ಸುಸಜ್ಜಿತ ಶೌಚಾಲಯಕ್ಕೆ 98ಲಕ್ಷ ರೂ. ಬಿಡುಗಡೆ
9 ಶಾಲೆಗಳ ಪೈಕಿ ಪ್ರತಿ ಶಾಲೆಗೆ 2 ಲಕ್ಷ ರೂ. | ಸರ್ಕಾರದ ಜತೆಗೆ ರೋಟರಿ ಸಂಸ್ಥೆ 2 ಲಕ್ಷ ರೂ. ನೀಡಲು ನಿರ್ಧಾರ
Team Udayavani, Apr 30, 2019, 4:02 PM IST
ತುಮಕೂರು: ಶೈಕ್ಷಣಿಕ ಜಿಲ್ಲೆಯ 22 ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ 27 ಸೇರಿದಂತೆ ಒಟ್ಟು 49 ಸರ್ಕಾರಿ ಶಾಲೆಗಳಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಾಣ ಮಾಡಲಾಗುವುದು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದರು.
ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ನಡೆದ ಸುಸಜ್ಜಿತ ಶೌಚಾಲಯ ನಿರ್ಮಾಣ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಗರ ಪ್ರದೇಶದ ಶಾಲೆಗಳಲ್ಲಿದ್ದಂತೆ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿಯೂ ಸುವ್ಯವಸ್ಥಿತ ಮಾದರಿ ಶೌಚಾಲಯ ನಿರ್ಮಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸ್ವಚ್ಛ ಭಾರತ್ ಮಿಷನ್‌ನಡಿ 49 ಶಾಲೆಗಳ ಪೈಕಿ ಪ್ರತಿ ಶಾಲೆಗೆ 2 ಲಕ್ಷ ರೂ.ಗಳಂತೆ ಒಟ್ಟು 98ಲಕ್ಷ ರೂ.ಗಳನ್ನು ಈಗಾಗಲೇ ಆಯಾ ಶಾಲೆಯ ಎಸ್‌ಡಿಎಂಸಿ ಸಮಿತಿ ಖಾತೆಗೆ ಬಿಡುಗಡೆ ಮಾಡಿದೆ ಎಂದರು.
ಶೌಚಾಲಯ ನಿರ್ಮಾಣಕ್ಕೆ ಸಂಬಂಧಿಸಿದ ನೀಲನಕ್ಷೆ ಹಾಗೂ ಅಂದಾಜು ಪಟ್ಟಿ ತಯಾರಿಸಿ ಇಲಾಖೆಯ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲಾಗುವುದು. ಆಯಾ ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರ ಸಭೆ ಕರೆದು ಕಾಮಗಾರಿಗಳನ್ನು ತಕ್ಷಣವೇ ಪ್ರಾರಂಭಿಸಲು ಸೂಚಿಸಬೇಕು. ಶೌಚಾಲಯ ನಿರ್ಮಾಣ ಕಾಮಗಾರಿಗಳನ್ನು ಇಲಾಖೆಯ ಮಾರ್ಗಸೂಚಿಯನ್ವಯ ಕೈಗೊಳ್ಳಬೇಕು ಎಂದು ಸೂಚಿಸಿದರು.
ರೋಟರಿ ಸಹಕಾರದಲ್ಲಿ ಸುಸಜ್ಜಿತ ಶೌಚಾಲಯ: ಶೌಚಾಲಯ ನಿರ್ಮಾಣಕ್ಕಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಪ್ರತಿ ಶಾಲೆಗೆ ಬಿಡುಗಡೆ ಮಾಡಿರುವ ತಲಾ 2ಲಕ್ಷ ರೂ.ಗಳ ಜೊತೆಗೆ ರೋಟರಿ ಸಂಸ್ಥೆಯು 2 ಲಕ್ಷ ರೂ. ನೀಡಲು ಮುಂದೆ ಬಂದಿದೆ. ಆಯಾ ಶಾಲೆಯ ಎಸ್‌ಡಿಎಂಸಿ ಸಮಿತಿಯು ಒಪ್ಪಿದಲ್ಲಿ ರೋಟರಿ ಸಂಸ್ಥೆಯ 2ಲಕ್ಷ ರೂ.ಗಳನ್ನು ಬಳಸಿಕೊಂಡು ಒಟ್ಟು 4 ಲಕ್ಷ ರೂ.ಗಳ ವೆಚ್ಚದಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಾಣ ಮಾಡಲಾಗುವುದು. ಈ ಸುಸಜ್ಜಿತ ಶೌಚಾಲಯಗಳನ್ನು ವಿದೇಶಿ ಮಾದರಿಯಲ್ಲಿ ಟೈಲ್ಸ್ ಬಳಸಿ ವಿಶಾಲ ಅಳತೆಯಲ್ಲಿ ನಿರ್ಮಿಸಲಾಗುವುದಲ್ಲದೇ, ವಿದ್ಯಾರ್ಥಿಗಳು ಕೈತೊಳೆಯಲು ವಿಶೇಷವಾಗಿ ಪ್ರತ್ಯೇಕ ವಾಶ್-ಬೇಸಿನ್, ಗಾಳಿ-ಬೆಳಕಿನ ವ್ಯವಸ್ಥೆ ಕಲ್ಪಿಸಲಾಗುವುದು. ಶೌಚಾಲಯಗಳು ಸ್ವಚ್ಛತೆಯಿಂದ ಕೂಡಿದ್ದರೆ ಮಾತ್ರ ಮಕ್ಕಳಿಗೆ ಬಳಸಲು ಮನಸ್ಸಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ಶಾಲಾ ಶೌಚಾಲಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕೆಂದು ಶಾಲಾ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಿದರು.
