ಮರಳು ಅಕ್ರಮ ತಡೆಗೆ ಕ್ರಮ
Team Udayavani, Aug 31, 2019, 1:28 PM IST
ತುಮಕೂರಿನ ಶ್ರೀಕ್ಷೇತ್ರ ಸಿದ್ಧಗಂಗಾ ಮಠಕ್ಕೆ ಶುಕ್ರವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ ಪಾಟೀಲ್ ಭೇಟಿ ನೀಡಿ ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿದರು.
ತುಮಕೂರು: ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಗೆ ಅಧಿಕಾರಿಗಳು ದಕ್ಷತೆ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡು ವಂತೆ ಸೂಚಿಸಿದ್ದೇನೆ. ಅಕ್ರಮ ಗಣಿಗಾರಿಕೆ ನಡೆಯಲು ಬಿಡುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ ಪಾಟೀಲ್ ತಿಳಿಸಿದರು.
ಶ್ರೀ ಕ್ಷೇತ್ರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂ.ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿ ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದು ಮಾಧ್ಯಮದವ ರೊಂದಿಗೆ ಮಾತನಾಡಿದರು.
ನ್ಯೂನ್ಯತೆ ಸರಿಪಡಿಸುತ್ತೇನೆ: ಅಕ್ರಮವಾಗಿ ಮರಳು ಸಾಗಾಟ ತಡೆಯಲು ಕ್ರಮ ಕೈಗೊಳ್ಳುವಂತೆ ಈಗಾಗಲೇ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಖಾತೆಗೆ ಸಂಬಂಧಿಸಿದ ವಿಷಯದಲ್ಲಿ ಯಾವುದೇ ನ್ಯೂನ್ಯತೆಗಳಿದ್ದರೂ ಮುಂದಿನ ದಿನಗಳಲ್ಲಿ ಸರಿ ಪಡಿಸುತ್ತೇನೆ ಎಂದರು.
ನಮ್ಮ ಸರ್ಕಾರ ಉತ್ತಮ ಕೆಲಸ ಮಾಡುತ್ತದೆ. ಈ ಹಿಂದಿನ ಸರ್ಕಾರಕ್ಕಿಂತ ನಮ್ಮ ಸರ್ಕಾರ ಉತ್ತಮವಾಗಿ ಆಡಳಿತ ನಡೆಸಲಿದೆ. ಅದಕ್ಕೆ ಶ್ರೀಗಳ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದು ಹೇಳಿದರು.
ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ: ಖಾತೆ ಹಂಚಿಕೆಯಾದ ನಂತರ ಅಧಿಕಾರಿಗಳ ಸಭೆ ನಡೆಸಿ ಇಲಾಖೆ ಮಾಹಿತಿ ಪಡೆದು ಕೊಂಡಿದ್ದೇನೆ. ನನ್ನ ಮತ ಕ್ಷೇತ್ರವಾದ ಗದಗ ಜಿಲ್ಲೆಯ ನರಗುಂದ ಕ್ಷೇತ್ರದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿಯ ಜನರ ಸಂಕಷ್ಟ ಆಲಿಸಿದ್ದೇನೆ. ಅಗತ್ಯ ಸೌಲಭ್ಯ ಕಲ್ಪಿಸಲು ಒತ್ತು ನೀಡಿದ್ದೆ. ಈಗಾಗಲೇ ಅಲ್ಲಿ ಸಾಕಷ್ಟು ಕಾಮಗಾರಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದ ಪ್ರವಾಹ ಪೀಡಿತರ ನೋವಿಗೆ ಸರ್ಕಾರ ಪರಿಹಾರ ನೀಡುವ ಕೆಲಸ ಮಾಡು ತ್ತಿದೆ. ಶ್ರೀ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದು ಖಾತೆಯನ್ನು ಯಶಸ್ವಿಯಾಗಿ ನಡೆಸಲು ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದರು.
ಅಭಿವೃದ್ಧಿಗೆ ಶ್ರಮಿಸುತ್ತೇನೆ: ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸದ ದಿನದಿಂದ ಪ್ರವಾಹ ಪೀಡಿತ ಕ್ಷೇತ್ರಗಳಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ನಿರ್ದೇಶನ ನೀಡುವುದರ ಜೊತೆಗೆ ಸೂಕ್ತ ಅನುದಾನ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಅವರಿಗೆ ಹೆಗಲು ಕೊಟ್ಟು ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್, ಆಪ್ತ ಕಾರ್ಯದರ್ಶಿ ವಿರೂಪಾಕ್ಷ, ಓಂಕಾರೇಶ್ವರಿ, ಡಿಡಿ ಪದ್ಮಜ, ಬಿಜೆಪಿ ಮುಖಂಡರಾದ ರವಿ ಹಬ್ಟಾಕ, ಬಾವಿಕಟ್ಟೆ ನಾಗಣ್ಣ, ಚಂದ್ರಮೌಳಿ, ನಿಟ್ಟೂರು ಬಾಬು, ಕುಮಾರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು
Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?
IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!
Mangaluru: ರಾಜ್ಯದ 2ನೇ ಐಟಿ ಕೇಂದ್ರವಾಗಿ ಅಭಿವೃದ್ಧಿಗೆ ಅವಕಾಶ ಇದ್ದರೂ ಆದ್ಯತೆ ನೀಡದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.