ಚುನಾವಣಾ ಪ್ರಕ್ರಿಯೆಯಿಂದ ತಪ್ಪಿಸಿಕೊಂಡರೆ ಕ್ರಮ
Team Udayavani, Feb 12, 2019, 7:25 AM IST
ತುಮಕೂರು: ಕೆಲವೇ ದಿನಗಳಲ್ಲಿ ಲೋಕ ಸಭಾ ಚುನಾವಣೆ ಘೋಷಣೆಯಾಗಲಿದ್ದು, ಇಲ್ಲದ ಸಬೂಬು ಹೇಳಿ ಚುನಾವಣಾ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳ ಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ರಾಕೇಶ್‌ಕುಮಾರ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ತುರ್ತು ಚುನಾ ವಣಾ ವಿಷಯಗಳಿಗೆ ಸಂಬಂಧಿಸಿದಂತೆ ವಿವಿಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗುವ ಎಲ್ಲ ನೋಡಲ್ ಅಧಿಕಾರಿಗಳು, ಸಹಾಯಕ ಚುನಾವಣಾಧಿ ಕಾರಿಗಳು ಹಾಗೂ ಮತ್ತಿತರ ಅಧಿಕಾರಿಗಳು ಚುನಾವಣಾ ಆಯೋಗದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ಚುನಾವಣಾ ಪೂರ್ವ ಸಿದ್ಧತೆ ಬಗ್ಗೆ ನಡೆಯುವ ಎಲ್ಲ ತರಬೇತಿಗಳು ಹಾಗೂ ಸಭೆಗಳಿಗೆ ಕಡ್ಡಾಯ ವಾಗಿ ಹಾಜರಾಗಬೇಕು ಎಂದು ಸೂಚಿಸಿ, ಚುನಾವಣಾ ಕೆಲಸ ನಿಗದಿತ ಅವಧಿಯಲ್ಲಿ ಮುಗಿಸಬೇಕು. ಯಾವುದೇ ಲೋಪದೋಷ ಗಳಿಲ್ಲದೆ ಪಾರದರ್ಶಕವಾಗಿ ಚುನಾವಣೆ ನಡೆಸಲು ಸಿದ್ಧರಾಗಿರಬೇಕು ಎಂದು ಸೂಚಿಸಿದರು.
ನಿರ್ದೇಶನ: ನಿಯೋಜಿತ ಎಲ್ಲ ನೋಡಲ್ ಅಧಿಕಾರಿಗಳು ತಪ್ಪದೇ ತಮ್ಮ ವ್ಯಾಪ್ತಿಯ ಮತ ಗಟ್ಟೆಗಳಲ್ಲಿ ರ್‍ಯಾಂಪ್ ವ್ಯವಸ್ಥೆ, ಕಿಟಕಿ- ಬಾಗಿಲುಗಳು ಸುಸ್ಥಿತಿ, ಶೌಚಾಲಯ, ಬೆಳಕು, ನೀರಿನ ವ್ಯವಸ್ಥೆಯಿರುವ ಬಗ್ಗೆ ಭೌತಿಕ ಪರಿಶೀಲನೆ ನಡೆಸಿ ಅಗತ್ಯವಿರುವ ಕಡೆ ಮೂಲ ಸೌಕರ್ಯ ಒದಗಿಸಬೇಕು.
ಮತದಾನ ಸಂದರ್ಭದಲ್ಲಿ ಮತಗಟ್ಟೆಗಳಲ್ಲಿ ಆಯಾ ಗ್ರಾಮ ಪಂಚಾಯಿತಿ ವತಿಯಿಂದ ವಿಕಲ ಚೇತನರಿಗೆ ವ್ಹೀಲ್ ಚೇರ್, ದೃಷ್ಟಿದೋಷವುಳ್ಳ ವರಿಗೆ ಭೂತಕನ್ನಡಿ ಒದಗಿಸುವ ವ್ಯವಸ್ಥೆ ಮಾಡಬೇಕು. ಮತದಾನ ಕೊಠಡಿಯಲ್ಲಿ ದುರಸ್ತಿ ಯಲ್ಲಿರುವ ವಿದ್ಯುದ್ದೀಪಗಳನ್ನು ಸರಿಪಡಿಸಲು ಎಲ್ಲ ಪಿಡಿಒಗಳಿಗೆ ಸುತ್ತೋಲೆ ಹೊರಡಿಸಬೇಕೆಂದು ನಿರ್ದೇಶನ ನೀಡಿದರು.
ಅಮಾನತು ಎಚ್ಚರಿಕೆ: ನೋಡಲ್ ಅಧಿಕಾರಿಗಳು ಯಾವುದೇ ಕಾರಣಕ್ಕೂ ರಾಜಕೀಯ ನಾಯಕರ ಅಥವಾ ಯಾವುದೇ ಪಕ್ಷದ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವುದು, ವಿಡಿಯೋಗಳನ್ನು ಪ್ರಸಾರ ಮಾಡುವುದು ಕಂಡು ಬಂದರೆ ಅಂಥವರನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಚುನಾ ವಣಾ ಮಾದರಿ ನೀತಿ ಸಂಹಿತೆಯಡಿ ಮತ ದಾನ ದಿನದ 48 ಗಂಟೆಗಳ ಮುನ್ನ ರಾಜ ಕೀಯ ಪಕ್ಷಗಳು ತಮ್ಮ ಪಕ್ಷಕ್ಕೆ ಸಂಬಂಧಿಸಿದ ಪ್ರಚಾರ ಸಾಮಗ್ರಿ ತೆರವುಗೊಳಿಸಬೇಕು.
ಸಂಹಿತೆ ಜಾರಿ ಅವಧಿಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ಏರ್ಪಡಿಸುವ ಕಾರ್ಯಕ್ರಮಗಳಿ ಗಾಗಿ ಬಳಸಲಾಗುವ ಕರಪತ್ರ, ಪೋಸ್ಟರ್, ಹೋರ್ಡಿಂಗ್ಸ್, ಧ್ವನಿವರ್ಧಕಗಳು, ವಿಡಿಯೋ ಚಿತ್ರೀಕರಣ, ಛಾಯಾಚಿತ್ರ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರಲ್ಲದೇ ಚುನಾವಣೆಯನ್ನು ಶಾಂತಿ ಯುತವಾಗಿ ನಡೆಸಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಜಿಪಂ ಸಿಇಒ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೋನ ವಂಶಿಕೃಷ್ಣ, ಚುನಾವಣಾ ತಹಶೀಲ್ದಾರ್ ಮೋಹನ್, ಮತ್ತಿತರೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.