ಜಾಗೃತ ಮನಸ್ಸಿನಿಂದ ಉತ್ತಮ ಸಮಾಜ
Team Udayavani, Feb 17, 2020, 3:00 AM IST
ತುಮಕೂರು: ಸರಿ ತಪ್ಪುಗಳ ವಿವೇಚನೆಯಿಂದ ಜಾಗೃತ ಮನಸ್ಸಿನಿಂದ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ನುಡಿದರು.
ನಗರದ ಬಾಲಭವನ ಸಭಾಂಗಣದಲ್ಲಿ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ನೆಹರು ಯುವಕೇಂದ್ರದ ಸಹಯೋಗದಲ್ಲಿ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಜಿಲ್ಲಾ ಮಟ್ಟದ ಜನಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆರೋಗ್ಯವಂತ ವ್ಯಕ್ತಿ ದೇಶದ ಸಂಪತ್ತಾಗಬೇಕು. ಬಲಹೀನ ದೌರ್ಬಲ್ಯಗಳಿಂದ ಕೂಡಿದ ವ್ಯಕ್ತಿ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಪವಿತ್ರ ಜೀವನ ನೆಮ್ಮದಿಯ ಬದುಕಿಗೆ ಮುಖ್ಯ. ಧೂಮಪಾನ, ಮದ್ಯಪಾನ ಹಾಗೂ ಡ್ರಗ್ಸ್‌ನಂತಹ ದುಶ್ಚಟಗಳಿಂದ ದೂರವಿದ್ದು, ಯುವಶಕ್ತಿ ನೈತಿಕತೆಯ ಬದುಕು ಆಯ್ದುಕೊಳ್ಳಬೇಕು ಎಂದು ಸಲಹೆ ಮಾಡಿದರು.
ಆರೋಗ್ಯಯುತ ಬದುಕಿಗೆ ಯೋಗ, ಧ್ಯಾನ ಮತ್ತು ನಿರ್ಮಲ ಪರಿಸರ ಮುಖ್ಯ. ಪ್ರೀತಿಯ ಮಾತುಗಳಿಂದ ತಪ್ಪು ಮಾಡಿದವರಿಗೆ ಅರಿವು ಮೂಡಿಸಿದಾಗ ಒಳ್ಳೆಯವರಾಗಲು ಸಾಧ್ಯ. ಸ್ವಾಮಿ ವಿವೇಕಾನಂದ “ಲವ್ ಇಸ್ ಲಾ’ ನಾಣ್ಣುಡಿಯಲ್ಲಿ ಮಾರ್ಮಿಕವಾಗಿ ತಿಳಿಸಿದ್ದಾರೆ ಎಂದರು.
ಮಹಾನಗರ ಪಾಲಿಕೆ ಮೇಯರ್ ಫರಿದಾ ಬೇಗಂ ಮಾತನಾಡಿ, ಒಂದು ಕುಟುಂಬ ನಿರ್ವಹಿಸುವಲ್ಲಿ ಸ್ತ್ರೀ-ಪುರುಷರ ಪಾತ್ರ ಬಹಳ ಮಹತ್ವದ್ದು, ಕುಟುಂಬದ ನಿರ್ವಹಣೆ ಜವಾಬ್ದಾರಿ ಹೊತ್ತಿರುವ ಇಬ್ಬರೂ ಸಂಸ್ಕಾರಯುತ ಜೀವನ ಸಾಗಿಸಿ, ಆತ್ಮಾವಲೋಕನದ ಮೂಲಕ ದುಶ್ಚಟಗಳಿಂದ ದೂರವಿರಲು ಸಾಧ್ಯ ಎಂದು ತಿಳಿಸಿದರು.
ಭಾರತ ವಿಭಿನ್ನ ಸಂಸ್ಕೃತಿ, ಸಂಪ್ರದಾಯಗಳ ದೇಶ. ಪಾಶ್ಚಾತ್ಯ ದೇಶದ ಅನುಕರಣೆಯಿಂದ ಧೂಮಪಾನ, ಮದ್ಯಪಾನದಂತಹ ದುಶ್ಚಟಗಳ ದಾಸರಾಗಿದ್ದೇವೆ. ಸಂತೋಷ ಮತ್ತು ದುಃಖಗಳ ಸಂದರ್ಭಗಳಲ್ಲೂ ಮದ್ಯಪಾನ ಮಾಡಿ ಸಂಭ್ರಮಿಸುವುದು ಪಾಶ್ಚತ್ಯ ದೇಶದ ಸಂಸ್ಕೃತಿಯಾಗಿದೆ.
ಈ ಸಂಸ್ಕೃತಿ ನಮ್ಮದಲ್ಲ. ಇದನ್ನು ಯುವ ಶಕ್ತಿ ಅರಿತು ನೈತಿಕ ಬದುಕಿನ ದಾರಿ ಕಂಡುಕೊಳ್ಳಬೇಕು ಎಂದು ಹೇಳಿದರು. ಮದ್ಯಪಾನ ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಿ ಕ್ರಾಂತಿಕಾರಿ ಬದಲಾವಣೆ ಮೂಲಕ ಶುದ್ಧ ಜೀವನದ ಹಾದಿ ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಪಂ ಅಧ್ಯಕ್ಷೆ ಲತಾ ಮಾತನಾಡಿದರು. ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅಚರ್ಡ್ ಸಂಸ್ಥೆಯ ಡಾ.ಎಚ್.ಜಿ.ಸದಾಶಿವಯ್ಯ ಉಪನ್ಯಾಸ ನೀಡಿದರು. ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಕೆ.ರೋಹಿಣಿ, ಆಶಾ ಕಾರ್ಯಕರ್ತೆಯರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ನೆಹರು ಯುವ ಕೇಂದ್ರದ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.
ದುಡಿದಿದ್ದನ್ನು ಕುಡಿತಕ್ಕೆ ಹಾಕಿ ದೇಹ, ಮನಸ್ಸು ಮತ್ತು ಮನೆ ಹಾಳು ಮಾಡಿಕೊಂಡು ಬೀದಿಪಾಲಾಗಿರುವ ಎಷ್ಟೋ ಕುಟುಂಬಗಳಿವೆ. ಇದು ಗೊತ್ತಿದ್ದರೂ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಮೂರ್ಖತನದ ಪರಮಾವಧಿ. ಇದನ್ನು ಅರಿತು ಪ್ರತಿಯೊಬ್ಬರೂ ಜೀವನ ಸುಂದರವಾಗಿಸಿಕೊಳ್ಳುವುದು ಅಥವಾ ವಿಕೃತಗೊಳಿಸಿಕೊಳ್ಳುವುದು ಅವರವರ ಕೈಯಲ್ಲಿದೆ ಎಂದು
-ಶ್ರೀ ವೀರೇಶಾನಂದ ಸರಸ್ವತೀ ಸ್ವಾಮೀಜಿ, ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ
Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.