ಸಾಮಾಜಿಕ ನ್ಯಾಯಕ್ಕೆ ಐಕ್ಯ ಹೋರಾಟ: ಸೈಯದ್‌ ಮುಜೀಬ್‌


Team Udayavani, Oct 4, 2020, 3:27 PM IST

ಸಾಮಾಜಿಕ ನ್ಯಾಯಕ್ಕೆ ಐಕ್ಯ ಹೋರಾಟ: ಸೈಯದ್‌ ಮುಜೀಬ್‌

ತುಮಕೂರು: ಜಗತ್ತಿನಾದ್ಯಂತ ಬೆಳೆಯುತ್ತಿರುವ ಅಸಮಾನತೆ, ಶೋಷಣೆ, ಬಡತನ, ಫ್ಯಾಸಿಸಂ, ಯುದ್ಧಗಳಿಂದಾಗಿ ಸಮಾಜದಲ್ಲಿ ತೀವ್ರತರ ಅಸಮಾನತೆ  ಹೆಚ್ಚುತ್ತಿದ್ದು ಇದಕ್ಕೆ ಪ್ರತಿಯಾಗಿ ಸಾಮಾಜಿಕ ನ್ಯಾಯಕ್ಕಾಗಿ ದುಡಿಯುವವರು, ಜನರು ಐಕ್ಯತೆಯಿಂದ ಚಳವಳಿಯಲ್ಲಿ ಮುಂದೆ ಸಾಗಬೇಕಾಗಿದೆ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್‌ ಮುಜೀಬ್‌ ತಿಳಿಸಿದರು.

ಡಬ್ಲ್ಯೂಎಫ್ಟಿಯುನ 75ನೇ ವರ್ಷಾಚರಣೆ ಭಾಗವಾಗಿ ಶನಿವಾರ ನಗರದ ಕೈಗಾರಿಕಾ ಪ್ರದೇಶಗಳಲ್ಲಿ ಆಯೋಜಿಸಿದ್ದ ಕಾರ್ಮಿಕರ ಪ್ರದರ್ಶನಗಳನ್ನು ಉದ್ದೇಶಿಸಿ ಮಾತನಾಡಿದರು. ಸಾಮ್ರಾಜ್ಯಶಾಹಿ ಶಕ್ತಿಗಳು ಇಂದು ತಾವು ಹರಿಯಬಿಟ್ಟಿರುವ ಬಹುರಾಷ್ಟ್ರೀಯ ಕಂಪನಿಗಳ ಮೂಲಕ ಮಾರುಕಟ್ಟೆಯಲ್ಲಿ ಏಕಸ್ವಾಮ್ಯತೆ ಪಡೆಯುವ ಮೂಲಕ ಎಲ್ಲವೂ ತಮ್ಮ ಅಧೀನಕ್ಕೆ ತೆಗೆದುಕೊಳ್ಳುವ ಪ್ರಯತ್ನದ ಬಗ್ಗೆ ಎಚ್ಚರಿಕೆಯಿಂದ ಇದ್ದು ಹೋರಾಟಕ್ಕೆ ಮುಂದಾಗಬೇಕು ಎಂದರು.

