ಕಾಡು ಪ್ರಾಣಿಗಳ ದಾಳಿ ಹೆಚ್ಚಳ; ಜನರಲ್ಲಿ ಆತಂಕ


Team Udayavani, Oct 19, 2019, 6:11 PM IST

tk-tdy-2

ತುಮಕೂರು: ಮಿತಿ ಮೀರಿದ ಗಣಿಗಾರಿಕೆಯಿಂದ ಕಾಡು ನಾಶವಾಗುತ್ತಿರುವುದರಿಂದ ಕಾಡು ಪ್ರಾಣಿಗಳು ಆಹಾರ ಅರಸಿ ಗ್ರಾಮಗಳಿಗೆ ಬರುವುದು ಸಾಮಾನ್ಯವಾಗಿದೆ ಎಂಬುದಕ್ಕೆ ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯ ಬನ್ನಿಕುಪ್ಪೆ ಸಮೀಪ ನಡೆದ ಘಟನೆ ಸಾಕ್ಷಿ.

ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯ ಬನ್ನಿಕುಪ್ಪೆ ಸಮೀಪದ ಅರಣ್ಯಕ್ಕೆ ಹೊಂದಿಕೊಂಡಿರುವ ಜಮೀನಿನಲ್ಲಿ ಲಕ್ಷ್ಮಮ್ಮ (60) ಜಾನುವಾರು ಮೇಯಿಸಲು ಹೋಗಿದ್ದಾಗ ದಾಳಿ ಮಾಡಿ ಕೊಂದಿದ್ದು, ಮನುಷ್ಯನ ರಕ್ತದ ರುಚಿ ನೋಡಿರುವ ಚಿರತೆ ಮತ್ತೆ ಜನರ ಮೇಲೆ ದಾಳಿ ಮಾಡುತ್ತದೆ ಎನ್ನುವ ಆತಂಕ ಜನರಲ್ಲಿ ಮೂಡಿದೆ.

ಕಾಡು ನಾಶದಿಂದ ಕಾಡಿನಲ್ಲಿರುವ ಪ್ರಾಣಿಗಳು ಆಹಾರ ಹುಡುಕಿಕೊಂಡು ಗ್ರಾಮಗಳತ್ತ ಬರುತ್ತಿದ್ದು, ಹೊಲ ತೋಟಗಳಲ್ಲಿ ಕೆಲಸ ಮಾಡಲು ರೈತರು ಭಯಭೀತರಾಗುವ ಸ್ಥಿತಿ ಜಿಲ್ಲೆಯಲ್ಲಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ಚಿರತೆ, ಕುರಿ, ನಾಯಿಗಳ ಮೇಲೆ ದಾಳಿ ಮಾಡಿ ರಕ್ತ ಹೀರುತಿತ್ತು. ಘಟನೆಯಿಂದ ಈ ಭಾಗದ ರೈತರು ತೀವ್ರ ಆತಂಕಗೊಂಡಿದ್ದು, ನರಭಕ್ಷಕ ಚಿರತೆ ಹಿಡಿಯಲು ಅರಣ್ಯ ಸಿಬ್ಬಂದಿ ಟೊಂಕ ಕಟ್ಟಿ ನಿಂತಿದ್ದಾರೆ.

ದಾಳಿ ಮಾಡಿದ್ದ ಜಾಗಕ್ಕೆ ಮತ್ತೆ ಚಿರತೆ ಬರುವ ಅಂದಾಜಿನಲ್ಲಿ ಎರಡು ಬೋನು ಇಟ್ಟು ಅರಣ್ಯ ಇಲಾಖೆ ಅಧಿಕಾರಿಗಳು ಕಾಯುತ್ತಿದ್ದಾರೆ. ಚಿರತೆ ಹಿಡಿಯಲು ಅನುಮತಿಯನ್ನೂ ಪಡೆದಿದ್ದಾರೆ. ಅರಣ್ಯ ಇಲಾಖೆಯವರೂ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ ಸಂಜೆ ನಂತರ ಜಮೀನುಗಳಿಗೆ ಹೋಗಬಾರದು ಎಂದು ಸೂಚನೆ ನೀಡಿದ್ದಾರೆ. ನರಭಕ್ಷಕ ಚಿರತೆ ಹಿಡಿಯಲು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಆಗಿಂದಾಗ್ಗೆ ಕಾಡಾನೆಗಳು ಬಂದು ಆತಂಕ ಸೃಷ್ಟಿಸುತಿತ್ತು. ಆದರೆ ಈಗ ಗ್ರಾಮೀಣ ಪ್ರದೇಶದಲ್ಲಿ ಚಿರತೆಗಳ ಕಾಟ ಹೆಚ್ಚುತ್ತಿದೆ.

