷ ಫಲಾನುಭವಿಗಳಿಗೆ ಸೌಲಭ್ಯ: ಪ್ರೌಢ ಶಿಕ್ಷಣ ಇಲಾಖೆಯಿಂದ 939 ಕೋಟಿ ವೆಚ್ಚದಲ್ಲಿ ಪ.ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಸಮವಸOಉ, ಸೈಕಲ್ ಹಾಗೂ ಮಧ್ಯಾಹ್ನದ ಬಿಸಿಯೂಟ ಇತ್ಯಾದಿ ಸೇರಿದಂತೆ ಒಟ್ಟು 23 ಲಕ್ಷ ಮಕ್ಕಳಿಗೆ 2019-20ನೇ ಸಾಲಿನಲ್ಲಿ ಸೌಲಭ್ಯ ಒದಗಿಸಿಕೊಟ್ಟಿದ್ದೇವೆ. ಪಂಚಾಯತ್ ರಾಜ್ ಇಲಾಖೆಯಲ್ಲಿ 2231 ಕೋಟಿ ರೂ. ವೆಚ್ಚದಲ್ಲಿ ಸ್ವತ್ಛ ಭಾರತದ ಅಭಿಯಾನ ಯೋಜನೆ, ಶುದಟಛಿ ಕುಡಿಯುವ ನೀರು ಹಾಗೂ ನರೇಗಾ ಕಾರ್ಯಕ್ರಮ ಒಟ್ಟು 6.11 ಲಕ್ಷ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲಾಗಿ ದೆ ಎಂದು ತಿಳಿಸಿದರು.
47,711 ಫಲಾನುಭವಿಗೆ ಸೌಲಭ್ಯ: ವಸತಿ ಯೋಜನೆಯಡಿ 1219 ಕೋಟಿ ರೂ.ಗಳಲ್ಲಿ 29,618 ಮನೆಗಳನ್ನು ಪ.ಜಾತಿಯವರಿಗೆ ಹಾಗೂ 13,093 ಮನೆಗಳನ್ನು ಪರಿಶಿಷ್ಟ ಪಂಗಡದವರಿಗೆ ಒಟ್ಟು 47,711 ಫಲಾನುಭವಿಗೆ ಈ ಸೌಲಭ್ಯ ಒದಗಿಸಲಾಗಿದೆ. ಲೋಕೊ ಪಯೋಗಿ, ಜಲಸಂಪನ್ಮೂಲ ಇಲಾಖೆ, ಸಣ್ಣ ನೀರಾವರಿ ಇಲಾಖೆ, ನಗರಾಭಿವೃದ್ಧಿ ಇಲಾಖೆ ವತಿಯಿಂದ ಮೂಲಭೂತ ಸೌಕರ್ಯಗಳಿಗಾಗಿ 4,669 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದರು.
ಟ್ರೈನಿ ಎಂಜಿನಿಯರ್‌ಗಳ ನೇಮಕ: ಲೋಕೋಪಯೋಗಿ ಇಲಾಖೆಯಲ್ಲಿ ಸಿವಿಲ್ ಎಂಜಿನಿಯರ್, ಡಿಪ್ಲೊಮಾ ಓದಿದ 1000 ಟ್ರೆçನಿ ಎಂಜಿನಿಯರ್‌ಗಳನ್ನು ನೇಮಿಸಲಾಗುವುದು ಎಂದರು. ಜಿಲ್ಲಾ ಉಸುವಾರಿ ಸಚಿವ ಮಾಧುಸ್ವಾಮಿ, ಸಂಸದ ನಾರಾಯಣ ಸ್ವಾಮಿ, ಶಾಸರಾದ ಡಾ. ನಾರಾಯಣಸ್ವಾಮಿ, ವೆಂಕಟರಮಣಪ್ಪ, ಜಿಪಂ ಉಪಾಧ್ಯಕ್ಷೆ ಶಾರದಾ, ಡೀಸಿ ಡಾ. ಕೆ. ರಾಕೇಶ್ ಕುಮಾರ್, ಜಿಪಂ ಸಿಇಒ ಶುಭಾ ಕಲ್ಯಾಣ್ ಇದ್ದರು.
ಕೋವಿಡ್ 19ದಿಂದ ಲಾಕ್‌ಡೌನ್ ಆದ ಮೇಲೆ ಪ್ರಗತಿ ಕೆಲಸಗಳು ಪ್ರಾರಂಭವಾಗಿಲ್ಲ. ಇನ್ನು ಮುಂದೆ ನಿಧಾನವಾಗಿ ಪ್ರಾರಂಭವಾಗುತ್ತವೆ. ಒಟ್ಟು 2019-20ನೇ ಸಾಲಿನಲ್ಲಿ 27,559 ಕೋಟಿ ಅನುದಾನವನ್ನು ಎಸ್‌ಸಿ-ಎಸ್‌ಟಿ ಜನಾಂಗಕ್ಕೆ ವಿಶೇಷ ಹಂಚಿಕೆ ಮಾಡಲಾಗಿತ್ತು. 25,388 ಕೋಟಿಗಳಷ್ಟು ಖರ್ಚು ಮಾಡಿ ಶೇ.92ರಷ್ಟು ಪ್ರಗತಿ ಸಾಧಿಸಿದ್ದೇವೆ.
-ಗೋವಿಂದ ಎಂ.ಕಾರಜೋಳ, ಡಿಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.