ಸುಳ್ಳು ಮಾಹಿತಿಯಿತ್ತ ಅಧಿಕಾರಿಗಳ ವಿರುದ್ಧ ಕ್ರಮ
Team Udayavani, Jul 12, 2019, 12:45 PM IST
ತುಮಕೂರು ಜಿಪಂ ಸಭಾಂಗಣದಲ್ಲಿ ಗುರುವಾರ ನರೇಗಾ, ನೀರು ಸಂರಕ್ಷಣೆ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಸ್ತುವಾರಿ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಮಾತನಾಡಿದರು.
ತುಮಕೂರು: ಸಭೆಗೆ ಸುಳ್ಳು ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳ ಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಎಚ್ಚರಿಕೆ ನೀಡಿದರು. ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗುರುವಾರ ನರೇಗಾ ಮತ್ತು ನೀರು ಸಂರಕ್ಷಣೆ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಒದಗಿಸುವ ಮಾಹಿತಿ ನಿಖರವಾಗಿರಬೇಕು. ಅಸ್ಪಷ್ಟ ಮಾಹಿತಿ ನೀಡಿದರೆ ಶಿಸ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.
ಗುರಿ ಮೀರಿ ಸಾಧನೆ ಮಾಡಿ: ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಶೇ.48 ಮಾತ್ರ ಉದ್ಯೋಗ ಒದಗಿಸಲಾಗಿದೆ. ನಿರೀಕ್ಷಿತ ಗುರಿ ಸಾಧನೆಯಾಗಿಲ್ಲ. ಇದರಿಂದ ನರೇಗಾ ಯೋಜನೆಯಡಿ ಉದ್ಯೋಗ ಒದಗಿಸುವಲ್ಲಿ ಹಿಂದುಳಿದಿದ್ದೇವೆ. ಹೀಗಾಗಿ ಗುರಿ ಮೀರಿ ಸಾಧನೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಂಟಿ ನಿರ್ದೇಶಕರಿಗೆ ತಾಕೀತು: ಕೃಷಿ ಭಾಗ್ಯ ಯೋಜನೆಯಡಿ ಕೈಗೊಳ್ಳಲಾಗುವ ಕೃಷಿಹೊಂಡ ಕಾಮಗಾರಿಯನ್ನು ಜು. 31ರೊಳಗಾಗಿ ಪೂರ್ಣ ಗೊಳಿಸಬೇಕು. ಮಳೆಗಾಲ ಪ್ರಾರಂಭ ವಾಗುವ ಮುನ್ನವೇ ಪೂರ್ಣಗೊಳಿಸಬೇಕಿತ್ತು. ಮಳೆ ಬಂದ ನಂತರ ಕೈಗೊಂಡರೆ ಏನು ಪ್ರಯೋಜನ? ರೈತರು ಮತ್ತೂಂದು ವರ್ಷ ಕಾಯಬೇಕಾ? ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಜಂಟಿ ನಿರ್ದೇಶಕರಿಗೆ ತಾಕೀತು ಮಾಡಿದರು.
ಬೆಳೆ ಪದ್ಧತಿ ಮಾಹಿತಿ ನೀಡಿ: ರೈತರಿಗೆ ಅನುಕೂಲ ವಾಗುವಂತೆ ರೇಷ್ಮೆ, ಕೃಷಿ, ತೋಟಗಾರಿಕೆ, ಪಶುಪಾಲನೆ, ಅರಣ್ಯ ಇಲಾಖೆಗಳು ಸಂಯುಕ್ತವಾಗಿ ಸರ್ಕಾರಿ ಯೋಜನೆಗಳ ಬಗ್ಗೆ ಅರಿವು ಕಾರ್ಯಾ ಗಾರವನ್ನು ಹಮ್ಮಿಕೊಂಡು ವರ್ಷಪೂರ್ತಿ ಆದಾಯ ತರುವಂತಹ ಚಟುವಟಿಕೆಗಳನ್ನು ಕೈಗೊಳ್ಳುವ ಬಗ್ಗೆ ಹಾಗೂ ಹೆಚ್ಚು ಇಳುವರಿ ನೀಡುವಂತಹ ಬಹು ಬೆಳೆ ಪದ್ಧತಿಯನ್ನು ಅನುಸರಿಸುವ ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಉದ್ಯೋಗ ಕಲ್ಪಿಸಿ: ಬಡ ರೈತರನ್ನು ಗುರುತಿಸಿ ಸರ್ಕಾರದಿಂದ ದೊರೆಯುವ ಸಾಲ ಸೌಲಭ್ಯ, ಸಹಾಯಧನ ಸೌಲಭ್ಯದ ಬಗ್ಗೆ ಜಾಗೃತಿ ಮೂಡಿಸ ಬೇಕು. ಜಿಲ್ಲೆಯಲ್ಲಿ ಉದ್ಯೋಗ ಚೀಟಿ ನೀಡಲಾಗಿ ರುವ ಎಲ್ಲರಿಗೂ ಕಡ್ಡಾಯವಾಗಿ ಉದ್ಯೋಗ ಒದಗಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಇಚ್ಛಾಶಕ್ತಿಯಿಂದ ಸೇವೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆ ಹಾಗೂ ಬರ ನಿರ್ವಹಣೆ ತಮಗೆ ಮೆಚ್ಚುಗೆ ತಂದಿದೆ ಎಂದು ತಿಳಿಸಿದರು.
ಜಿಪಂ ಸಿಇಒ ಶುಭಾ ಕಲ್ಯಾಣ್ ಮಾತನಾಡಿ, ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಪ್ರಸಕ್ತ ವರ್ಷದಲ್ಲಿ ಸಾಮಾಜಿಕ ಅರಣ್ಯ, ಪ್ರಾದೇಶಿಕ ಅರಣ್ಯ, ಕೃಷಿ, ರೇಷ್ಮೆ, ತೋಟಗಾರಿಕೆ, ವಿಭಾಗ ದಿಂದ 2,27,991 ಮಾನವ ದಿನಗಳನ್ನು ಸೃಜಿಸ ಲಾಗಿದೆ. ಈವರೆಗೂ ಶೇ.13.65ರಷ್ಟು ಗುರಿ ಸಾಧಿಸ ಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಡೀಸಿ ಡಾ.ಕೆ.ರಾಕೇಶ್‌ಕುಮಾರ್, ತಾಪಂ ಇಒ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.