ಮಳೆಯಿಂದ ಕೆಸರುಗದ್ದೆಯಾದ ರಸ್ತೆ
ಯುಜಿಡಿ ಕಾಮಗಾರಿಯಿಂದ ಗುಂಡಿಗಳದ್ದೇ ಕಾರುಬಾರು • ಸಂಚಾರಕ್ಕೆ ಸಂಕಷ್ಟ
Team Udayavani, Jul 20, 2019, 2:47 PM IST
ಮಳೆಗೆ ಕೆಸರು ಗದ್ದೆಯಂತಾಗಿರುವ ಹಳೇಪಾಳ್ಯ ರಸ್ತೆ.
ತಿಪಟೂರು: ನಗರದ ಹಳೇಪಾಳ್ಯ ರಸ್ತೆಯು ಮಳೆಯಿಂದ ಕೆಸರು ಗದ್ದೆಯಾಗಿದ್ದು, ಇದರಿಂದ ವಾಹನ ಸಂಚಾರ ಮತ್ತು ಪಾದಚಾರಿಗಳ ಓಡಾಟಕ್ಕೆ ತೀವ್ರ ತೊಂದರೆಯಾ ಗುತ್ತಿದ್ದು, ನಗರಸಭೆ ರಸ್ತೆ ದುರಸ್ತಿಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ವಾಹನ ಸವಾರರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಓಡಾಟ ಕಷ್ಟ: ಈ ರಸ್ತೆಯಲ್ಲಿ ಯುಜಿಡಿ ಕಾಮಗಾರಿ ಮಾಡಿ ತಿಂಗಳುಗಳೇ ಕಳೆದಿದ್ದರೂ ಇದು ವರೆಗೂ ರಸ್ತೆ ರಿಪೇರಿ ಮಾಡದ ಕಾರಣ ಕೆಸರುಗದ್ದೆಯಂತಾಗಿದೆ. ನೂರಾರು ವಾಹನ ಗಳು ಕೆಸರಿನಲ್ಲಿಯೆ ಓಡಾಡುವುದರಿಂದ ಗುಂಡಿಗಳು ಹೆಚ್ಚಾಗಿವೆ. ಅಲ್ಲದೆ ನಗರದ ಸಮೀಪಕ್ಕೆ ಸಂಪರ್ಕ ಹೊಂದಿರುವ ಹಳೇ ಪಾಳ್ಯ ರಸ್ತೆಯು ದೊಡ್ಡಯ್ಯನಪಾಳ್ಯ, ಆದಿ ಲಕ್ಷ್ಮೀನಗರ, ಹೊಸ ನಗರ, ಅಣ್ಣಾಪುರ, ಚಿಕ್ಕಲಕ್ಕಿಪಾಳ್ಯ, ಗಾಯತ್ರಿ ನಗರ, ಕಲ್ಕೆಳೆ, ಬಂಜಾರಹಟ್ಟಿ ಸೇರಿದಂತೆ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ, ಆರ್‌ಟಿಒ ಕಚೇರಿ, ಶಾಲಾ ಕಾಲೇಜುಗಳಿಗೆ ಸೇರಿದಂತೆ ಇನ್ನೂ ಹಲವು ಬಡಾವಣೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ.
ಹಳೇಪಾಳ್ಯದಲ್ಲಿ ಸಣ್ಣ ಕೈಗಾರಿಕೆಗಳ ಉದ್ದಿಮೆದಾರರು ಹೆಚ್ಚಾ ಗಿರುವ ಕಾರಣ ದಿನಕ್ಕೆ ಸಾವಿರಾರು ಜನ ಕೆಲಸಗಾ ರರು, ಸಾರ್ವಜನಿಕರು, ವಿದ್ಯಾರ್ಥಿ ಗಳು ಓಡಾಡುತ್ತಾರೆ. ಆದರೆ ಸಣ್ಣ ಸೋನೆ ಮಳೆ ಬಂದರೂ ಈ ರಸ್ತೆಯಲ್ಲಿ ಓಡಾಡುವುದು ಕಷ್ಟಕರವಾಗಿದೆ.
