ಜಿಲ್ಲೆಯಲ್ಲಿ ರಂಗೇರಿದ 2ನೇ ಹಂತದ ಹಳ್ಳಿಫೈಟ್‌

Team Udayavani, Dec 24, 2020, 2:53 PM IST

ಜಿಲ್ಲೆಯಲ್ಲಿ ರಂಗೇರಿದ 2ನೇ ಹಂತದ ಹಳ್ಳಿಫೈಟ್‌

ತುಮಕೂರು: ಕಳೆದ ಹದಿನೈದು ದಿನಗಳಿಂದ ಗ್ರಾಪಂ ಗದ್ದುಗೆ ಹಿಡಿಯಲು ಹಳ್ಳಿ ಹಳ್ಳಿಗಳ ವಾರ್ಡ್‌ಗಳಲ್ಲಿ ಧೂಳೆಬ್ಬಿಸಿ ಪ್ರಚಾರದ ಯುದ್ಧ ಮಾಡಿ ಗೆಲುವಿಗಾಗಿಇನ್ನಿಲ್ಲದ ಶ್ರಮ ತೊಟ್ಟಿದ್ದ ಅಭ್ಯರ್ಥಿಗಳ ನಡುವಿನ ರಣಾಂಗಣದಲ್ಲಿ ಗೆದ್ದಿರುವವರು ಯಾರು ಎನ್ನುವುದು ಮತ ಪೆಟ್ಟಿಗೆಯಲ್ಲಿ ಭದ್ರವಾಗಿದೆ.

ಆ ಮತ ಪೆಟ್ಟಿಗೆಗೆ ಜಿಲ್ಲಾಡಳಿತ ಎಲ್ಲಾ ಕಡೆ ಭಾರೀ ಭದ್ರತೆ ಒದಗಿಸಿದ್ದರೆ. ಡಿ.27 ರಂದು ನಡೆಯುವ ಎರಡನೇ  ಹಂತದ ಹಳ್ಳಿ ಯುದ್ಧಕ್ಕೆರಣಾಂಗಣ ಸಿದ್ಧವಾಗಿದ್ದು ಗೆಲುವಿಗಾಗಿಅಭ್ಯರ್ಥಿಗಳು ಮತದಾರರ ಓಲೈಕೆಯುದ್ಧ ಆರಂಭಿಸಿದ್ದಾರೆ. ಈಗ ನಡೆದಿರುವ ಮೊದಲ ಹಂತದ ಗ್ರಾಪಂ ಚುನಾವಣೆಯ ಮತ ಪೆಟ್ಟಿಗೆಯನ್ನುಆಯಾ ತಾಲೂಕು ಕೇಂದ್ರದ ಭದ್ರತಾ ಕೊಠಡಿಯಲ್ಲಿ ಇಡಲಾಗಿದೆ.

ತುಮಕೂರು ತಾಲೂಕಿನ ಮತಪೆಟ್ಟಿಗೆಗಳನ್ನು ನಗರದ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿರುವ ಸ್ಟ್ರಾಂಗ್‌ ಕೊಠಡಿಯಲ್ಲಿಟ್ಟು ಬಿಗಿ ಭದ್ರತೆ ಒದಗಿಸಲಾಗಿದೆ. ಜಿಲ್ಲೆಯ ತುಮಕೂರು, ಕುಣಿಗಲ್‌, ಗುಬ್ಬಿ, ಕೊರಟಗೆರೆ ಹಾಗೂ ಪಾವಗಡ ತಾಲೂಕಿನಲ್ಲಿ ಮೊದಲ ಹಂತದ 168 ಗ್ರಾಪಂಗಳ 2594 ಸದಸ್ಯ ಸ್ಥಾನಗಳಿಗೆಸ್ಪರ್ಧಿಸಿದ್ದ 7142 ಅಭ್ಯರ್ಥಿಗಳ ಹಣೆ ಬರಹ ವನ್ನುಮತದಾರ ಪ್ರಭು ಅಭ್ಯರ್ಥಿಯ ಗುರುತಿನ ಮುಂದೆ ಮುದ್ರೆ ಹೊತ್ತುವ ಮೂಲಕ ಬರೆದು ಬಿಟ್ಟಿದ್ದಾನೆ.

ರಂಗೇರುತ್ತಿದೆ ಎರಡನೇ ಹಂತದ ಕದನ: ಜಿಲ್ಲೆಯ ಐದು ತಾಲೂಕುಗಳಲ್ಲಿ ನಡೆದ ಮೊದಲ ಹಂತದ ಗ್ರಾಪಂ ಚುನಾವಣೆ ಶಾಂತಿಯುತವಾಗಿ ನಡದಿದ್ದು ಡಿ.27 ರಂದುಜಿಲ್ಲೆಯ ಐದು ತಾಲೂಕುಗಳಲ್ಲಿ ನಡೆಯಲಿರುವ ಹಳ್ಳಿ ಕದನ ತೀವ್ರವಾಗಿ ರಂಗೇರುತ್ತಿದೆ. ಜಿಲ್ಲೆಯ ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಶಿರಾ, ಮಧುಗಿರಿ ತಾಲೂಕಿನ 161 ಗ್ರಾಪಂಗಳ 2543 ಸ್ಥಾನಗಳಿಗೆ ನಡೆಯುವ ಚುನಾವಚಣೆಯಲ್ಲಿ 8781 ಅಭ್ಯರ್ಥಿಗಳು ಕಣದಲ್ಲಿ ಇದ್ದು ಅಭ್ಯರ್ಥಿಗಳು ಮತದಾರರ ಓಲೈಕೆಯಲ್ಲಿ ತಲೀನ ರಾಗಿದ್ದು ರಾಜಕೀಯ ರಂಗು ಪಡೆದಿದೆ.

