ಮುಂಗಾರು: ಬಿತ್ತನೆ ಬೀಜ, ರಸಗೊಬ್ಬರ ಪೂರೈಸಿ
Team Udayavani, Apr 23, 2022, 3:45 PM IST
ತುಮಕೂರು: ಜಿಲ್ಲೆಯಲ್ಲಿ ಉತ್ತಮ ಮಳೆಯಾಗು ತ್ತಿದ್ದು, ಪೂರ್ವ ಮುಂಗಾರು ಬೆಳೆಗೆ ಅಗತ್ಯವಾದ ಗುಣಮಟ್ಟದ ಬಿತ್ತನೆ ಬೀಜವನ್ನು ಸಕಾಲಕ್ಕೆ ರೈತ ಸಂಪರ್ಕ ಕೇಂದ್ರಗಳಿಗೆ ಪೂರೈಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಕೃಷಿ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರ ವಾರ ನಡೆದ 2022ರ ಮುಂಗಾರು ಹಂಗಾಮು ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿ, ಪೂರ್ವ ಮುಂಗಾರು ಬೆಳೆ ಗಳಾದ ಹೆಸರು, ಉದ್ದು, ಹಲಸಂದೆ ಬಿತ್ತನೆ ಮಾಡಲು ಸಕಾಲವಾಗಿರುವುದರಿಂದ ರೈತರಿಗೆ ತೊಂದರೆ ಆಗದಂತೆ ಗುಣಮಟ್ಟದ ಬಿತ್ತನೆ ಬೀಜ ನೀಡುವಂತೆ ತಿಳಿಸಿದರು.
ಕಾರ್ಪೊರೇಷನ್‌ನಿಂದ ಪೂರೈಸಿ: ರೈತರಿಗೆ ನೀಡುವ ಬೀಜಗಳು ಗುಣಮಟ್ಟದಿಂದ ಕೂಡಿರುವ ಬಗ್ಗೆ ಖಾತರಿಪಡಿಸಿಕೊಂಡು ಜಿಲ್ಲೆಯ 50 ರೈತ ಸಂಪರ್ಕ ಕೇಂದ್ರಗಳಲ್ಲದೆ, ಹೆಚ್ಚುವರಿ 8 ಮಾರಾಟ ಕೇಂದ್ರಗಳಿಗೆ ಸರಬರಾಜು ಮಾಡಬೇಕು. ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಿಸಲಾಗುವ ಬಿತ್ತನೆ ಬೀಜ ಅರ್ಹರಿಗೆ ವಿತರಿಸಲಾಗುವುದು. ಹೆಸರು, ತೊಗರಿ, ಶೇಂಗಾ, ಬಿತ್ತನೆ ಬೀಜಗಳ ಕೊರತೆ ಕಂಡುಬಂದಲ್ಲಿ ಕರ್ನಾಟಕ ಸೀಡ್ ಫೆಡರೇಷನ್ ಕಾರ್ಪೊರೇಷನ್ ನಿಂದ ಪೂರೈಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ರಸಗೊಬ್ಬರ ವಿತರಿಸಿ: ರಾಜ್ಯದಿಂದ ಜಿಲ್ಲೆಗೆ ನಿಗದಿ ಪಡಿಸಿರುವ ರಸಗೊಬ್ಬರವನ್ನು ಸಕಾಲಕ್ಕೆ ಪೂರೈಕೆ ಮಾಡುವಂತೆ ವಿವಿಧ ರಸಗೊಬ್ಬರಗಳ ಸರಬರಾಜು ಏಜೆನ್ಸಿಗಳಿಗೆ ಸೂಚಿಸಿದ ಅವರು, ಮಾರಾಟ ಗಾರರು ಕಡ್ಡಾಯವಾಗಿ ಪಿಒಎಸ್ ಯಂತ್ರದ ಮೂಲಕವೇ ರಸಗೊಬ್ಬರ ವಿತರಣೆ ಮಾಡಬೇಕು ಎಂದು ವಿವರಿಸಿದರು.
ಪರವಾನಗಿ ರದ್ದು: ರಸಗೊಬ್ಬರವನ್ನು ಅನವಶ್ಯಕ ದಾಸ್ತಾನು, ಎಂಆರ್‌ಪಿಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ್ದಲ್ಲಿ ರಸಗೊಬ್ಬರ ನಿಯಂತ್ರಣ ಕಾಯ್ದೆ 1985 ಹಾಗೂ ಅಗತ್ಯ ವಸ್ತುಗಳ ಕಾಯ್ದೆ 1955ರ ಪ್ರಕಾರ ಪರವಾನಗಿಯನ್ನು ರದ್ದುಪಡಿಸ ಲಾಗುವುದು ಎಂದು ಎಚ್ಚರಿಸಿದರು.
