ಪ್ಲಾಸ್ಟಿಕ್ ಬಳಸಿ ಇಡ್ಲಿ ಬೇಯಿಸಿದರೆ ಕ್ರಮ
Team Udayavani, Sep 29, 2019, 3:42 PM IST
ಹುಳಿಯಾರು: ತಾಲೂಕಿನಲ್ಲಿ 40 ಮೈಕ್ರಾ ನ್ ಗಿಂತ ಕಡಿಮೆ ದಪ್ಪ ಇರುವ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆ ನಿಷೇಧಿಸಲಾಗಿದ್ದರೂ, ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಪೇಪರ್ ಬಳಸಿ ಇಡ್ಲಿ ಬೇಯಿಸುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದೆ. ಹೋಟೆಲ್‌ನವರು ತಕ್ಷಣ ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಕಾಟನ್ ಬಟ್ಟೆ ಬಳಸಬೇಕು. ಇಲ್ಲವಾದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಹಶೀಲ್ದಾರ್ ತೇಜಸ್ವಿನಿ ಎಚ್ಚರಿಸಿದ್ದಾರೆ.
ಹುಳಿಯಾರಿನಲ್ಲಿ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಪ್ಲಾಸ್ಟಿಕ್ ನಿಷೇಧ ಕುರಿತು ಜನಜಾಗೃತಿ ಮೂಡಿಸಿ ಅವರು ಮಾತನಾಡಿದರು. ಮನೆಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಲ್ಲಿಸಲು ಪಣತೊಡಬೇಕಾಗಿದೆ. ಅಡುಗೆ ಮನೆಯ ಸಾಮಗ್ರಿಗಳು ಪ್ಲಾಸ್ಟಿಕ್ ಮಯವಾಗುವುದನ್ನು ನಿಲ್ಲಿಸಬೇಕು. ಮಾರುಕಟ್ಟೆಗೆ ತೆರಳಿ ದಾಗ ಪ್ಲಾಸ್ಟಿಕ್ ಕವರ್ ನೆಚ್ಚಿಕೊಂಡಿರ ಬಾರದು. ಪ್ಲಾಸ್ಟಿಕ್ ಬದಲಾಗಿ ಪರಿಸರ ಸ್ನೇಹಿ ಬ್ಯಾಗ್ ಅನುಸರಿಸಿದರೆ ಪರಿಸರ ಸಂರಕ್ಷಣೆ ಹಾಗೂ ಉತ್ತಮ ಆರೋಗ್ಯ ಕಾಪಾಡಿ ಕೊಳ್ಳಬಹುದು ಎಂದು ಹೇಳಿದರು. ತಾಲೂಕು ಪಂಚಾಯಿತಿ ಇಒ ನಾರಾಯಣಮೂರ್ತಿ ಮಾತನಾಡಿ, ಪ್ಲಾಸ್ಟಿಕ್ ಬಳಕೆಯಿಂದ ಮಣ್ಣು, ನೀರು, ಸುತ್ತಮುತ್ತಲಿನ ಜೀವ ಸಂಕುಲ ಮತ್ತು ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದರು.
ಪ್ಲಾಸ್ಟಿಕ್‌ನಲ್ಲಿರುವ ಹಾನಿಕಾರಕ ಅಂಶಗಳು ಮನುಷ್ಯನ ದೇಹಕ್ಕೆ ನಾನಾ ಹಂತಗಳಲ್ಲಿ ಸೇರಿ ಮಾರಕ ರೋಗಗಳಿಗೆ ಕಾರಣ ವಾಗುತ್ತವೆ. ಥೈರಾಯ್ಡ, ಆಸ್ತಮಾ, ಹೃದಯ ಕಾಯಿಲೆ, ಕೂದಲು ಮತ್ತು ಚರ್ಮದ ಸಮಸ್ಯೆ, ನರಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು ಎಂದು ಎಚ್ಚರಿಸಿದರು.
ಉಪತಹಶೀಲ್ದಾರ್ ಮಲ್ಲಿಕಾರ್ಜುನಯ್ಯ, ಕಂದಾಯ ತನಿಖಾಧಿಕಾರಿ ಮಂಜುನಾಥ್, ಸಹಾಯಕ ಕೃಷಿ ನಿರ್ದೇಶಕ ಡಿ.ಆರ್.ಹನುಮಂತರಾಜು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ರೇಣುಕಾದೇವಿ, ಬೆಸ್ಕಾಂ ಎಇಇ ಗವೀರಂಗಯ್ಯ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.