ಮೊದಲ ಹಂತದಲ್ಲಿ ನಡೆದ ಗ್ರಾಪಂ ಚುನಾವಣೆಯಲ್ಲಿ ಎಲ್ಲಾಕಡೆ ಬಿಜೆಪಿ ಬೆಂಬಲಿಗರಿಗೆ ಉತ್ತಮ ವಾತಾವರಣ ಕಂಡು ಬಂದಿದೆ. ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಪಕ್ಷದ ಬೆಂಬಲಿಗರು ಗೆಲ್ಲುವುದು ಖಚಿತ, ಎರಡನೇ ಹಂತದ ಚುನಾವಣೆಯಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಲು ನಮ್ಮಕಾರ್ಯಕರ್ತರು ಮುಖಂಡರು ಶ್ರಮಿಸುತ್ತಿದ್ದಾರೆ.ಬಿ.ಸುರೇಶ್‌ ಗೌಡ, ಜಿಲ್ಲಾ ಬಿಜೆಪಿ ಅಧ್ಯಕ

ಮೊದಲ ಹಂತದ ಚುನಾವಣೆಯಲ್ಲಿ ನಮ್ಮ ಜೆಡಿಎಸ್‌ ಪಕ್ಷದ ಬೆಂಬಲಿತಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುತ್ತಾರೆ ಎನ್ನುವ ವಿಶ್ವಾಸವಿದೆ. ಈಗ ಡಿ.27 ರಂದು ನಡೆಯುವ ಚುನಾವಣೆ ಪ್ರಚಾರವನ್ನು ಕಾರ್ಯಕರ್ತರು, ಮುಖಂಡರು ಮಾಡುತ್ತಿದ್ದು ಅದರಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಪಕ್ಷದಕಾರ್ಯಕರ್ತರು ಗೆಲ್ಲುತ್ತಾರೆ. ಆರ್‌.ಸಿ.ಆಂಜನಪ್ಪ, ಜಿಲ್ಲಾಧ್ಯಕ್ಷ, ಜೆಡಿಎಸ್‌

ಜಿಲ್ಲೆಯಲ್ಲಿ ಮೊದಲಿನಿಂದಲೂ ಗ್ರಾಪಂನಲ್ಲಿ ಕಾಂಗ್ರೆಸ್‌ ಬೆಂಬಲಿಗರು ಹೆಚ್ಚು ಸಂಖ್ಯೆಯಲ್ಲಿ ಗೆಲ್ಲುತ್ತಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ಗೆಲ್ಲಿಸಲು ಎಲ್ಲರೂಒಟ್ಟಾಗಿ ಕೆಲಸ ಮಾಡಿದ್ದೇವೆ. ತುಮಕೂರು, ಚಿಕ್ಕನಾಯಕನಹಳ್ಳಿ ಸೇರಿದಂತೆ ಎಲ್ಲಾಕಡೆ ಸಭೆ ನಡೆ‌ಸಿ ಕಾರ್ಯಕರ್ತರ ಗೆಲುವಿಗೆ ಸ್ಫೂರ್ತಿ ನೀಡಿದ್ದೇವೆ. ಎಸ್‌.ಪಿ.ಮುದ್ದಹನುಮೇಗೌಡ,ಮಾಜಿ ಸಂಸದ

ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಪಂ ಚುನಾವಣೆ ಶಾಂತಿಯುತವಾಗಿ ನಡೆದಿದೆ. ತುಮಕೂರು,ಕುಣಿಗಲ್‌, ಗುಬ್ಬಿ,ಕೊರಟಗೆರೆ ಹಾಗೂ ಪಾವಗಡ ತಾಲೂಕಿನಲ್ಲಿ ಮೊದಲ ಹಂತದ 168 ಗ್ರಾಪಂಗಳ ಚುನಾವಣೆಯಲ್ಲಿ ಶೇ.88.50ರಷ್ಟು ಮತದಾನವಾಗಿದೆ. ಎಲ್ಲಾ ಮತಪೆಟ್ಟಿಗೆಗಳನ್ನು ಆಯಾ ತಾಲೂಕಿನ ಭದ್ರತಾಕೊಠಡಿಯಲ್ಲಿ ಇಟ್ಟು ಭದ್ರತೆ ಒದಗಿಸಲಾಗಿದೆ. ಇನ್ನು ಡಿ.27 ರಂದು ನಡೆಯುವ ಎರಡನೇ ಹಂತದ ಚುನಾವಣೆಗೆ ಸಿದ್ಧತೆ ಮಾಡಿ ಕೊಳ್ಳಲಾಗುತ್ತಿದೆ. ಡಾ.ಕೆ.ರಾಕೇಶ್‌ಕುಮಾರ್‌, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ.

ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.