ಸ್ವಚ್ಛತೆ ಪರಿಶೀಲಿಸಿ: ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಕೃಷ್ಣಪ್ಪ ಮಾತನಾಡಿ, ಚುನಾವಣೆ ಘೋಷಣೆಯಾಗಿದ್ದರಿಂದ ಶೌಚಾಲಯ ನಿರ್ಮಾಣ ಅನುಷ್ಠಾನ ಶೀಘ್ರ ಕೈಗೊಳ್ಳಲಾಗಲಿಲ್ಲ. ಜಿಲ್ಲೆಯ ಕೆಲವು ಶಾಲೆಗಳಲ್ಲಿ ನೀರಿನ ಅವ್ಯವಸ್ಥೆ, ಸಮರ್ಪಕ ಶೌಚಾಲಯ ನಿರ್ವಹಣೆ ಇಲ್ಲದಿರುವುದರಿಂದ ಶೌಚಾಲಯಗಳ ಸೂಕ್ತ ಬಳಕೆಯಾಗುತ್ತಿಲ್ಲ. ಶಾಲಾ ಮುಖ್ಯೋಪಾಧ್ಯಾಯರು ಪ್ರತಿದಿನ ಶೌಚಾಲಯ ಸ್ವಚ್ಛತೆ ಪರಿಶೀಲಿಸುವ ಅಭ್ಯಾಸ ರೂಢಿಸಿಕೊಳ್ಳಬೇಕು. ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಎಷ್ಟು ಮುಖ್ಯವೋ, ಆರೋಗ್ಯವೂ ಅಷ್ಟೇ ಮುಖ್ಯ. ಶಿಕ್ಷಕರು ಮಕ್ಕಳಿಗೆ ಶೌಚಾಲಯಗಳನ್ನು ಬಳಸುವ ಮುನ್ನ ಹಾಗೂ ಬಳಸಿದ ನಂತರ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕು. ಪ್ರತಿದಿನ ಶೌಚಾಲಯ ಸ್ವಚ್ಛಗೊಳಿಸುವುದು ಪ್ರಮುಖ ಅಂಶ ಎಂದು ತಿಳಿಯದಿದ್ದಲ್ಲಿ ಎಷ್ಟೇ ಮಾದರಿ ಶೌಚಾಲಯಗಳನ್ನು ನಿರ್ಮಾಣ ಮಾಡಿದರೂ, ಸಾರ್ಥಕವಾಗುವುದಿಲ್ಲ ಎಂದು ತಿಳಿಸಿದರು.
ನಿರ್ವಹಣಾ ಸಿಬ್ಬಂದಿ ನೇಮಿಸಿ: ನಗರದ ಅರಳೀಮರದಪಾಳ್ಯ ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸಿದ್ದರಾಮಯ್ಯ ಮಾತನಾಡಿ, ಶಾಲೆಗಳಲ್ಲಿರುವ ಶೌಚಾಲಯಗಳನ್ನು ಸಮರ್ಪಕ ರೀತಿಯಲ್ಲಿ ನಿರ್ವಹಣೆ ಮಾಡಲು ಕ್ಲಸ್ಟರ್ ಮಟ್ಟದಲ್ಲಿ ಸಂಚಾರಿ ಶೌಚಾಲಯ ನಿರ್ವಹಣಾ ಸಿಬ್ಬಂದಿಯನ್ನು ನೇಮಕ ಮಾಡಬೇಕೆಂದು ಸಲಹೆ ನೀಡಿದರು.
ಸಭೆಯಲ್ಲಿ ಡಿಡಿಪಿಐಗಳಾದ ಎಂ.ಆರ್.ಕಾಮಾಕ್ಷಿ, ರವಿಶಂಕರ್ ರೆಡ್ಡಿ, ವಿವಿಧ ಶಾಲೆಗಳ ಎಸ್‌ಡಿಎಂಸಿ ಅಧ್ಯಕ್ಷರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು, ಮತ್ತಿತರರು ಹಾಜರಿದ್ದರು.
ಶೌಚಾಲಯ ನಿರ್ಮಾಣ ಮಂಜೂರಾದ ಶಾಲೆಗಳು:
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ
Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.