ಮಹಿಳೆಯರ ಬದುಕಿಗೆ ಅಕ್ಕಮಹಾದೇವಿ ಆದರ್ಶ
Team Udayavani, Apr 18, 2022, 3:35 PM IST
ತಿಪಟೂರು: ಸಮಾಜದಲ್ಲಿ ಮಹಿಳೆಯರಿಗೂ ಪುರುಷರಷ್ಟೇ ಸರಿಸಮಾನ ಸ್ಥಾನಮಾನ ಕಲ್ಪಿಸ ಬೇಕೆಂದು 12ನೇ ಶತಮಾನದಲ್ಲಿಯೇ ಹೋರಾಟ ಮಾಡಿದ ಧೀರ ವನಿತೆ ಅಕ್ಕಮಹಾದೇವಿಯು ಇಂದಿನ ಮಹಿಳೆಯರ ಬದುಕಿಗೆ ಆದರ್ಶಪ್ರಾಯ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಂ.ಬಸವರಾಜಪ್ಪ ತಿಳಿಸಿದರು.
ನಗರದ ಪಿಜಿಎಂ ಕಲ್ಯಾಣ ಮಂಟಪದಲ್ಲಿ ಅಕ್ಕಮಹಾದೇವಿ ಸಮಾಜ ಹಾಗೂ ತಾಲೂಕು ಕಸಾಪ ಆಶ್ರಯದಲ್ಲಿ ಏರ್ಪಡಿಸಿದ್ದ ಅಕ್ಕಮಹಾದೇವಿ ಜಯಂತಿ ಹಾಗೂ ವಚನ ಗಾಯನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾನ್ಯ ಕುಟುಂಬದಿಂದ ಜನಿಸಿದ ಅಕ್ಕಮಹಾದೇವಿಯು ಚಿಕ್ಕ ವಯಸ್ಸಿನಲ್ಲಿಯೇ ರಾಜನನ್ನು ಮದುವೆಯಾಗಿ ವೈಭೋಗದ ಜೀವನ ಬಿಟ್ಟು ಸಮಾಜದಲ್ಲಿದ್ದ ದೇವ ದಾಸಿ, ವಿಧವಾ ಪದ್ಧತಿ, ಸತಿಸಹಗಮನ ಪದ್ಧತಿ ಗಳಂತಹ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಲು ಕಲ್ಯಾಣಕ್ರಾಂತಿಯ ಮೂಲಕ ಹೋರಾಟಕ್ಕಿಳಿದರು.
ಸಮಾಜದಲ್ಲಿ ಸಾಮರಸ್ಯ ಮೂಡಿಸಲು, ಅಂಕುಡೊಂಕುಗಳನ್ನು ತಿದ್ದಲು ಶ್ರಮಿಸಿದ ಅಕ್ಕಮಹಾ ದೇವಿಯವರ ಹೆಸರು ಇತಿಹಾಸದ ಪುಟದಲ್ಲಿ ಉಳಿದುಕೊಂಡಿದ್ದು, ಅವರ ಆದರ್ಶಗಳು ಇಂದಿನ ಮಹಿಳೆಯರಿಗೆ ದಾರಿದೀಪವಾಗಿದೆ ಎಂದರು.
ಪ್ರಾಂಶುಪಾಲ ಎಂ.ಡಿ.ಶಿವಕುಮಾರ್ ಅಕ್ಕನ ವಚನಗಳಲ್ಲಿ ಸ್ತ್ರೀ ಸ್ವಾತಂತ್ರ್ಯ ಎಂಬ ವಿಷಯ ಕುರಿತು ಉಪನ್ಯಾಸ ನೀಡುತ್ತಾ, 12ನೇ ಶತಮಾನದ ಕರ್ನಾಟಕ ಇತಿಹಾಸದಲ್ಲಿ ಸುವರ್ಣಯುಗ. ಬಸವಣ್ಣ, ಅಲ್ಲಮಪ್ರಭು, ಸಿದ್ದರಾಮಣ್ಣ, ಚೆನ್ನಬಸವಣ್ಣನಂತಹ ಶಿವಶರಣರು ಸಾಹಿತ್ಯದ ಮೂಲಕ ಕ್ರಾಂತಿ ಯನ್ನುಂಟ ಮಾಡಿದರು. ಕಲ್ಯಾಣಕ್ಕೆ ಬಂದು ಬಸವಣ್ಣನವರಂತಹ ಶಿವಶರಣರೊಡಗೂಡಿ ಸ್ತ್ರೀ ಸಮಾನತೆ, ಜಾತಿ, ಲಿಂಗ ತಾರತಮ್ಯದ ವಿರುದ್ಧ ಹೋರಾಡಿದರು.
ಸಮಾಜ ದಲ್ಲಿ ಮಹಿಳೆಯರು ಯಾವ ರೀತಿಯಲ್ಲಿ ಜೀವನ ನಡೆಸಬೇಕು ಎನ್ನುವ ಜೀವನಾದರ್ಶಗಳನ್ನು ಸಾರಿ ಸಮಾಜಕ್ಕೆ ತಿಳಿ ಹೇಳುವ ಮುಖಾಂತರ ಪ್ರೇರಕರಾಗಿದ್ದರು ಎಂದು ಹೇಳಿ ದರು. ಅಧ್ಯಕ್ಷತೆ ವಹಿಸಿದ್ದ ಅಕ್ಕಮಹಾದೇವಿ ಸಮಾಜದ ಅಧ್ಯಕ್ಷೆ ನಾಗರತ್ನಮ್ಮ ಮಾತನಾಡಿ, ಶಿವಶರಣೆ ಅಕ್ಕಮಹಾದೇವಿಯಂತೆ ಮಹಿಳೆಯರು ಧೈರ್ಯ ಮತ್ತು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ನಮ್ಮ ಸಮಾಜವು ಜಯಂತಿ ಆಚರಣೆಗೆ ಸೀಮಿತವಾಗದೆ ಹಲವು ಸಮಾಜಮುಖೀ ಕಾರ್ಯಗಳನ್ನು ಮಾಡು ತ್ತಿದೆ ಎಂದರು.
ಈ ಸಂದರ್ಭದಲ್ಲಿ ವಚನ ಗಾಯನ ಸ್ಪರ್ಧೆ ಏರ್ಪಡಿಸಲಾಗಿತ್ತು. ಸಮಾಜದ ಮಹಿಳೆ ಯರು ಬಸವಣ್ಣ, ಅಕ್ಕಮಹಾದೇವಿ ಹೀಗೆ ವಚನಕಾರರ ವಚನಗಳನ್ನು ಪ್ರಸ್ತತ ಪಡಿಸಿದರು. ಕಸಪಾ ಕಾರ್ಯದರ್ಶಿ ಮಂಜಪ್ಪ, ನಿವೃತ್ತ ಶಿಕ್ಷಕ ಸೋಮಶೇಖರ್, ಸಮಾಜ ಸೇವಕಿ ಸ್ವರ್ಣಗೌರಿ, ಗಾಯಕಿ ಹೇಮಾ ಬಸವರಾಜು, ಶಿಕ್ಷಕಿ ಉಮಾ, ಮುಕ್ತಾ ತಿಪ್ಪೇಶ್, ವೇದ ಸುರೇಶ್ ಸೇರಿದಂತೆ ಸಮಾಜದ ಮಹಿಳೆಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.