ಶೋಷಣೆ:ತುಮಕೂರು ನಗರದ ಸತ್ಯಮಂಗಲ ಕೈಗಾರಿಕಾ ಪ್ರದೇಶದ ಜೇಮ್‌ ಪ್ರಾಪರ್ಟಿ ಮುಂಭಾಗದಲ್ಲಿ ನಡೆದ ಸಭೆಯಲ್ಲಿ ಫಿಟ್‌ವೆಲ್‌ ಟೂಲ್ಸ್‌ ಅಂಡ್‌ ಫೋರ್ಜಿಂಗ್‌ ಕಾರ್ಮಿಕರ ಸಂಘದ ಸುಜಿತ್‌ ನಾಯಕ್‌ ಮಾತನಾಡಿ, ಕೋವಿಡ್‌ ನೆಪದಲ್ಲಿ ಬಂಡವಾಳಗಾರರು ಕಾರ್ಮಿಕರ ಶೋಷಣೆಯಲ್ಲಿ ತೊಡಗಿದ್ದಾರೆಂದರು. ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದ ಕರನ್‌ ಲಿಬರರ್ಸ್‌ ಕಾರ್ಖಾನೆ ಮುಂಭಾಗದಲ್ಲಿ ನಡೆದ ಪ್ರದರ್ಶನದಲ್ಲಿ ಮಾತನಾಡಿದ ಸಿಐಟಿಯು ತಾಲೂಕು ಕಾರ್ಯದರ್ಶಿ ರಂಗಧಾಮಯ್ಯ, ಕೇಂದ್ರ ಸರ್ಕಾರ ತರಾತುರಿಯಲ್ಲಿ ರೈತ-ಕಾರ್ಮಿಕ ವಿರೋಧಿ ಶಾಸನಗಳನ್ನು ಜಾರಿಗೆ ತರುತ್ತಿರುವುದು ಕಾರ್ಪೊàರೆಟ್‌ ಹಿತವಲ್ಲವೇ ಎಂದು ಪ್ರಶ್ನಿಸಿದರು.

ಎಂಎಚ್‌ಐಎನ್‌ ಕಾರ್ಖಾನೆ ಮುಂಭಾಗ ನಡೆದ ಪ್ರದರ್ಶನವನ್ನು ಉದ್ದೇಶಿಸಿ ಸಿಐಟಿಯು ಮುಖಂಡ ರಘುನಾಥ ಮಾತನಾಡಿದರು. ವಸಂತನರಸಾಪುರ ಕೈಗಾರಿಕಾ ಪ್ರದೇಶದ ಟಿಮೆಕ್‌ ಇಂಡಿಯಾ ಪ್ರವೇಟ್‌ಲಿಮಿಟೆಡ್‌ ಕಾರ್ಮಿಕರ ಸಂಘದ ವತಿಯಿಂದ ನಡೆದ ಪ್ರದರ್ಶನದಲ್ಲಿ ಸಂಘದ ಅಧ್ಯಕ್ಷ ದೀಪಕ್‌ ಜೆ., ಪ್ರಧಾನ ಕಾರ್ಯದರ್ಶಿ ದೀಪಕ್‌ ಪೂಜಾರಿ, ಬಿ.ಎಸ್‌. ಕಾಂತರಾಜು ಮಾತನಾಡಿದರು.

ಡಬ್ಲ್ಯೂಎಫ್ಟಿಯು 75ನೇ ವರ್ಷಾಚರಣೆ ಭಾಗವಾಗಿ ಜಿಲ್ಲೆಯ ಕುಣಿಗಲ್‌ ಕುದುರೆ ಫಾರಂ ಮುಂಭಾಗದಲ್ಲಿ ಪ್ರತಿಭಟನಾ ಪ್ರದರ್ಶನ ಏರ್ಪಡಿಸಲಾಗಿತ್ತು. ಸಿಐಟಿಯು ತಾಲೂಕು ಕಾರ್ಯದರ್ಶಿ ಅಬ್ದುಲ್‌ ಮುನಾಫ್,ಅಮೃತೂರುಸ್ಕೀಂನೌಕರರಾದಅಂಗನವಾಡಿ, ಆಶಾ ಬಿಸಿಯೂಟ ನೌಕರರು ಪ್ರದರ್ಶನ ಏರ್ಪಡಿಸಿದ್ದರು.  ಭಾರತದಲ್ಲಿ ಸ್ಕೀಂಗಳಲ್ಲಿ ದುಡಿಯುತ್ತಿರುವ ಲಕ್ಷಗಟ್ಟಲೆಜನರಿಗೆ ಗೌರವ, ಘನತೆಯಿಂದ ಬದುಕು ನಡೆಸಲುಕನಿಷ್ಠ  ಕೂಲಿ ಹಾಗೂ ಕಾರ್ಮಿಕ ಕಾನೂನು ಜಾರಿ ಮಾಡುವಂತೆ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಲ್ಜಾರ್‌ ಬಾನು ಹೇಳಿದರು.

ಟಾಪ್ ನ್ಯೂಸ್

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.