ಅವಧಿ ಮೀರಿದ ಬಿಸ್ಕೆಟ್ ಮಾರಾಟ
Team Udayavani, May 18, 2020, 5:49 AM IST
ತಿಪಟೂರು: ನಗರದ ಕೆಲ ಅಂಗಡಿಗಳಲ್ಲಿ ಮತ್ತು ಬೇಕರಿಗಳಲ್ಲಿ ಬಿಸ್ಕೆಟ್ ಮತ್ತಿತರ ಆಹಾರ ಪದಾರ್ಥಗಳು ಅವಧಿ ಮೀರಿದ ದಿನಾಂಕವನ್ನು ಹೊಂದಿದ್ದರೂಕೂಡ ಗ್ರಾಮೀಣ ಭಾಗದಿಂದ ಬರುವ ಮುಗ್ಧ ಜನರಿಗೆ ಮಾರಾಟ ಮಾಡುತ್ತಿದ್ದು, ಈ ಬಗ್ಗೆ ತಾಲೂಕು ಆಹಾರ ನಿರೀಕ್ಷಕರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಹಕರು ದೂರುತ್ತಿದ್ದಾರೆ.
ನಗರದಲ್ಲಿ ಅಂಗಡಿಯೊಂದ ರಲ್ಲಿ ಬಿಸ್ಕೆಟ್ ಖರೀದಿಸಲು ಹೋದಾಗ ಏಳು ತಿಂಗಳ ಹಿಂದಿನ ಬಿಸ್ಕೆಟ್ ಮಾರಾಟವಾಗುತ್ತಿದ್ದನ್ನು ಗಮನಿಸಿದ ಗ್ರಾಹಕರು ಈ ಬಗ್ಗೆ ಉದಯವಾಣಿಗೆ ಮಾಹಿತಿ ನೀಡಿದ್ದಾರೆ. ಕೊರೊನಾ ಲಾಕ್‌ಡೌನ್ ನಿಂದಾಗಿ ಕಳೆದ 45 ದಿನಗಳಿಂದ ಅಂಗಡಿಗಳು ಬಾಗಿಲು ಹಾಕಲಾಗಿತ್ತು. ಈಗ ತಾಲೂಕು ಆಡಳಿತ ವ್ಯಾಪಾರ ಮಾಡಲು ಅನುಮತಿ ನೀಡಿದೆ.
ಆದರೆ ಅಂಗಡಿ ಮಾಲೀಕರು ಬಿಸ್ಕೆಟ್ ಇನ್ನಿತರ ಆಹಾರ ಪದಾರ್ಥಗಳನ್ನು ಅವಧಿ ಮೀರಿದ ನಂತರ ಬಿಸಾಡದೆ ಲಾಭದ ಆಸೆಗಾಗಿ ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ತಾಲೂಕು ಆರೋಗ್ಯಾಧಿಕಾರಿ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಕಠಿಣ ಕ್ರಮ ಜರುಗಿಸಬೇಕೆಂದು ಗ್ರಾಹಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ
MUST WATCH
ಹೊಸ ಸೇರ್ಪಡೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.