ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದರೆ ಕ್ರಮ
Team Udayavani, Sep 20, 2019, 5:35 PM IST
ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಂಕಷ್ಟ ಎದುರಾಗಿದ್ದು, ಸೆ. 30ರ ಒಳಗೆ ಅಕ್ರಮವಾಗಿ ಪಡೆದಿರುವ ಕಾರ್ಡ್ ಸ್ವಯಂ ಪ್ರೇರಿತವಾಗಿ ರದ್ದುಗೊಳಿಸಲು ಅಥವಾ ಮರಳಿಸಲು ಅವಕಾಶ ನೀಡಲಾಗಿದೆ. ಇಲ್ಲವಾದರೆ 1977ರ ಪಡಿತರ ಚೀಟಿ ಕಾಯಿದೆ ಅಡಿ ಕಾನೂನು ಕ್ರಮಕ್ಕೆ ಒಳಗಾಗಲಿದ್ದಾರೆ. ಶ್ರೀಮಂತರು, ಬಡತನ ರೇಖೆಗಿಂತ ಮೇಲಿರುವವರು ಬಿಪಿಎಲ್ ಕಾರ್ಡ್ ಹೊಂದಿರುವುದರಿಂದ ಫಲಾನುಭವಿಗಳಿಗೆ ತೊಂದರೆಯಾಗುತ್ತಿದೆ. ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗುತ್ತದೆ.
ತಾಲೂಕಿನಲ್ಲಿ 52676 ಬಿಪಿಎಲ್ ಕಾರ್ಡ್ ದಾರರಿದ್ದಾರೆ. ಇದರಲ್ಲಿ ಅಕ್ರಮವಾಗಿ ಪಡಿತರ ಚೀಟಿ ಹೊಂದಿರುವವರ ಸಂಖ್ಯೆ ಹೆಚ್ಚಿದ್ದು, ತೋಟಗಳು, ಜಮೀನು, ವಾರ್ಷಿಕ ಆದಾಯ ಹೆಚ್ಚು ಹೊಂದಿರುವವರು ಅಕ್ರಮವಾಗಿ ರೇಷನ್ ಕಾರ್ಡ್ ಹೊಂದಿದ್ದು, ಇಂತಹವರ ಕಾರ್ಡ್ ರದ್ದುಗೊಳ್ಳಿಸಲು ಹಾಗೂ ಮಾಹಿತಿ ನೀಡುವಂತೆ ಗ್ರಾಮ ಲೆಕ್ಕಿಗರಿಗೆ ಸೂಚಿಸಲಾಗಿದೆ. ಇಲಾಖೆಗೆ ತಪ್ಪು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರ ಪತ್ತೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ನ್ಯಾಯಬೆಲೆ ಅಂಗಡಿಗಳಿಂದಲೇ ಅನರ್ಹರನ್ನು ಗುರುತಿಸಲಾಗುತ್ತದೆ. ಅನರ್ಹರು ಬಿಪಿಎಲ್ ಕಾರ್ಡ್ ಹಿಂತಿರುಗಿಸುವಂತೆ ಸೆ. 7ರಂದು ಸುತ್ತೋಲೆ ಹೊರಡಿಸಲಾಗಿದೆ.
ಶ್ರೀಮಂತರು ಯಾರು: 7.5 ಕೃಷಿ ಭೂಮಿ ಹೊಂದಿರುವವರು, ಸರ್ಕಾರಿ, ಅರೆ ಸರ್ಕಾರಿ ನೌಕರರು, 1.2 ಲಕ್ಷಕ್ಕೂ ಹೆಚ್ಚು ವಾರ್ಷಿಕ ವರಮಾನ ಹೊಂದಿ ದ್ದವರು, ದೊಡ್ಡ ಅಂಗಡಿ, ಹೋಟೆಲ್ ವರ್ತಕರು, ವಕೀಲರು, ಸ್ವಾಯತ್ತ ಸಂಸ್ಥೆ ಮಂಡಳಿ ನೌಕರರು, 1000 ಅಡಿಗಳಿಗಿಂತ ದೊಡ್ಡ ಮನೆ ಹೊಂದಿದವರು ಕಾರು, ಟ್ರ್ಯಾಕ್ಟರ್ ಹೊಂದಿರುವವರು ಕಾರ್ಡ್ ಹೊಂದಿದ್ದರೆ ರದ್ದುಗೊಳಿಸಲು ಸೂಚಿಸಲಾಗಿದೆ. ಅಧಿಕಾರಿಗಳಿಗೆ ಹಣ ನೀಡಿ ಸುಳ್ಳು ದಾಖಲೆ ಒದಗಿಸಿ ಅರ್ಥಿಕ ಸ್ಥಿತಿವಂತರು ಸಹ ಸರ್ಕಾರದಿಂದ ನೀಡುವ ರೇಷನ್ ಪಡೆಯುತ್ತಿದ್ದಾರೆ.
ಮತ್ತೆ ಅಕ್ರಮ ನಡೆಯದಿರಲಿ: ಸುಳ್ಳು ದಾಖಲೆ ನೀಡಿ ಪಡೆದಿರುವ ಅನರ್ಹ ವ್ಯಕ್ತಿಗಳಿಂದ ರೇಷನ್ ಕಾರ್ಡ್‌ಗಳನ್ನು ಅಧಿಕಾರಿಗಳು ರದ್ದುಗೊಳಿಸ ಬೇಕಾಗಿದೆ. ಇದರಲ್ಲಿಯೂ ಹಣದ ಆಸೆಗೆ ಬಿದ್ದು , ಅಕ್ರಮವನ್ನು ಸಕ್ರಮವನ್ನಾಗಿ ಮಾಡಿದರೆ ಸರ್ಕಾರದಈ ನಿರ್ಧಾರ ನೀರಿನಲ್ಲಿ ಹೋಮ ಮಾಡಿ ದಂತಾಗುತ್ತದೆ. ಒಟ್ಟಿನಲ್ಲಿ ಬಡವರಿಗೆ ಸರ್ಕಾರಗಳ ಸೌಕರ್ಯಗಳು ನೇರವಾಗಿ ತಲುಪುವಂತಾಗಲಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.