![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Aug 25, 2024, 12:20 PM IST
ತುಮಕೂರು ಗ್ರಾಮಾಂತರ: ಹುಡುಗಿ ವಿಚಾರವಾಗಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.
ವಿದ್ಯಾರ್ಥಿಯೊಬ್ಬನಿಗೆ ಮನಬಂದಂತೆ ಹಲ್ಲೆ ನಡೆಸಿ ಪುಂಡಾಟ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತುಮಕೂರು ನಗರದ ಖಾಸಗಿ ಪಿಯು ಕಾಲೇಜು ಬಳಿ ಈ ಘಟನೆ ನಡೆದಿದ್ದು, ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಲಾಗಿದೆ. ಬೆಂಗಳೂರಿನ ಕಾಲೇಜೊಂದರಲ್ಲಿ ಪದವಿ ಓದುತ್ತಿರುವ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ.
ಸ್ನೇಹಿತನ ಜತೆ ಸೇರಿ ವಿದ್ಯಾರ್ಥಿ ಮೇಲೆ ಹಲ್ಲೆ: ಹಲ್ಲೆ ಮಾಡಿದ ಯುವಕರಲ್ಲಿ ಒಬ್ಟಾತ ತುಮಕೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆ ವಿದ್ಯಾರ್ಥಿನಿಯ ಜತೆ ಹಲ್ಲೆಗೊಳಗಾದ ವಿದ್ಯಾರ್ಥಿ ಮಾತನಾಡುತ್ತಾನೆ ಎಂಬ ವಿಚಾರಕ್ಕೆ ಗಲಾಟೆ ನಡೆದಿದೆ.
“ನಮ್ಮ ಹುಡುಗಿಯ ಜತೆ ಏಕೆ ಮಾತನಾಡುತ್ತೀಯಾ’ ಅಂತ ಫೋನ್ ನಲ್ಲಿ ಬೆದರಿಕೆಯನ್ನೂ ಹಾಕಿದ್ದಾರೆ ಎನ್ನಲಾಗಿದೆ. ಇಷ್ಟಲ್ಲದೆ ಹುಡುಗಿಯನ್ನು ಪ್ರೀತಿಸುತ್ತಿದ್ದ ಯುವಕ ಕಾಲೇಜು ಬಳಿ ಬಂದು ತನ್ನ ಸ್ನೇಹಿತನ ಜತೆ ಸೇರಿ ಹಲ್ಲೆ ಮಾಡಿದ್ದಾರೆ.
ಜಗಳ ಬಿಡಿಸಿದ ಕಾಲೇಜು ಬಸ್ ಚಾಲಕರು: ಹಲ್ಲೆ ಮಾಡುತ್ತಿದ್ದನ್ನು ನೋಡಿದ ಕಾಲೇಜಿನ ಬಸ್ ಚಾಲಕರು, ಕೂಡಲೇ ಹಲ್ಲೆ ನಡೆಸುತ್ತಿದ್ದವನನ್ನು ಹಿಡಿದು ಕಾಲೇಜು ಪ್ರಾಂಶುಪಾಲರಿಗೆ ಒಪ್ಪಿಸಿದ್ದಾರೆ. ಈ ವೇಳೆ ಮತ್ತೂಬ್ಬ ನಾಪತ್ತೆಯಾಗಿದ್ದಾನೆ. ಈ ಘಟನೆಯ ಸಂಬಂಧ ಹಲ್ಲೆಗೊಳಗಾದ ವಿದ್ಯಾರ್ಥಿ ಪೋಷಕರಿಂದ ಹೊಸ ಬಡಾವಣೆ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
You seem to have an Ad Blocker on.
To continue reading, please turn it off or whitelist Udayavani.