ನಗರಸಭೆಗೆ ಹಿಡಿಶಾಪ: ನಗರದಲ್ಲಿ ಹಲವಾರು ತಿಂಗಳ ಹಿಂದೆಯೇ ಯುಜಿಡಿ ಕಾಮಗಾರಿ ಮಾಡಲು ರಸ್ತೆ ಅಗೆಯಲಾಗಿತ್ತು. ಅಲ್ಲದೇ ಜೋಡಿ ಕೇಬಲ ಲೈನ್ ವ್ಯವಸ್ಥೆ ಮಾಡಲು ರಸ್ತೆ ಅಗೆದು ಹಾಳು ಮಾಡಿರು ವುದು ಇಲ್ಲಿನ ನಿವಾಸಿಗಳಿಗೆ ದಿನನಿತ್ಯ ಕಿರಿಕಿರಿ ಯಾಗುತ್ತಿದೆ. ಶಾಲಾ ವಾಹನಗಳು, ಆಟೋ ಗಳು, ಬೈಕ್‌ಗಳು ಕೆಸರಿನಲ್ಲಿಯೇ ಓಡಾಡು ವುದರಿಂದ ರಸ್ತೆಯಲ್ಲಿಯೇ ದೊಡ್ಡ ಕೆಸರು ಗುಂಡಿಗಳಾಗಿವೆ. ಇದರಿಂದ ಸಂಚಾರಕ್ಕೆ ತುಂಬಾ ತೊಂದರೆಯಾಗಿದೆ.
ವಾಹನಗಳು ಗುಂಡಿಗಳಲ್ಲೇ ಸರ್ಕಸ್ ಮಾಡಿಕೊಂಡು ಹರಸಾಹಸದಿಂದ ಸಂಚರಿ ಸುವ ದುಸ್ಥಿತಿ ಉಂಟಾಗಿದ್ದು, ಸವಾರರಂತು ಭಯಭೀತ ರಾಗಿದ್ದಾರೆ. ಇದರಿಂದ ಪ್ರತಿನಿತ್ಯ ಒಂದ ಲ್ಲೊಂದು ಅವಘಡಗಳು ಸಂಭ ವಿಸುತ್ತಿದ್ದು, ರಸ್ತೆಯಲ್ಲಿ ಸಂಚರಿಸುವುದೇ ಕಷ್ಟವಾಗುತ್ತಿದೆ. ಅಲ್ಲದೆ ಈ ರಸ್ತೆ ಡಾಂಬರೀ ಕರಣ ಕಂಡು ಎಷ್ಟು ವರ್ಷಗಳಾಗಿದೆಯೋ ಗೊತ್ತಿಲ್ಲ. ಸಾರ್ವಜನಿಕರು ಹಾಗೂ ಸವಾರರಂತೂ ಹಿಡಿಶಾಪ ಹಾಕಿಕೊಂಡೆ ಓಡಾಡುತ್ತಿದ್ದಾರೆ.
ರಸ್ತೆ ಮೇಲೆಯೇ ಚರಂಡಿ ನೀರು: ಚೆನ್ನಾಗಿದ್ದ ರಸ್ತೆಯನ್ನು ನಗರಸಭೆಯವರು ಯುಜಿಡಿ ಕಾಮಗಾರಿಗೆ ರಸ್ತೆ ಮಧ್ಯಭಾಗದಲ್ಲಿಯೇ ದೊಡ್ಡ ಚರಂಡಿ ಅಗೆದು ಸಂಚಾರಕ್ಕೆ ತೊಂದರೆ ಮಾಡಿದ್ದಾರೆ. ಈ ರಸ್ತೆಯು ತುಂಬಾ ಕಿರಿದಾಗಿರುವುದರಿಂದಲೂ ವಾಹನ ಗಳು ಸುಗಮವಾಗಿ ಓಡಾಡಲು ಸಾಧ್ಯ ವಾಗುತ್ತಿಲ್ಲ. ಅಲ್ಲದೆ ಈ ಬಡಾವಣೆಗಳಲ್ಲಿ ಅಲ್ಲಲ್ಲಿ ಚರಂಡಿ ಕಟ್ಟಿಕೊಂಡಿರು ವುದರಿಂದ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಇದರಲ್ಲೇ ವಾಹನಗಳು ಓಡಾಡುವಂತಾಗಿದೆ. ಹಳೇಪಾಳ್ಯ ಸೇರಿದಂತೆ ಈ ಎಲ್ಲಾ ಬಡ ಾಣೆ ಗಳಲ್ಲಿಯೂ ಇದೇ ಗೋಳಾಗಿದ್ದು, ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಪ್ರತಿನಿತ್ಯ ಸಾವಿರಾರು ವಾಹನಗಳು ಓಡಾಡುತ್ತವೆ. ಈ ಭಾಗದ ಪ್ರಯಾಣಿಕರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಈಗ ಲಾದರೂ ನಗರಸಭೆ ಇತ್ತ ಗಮನಹರಿಸಿ ರಸ್ತೆ ದುರಸ್ತಿ ಗೊಳಿಸುವ ಮೂಲಕ ಮೂಲ ಸೌಕರ್ಯ ಒದಗಿಸಬೇಕು ಎಂದು ನಿವಾಸಿ ಗಳು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.