ಕೃಷಿ ಇಲಾಖೆಗೆ ಮಾಹಿತಿ ನೀಡಿ: ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನ ಮಾತನಾಡಿ, ಕೃಷಿ ಇಲಾಖೆಯಿಂದ ರಿಯಾಯ್ತಿ ದರದಲ್ಲಿ ಬಿತ್ತನೆ ಬೀಜ ವಿತರಿಸಲಾಗುವುದು. ಬಿತ್ತನೆ ಬೀಜಗಳ ಕೊರತೆ ಉಂಟಾದಲ್ಲಿ ಕರ್ನಾಟಕ ಸೀಡ್ ಫೇಡರೇಷನ್ ಕಾರ್ಪೊರೇಷನ್ ಪೂರೈಸಬೇಕು. ರಸಗೊಬ್ಬರಗಳ ಸರಬ ರಾಜು ಮಾಡುವ ಏಜೆನ್ಸಿಗಳಿಂದ ಕೃಷಿ ಇಲಾಖೆಗೆ ಆಗಾಗ್ಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಕೃಷಿ ಸಹಾಯಕ ಅಧಿಕಾರಿಗಳು ಹಾಜರಿದ್ದರು.
ಪೂರ್ವ ಮುಂಗಾರು ಮಳೆ: ರೈತರಲ್ಲಿ ಸಂತಸ : ಜಿಲ್ಲೆಯ ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ಗುಬ್ಬಿ ತಾಲೂಕಿನಲ್ಲಿ ಪೂರ್ವ ಮುಂಗಾರು ಮಳೆ ಆರಂಭ ಆಗುತ್ತಿದ್ದಂತೆ ಭೂಮಿ ಹಸನು ಮಾಡಿ ಮಳೆ ಆರಂಭವಾಗುವುದರೊಳಗೆ ಹೆಸರು, ಉದ್ದು, ಅಲಸಂದೆ ಬಿತ್ತನೆ ಮಾಡಿ ಒಂದು ಬೆಳೆ ಬೆಳೆಯುತ್ತಾರೆ. ಚಿಕ್ಕನಾಯಕನಹಳ್ಳಿ, ತಿಪಟೂರು ಭಾಗದಲ್ಲಿ ಈ ಪೂರ್ವ ಮುಂಗಾರಿನಲ್ಲಿ ಹೆಸರು ಕಾಳು ಬಿತ್ತನೆ ಮಾಡುತ್ತಾರೆ. ಸಕಾಲದಲ್ಲಿ ಪೂರ್ವ ಮುಂಗಾರು ಮಳೆ ಬಂದರೆ ಈ ಪ್ರದೇಶದ ರೈತರಿಗೆ ಒಳ್ಳೆಯ ಆದಾಯ ಕೈಸೇರುತ್ತದೆ. ಈ ಬೆಳೆ ಮುಗಿದ ನಂತರ ಜುಲೈ, ಆಗಸ್ಟ್‌ನಲ್ಲಿ ಮತ್ತೆ ಮುಂಗಾರು ಬಿತ್ತನೆಯಾಗಿ ರಾಗಿ, ಜೋಳ, ಅವರೆ ಬಿತ್ತನೆ ಮಾಡುತ್ತಾರೆ. ಈಗ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆ ಆರಂಭಗೊಂಡಿರುವುದು ರೈತರಲ್ಲಿ ಸಂತಸ ಮೂಡಿದೆ.
ತುಮಕೂರು ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಪೂರ್ವ ಮುಂಗಾರು ಮಳೆಗೆ ಬಿತ್ತನೆ ಮಾಡಲು ಅನುವಾಗುವಂತೆ ಅಲ್ಲಿಲ್ಲಿ ಮಳೆ ಬಿದ್ದಿರುವ ಪರಿಣಾಮ ರೈತರು ಹೆಸರು, ಅಲಸಂದೆ ಸೇರಿ ವಿವಿಧ ಬೆಳೆಗಳನ್ನು ಬೆಳೆಯಲು ಭೂಮಿ ಹಸನು ಮಾಡುತ್ತಿದ್ದಾರೆ. ರೈತರಿಗೆ ಅನುಕೂಲವಾಗುವಂತೆ ಅಗತ್ಯವಿರುವ ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ● ರಾಜಸುಲೋಚನಾ, ಜಂಟಿ ನಿರ್ದೇಶಕಿ, ಕೃಷಿ ಇಲಾಖೆ
ರೈತರಿಗೆ ನೀಡುವ ಬೀಜಗಳು ಗುಣಮಟ್ಟದಿಂದ ಕೂಡಿರುವ ಬಗ್ಗೆ ಖಾತರಿಪಡಿಸಿಕೊಂಡು ಜಿಲ್ಲೆಯ 50 ರೈತ ಸಂಪರ್ಕ ಕೇಂದ್ರಗಳಲ್ಲದೆ, ಹೆಚ್ಚುವರಿ 8 ಮಾರಾಟ ಕೇಂದ್ರಗಳಿಗೆ ಸರಬರಾಜು ಮಾಡಬೇಕು. ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಿಸಲಾಗುವ ಬಿತ್ತನೆ ಬೀಜವನ್ನು ಅರ್ಹ ರೈತ ಫಲಾನುಭವಿಗಳಿಗೆ ವಿತರಿಸಬೇಕು. ಹೆಸರು, ತೊಗರಿ, ಶೇಂಗಾ, ಬಿತ್ತನೆ ಬೀಜಗಳ ಕೊರತೆ ಕಂಡುಬರದಂತೆ ಅಧಿಕಾರಿಗಳು ಕ್ರಮವಹಿಸಬೇಕು. – ವೈ.ಎಸ್.ಪಾಟೀಲ್, ತುಮಕೂರು ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.