ಈ ಹಿಂದೆ ತಿಪಟೂರು ತಾಲೂಕಿನಲ್ಲಿ ಮಗುವಿನ ಮೇಲೆ ಚಿರತೆ ದಾಳಿ ಮಾಡಿತ್ತು. ಕೊರಟಗೆರೆ, ಚಿಕ್ಕನಾಯಕನಹಳ್ಳಿ, ಕುಣಿಗಲ್‌, ತಿಪಟೂರು ತಾಲೂಕು ಸೇರಿ ಇತರೆ ಭಾಗಗಳಲ್ಲಿ ಚಿರತೆ ಕಾಟ ದಿಂದ ಜನರು ನೊಂದಿದ್ದರು. ಕೊರಟಗೆರೆ ತಾಲೂಕಿನಲ್ಲಿ ಇತ್ತೀಚೆಗೆ 2 ದಿನಗಳಲ್ಲಿ 3 ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ ಅಧಿಕಾರಿಗಳು ಬೇರೆಕಡೆ ಸ್ಥಳಾಂತರಿಸಿದ್ದರು.

ಆರು ವರ್ಷಗಳಲ್ಲಿ ಮೂರು ಬಾರಿ ಚಿರತೆ ನಗರಕ್ಕೆ ಬಂದು ಜನರಲ್ಲಿ ಭಯ ಉಂಟುಮಾಡಿದೆ. ನಗರದ ಸಿದ್ಧಾರ್ಥ ತಾಂತ್ರಿಕ ಮಹಾ ವಿದ್ಯಾಲಯಕ್ಕೆ ನುಗ್ಗಿದ್ದ ಚಿರತೆಗಳು ಅಲ್ಲಿನ ವಿದ್ಯಾರ್ಥಿಗಳು ಮತ್ತು ನಗರದ ನಾಗರಿಕರನ್ನು ಬೆಚ್ಚಿ ಬೀಳುವಂತೆ ಮಾಡಿದ್ದವು. ಆ ನಂತರ ಹನುಮಂತಪುರದಲ್ಲಿ ಚಿರತೆ ಕಂಡು ಬಂದಿತ್ತು. 2018ರ ಜ.20ರಂದು ತುಮಕೂರಿನ ಜಯನಗರದ ಮನೆಗೆ ಚಿರತೆ ನುಗ್ಗಿ ಅವಾಂತರ ಸೃಷ್ಟಿಸಿತ್ತು. ರಂಗನಾಥ್‌ ಮನೆಗೆ ದಿಢೀರನೆ ನುಗ್ಗಿದ ಪರಿಣಾಮ ಆತಂಕಗೊಂಡ ಅತ್ತೆ, ಸೊಸೆ ಮನೆಯ ಬಾತ್‌ ರೂಂನಲ್ಲಿ ಸೇರಿಕೊಂಡು ಪ್ರಾಣ ಉಳಿಸಿ ಕೊಂಡಿದ್ದರು. ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಾತ್‌ ರೂಂ ಕಿಟಕಿ ಹೊಡೆದು ಅತ್ತೆ ಸೊಸೆಯನ್ನು ರಕ್ಷಿಸಿದ್ದರು. ಸತತ ಕಾರ್ಯಚರಣೆ ನಡೆಸಿ ಚಿರತೆಗೆ ಅರಿ‌ಳಿಕೆ ಮದ್ದು ನೀಡಿ ಮನೆಯೊಳಗೆ ಅಡಗಿ ಕುಳಿತಿದ್ದ ಚಿರತೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು.

 

-ಚಿ.ನಿ. ಪುರುಷೋತ್ತಮ್‌

ಟಾಪ್ ನ್ಯೂಸ್

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

4-pavagada

Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು

1-pavagada

Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.